ನವದೆಹಲಿ: ಕರ್ನಾಟಕದಲ್ಲಿ ಉಂಟಾದ ಹಿಜಾಬ್ ವಿವಾದದ (Hijab Row) ಕುರಿತು ಸುಪ್ರೀಂ ಕೋರ್ಟ್ ಎಂಟನೇ ದಿನದ ವಿಚಾರಣೆ ನಡೆಸಿದೆ. ರಾಜ್ಯದಲ್ಲಿ ಏಕೆ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಬೇಕು ಎನ್ನುತ್ತಿದ್ದಾರೆ ಎಂಬುದನ್ನು ಕರ್ನಾಟಕ ಸರ್ಕಾರವು ಕೋರ್ಟ್‌ಗೆ ಮಾಹಿತಿ ನೀಡಿದೆ. “ಮೂಲಭೂತವಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದಿಂದ ಪ್ರೇರೇಪಿತರಾಗಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಬೇಕು ಎಂದು ಕೋರ್ಟ್ ಮೊರೆ ಹೋಗಿದ್ದಾರೆ” ಎಂದಿದೆ.
ವಿಚಾರಣೆ ಆರಂಭವಾದಾಗಿನಿಂದ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈಗ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಂಗಳವಾರ ವಾದ ಮಂಡಿಸಿದರು. “ಪಿಎಫ್‌ಐ ಮೂಲಭೂತವಾದಿ ಸಂಘಟನೆ ಪ್ರಭಾವದಿಂದಾಗಿ ವಿದ್ಯಾರ್ಥಿನಿಯರು ರಾಜ್ಯ ಸರ್ಕಾರದ ನಿರ್ಧಾರ ಹಾಗೂ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ” ಎಂದು ಮಾಹಿತಿ ನೀಡಿದರು.
“ಜನರ ಧಾರ್ಮಿಕ ಭಾವನೆಗಳನ್ನು ಕೆದಕುವುದು ಪಿಎಫ್‌ಐ ಉದ್ದೇಶವಾಗಿದೆ. ಹಾಗಾಗಿಯೇ ಪ್ರಸಕ್ತ ವರ್ಷದಲ್ಲಿ ಪಿಎಫ್‌ಐ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿತ್ತು” ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತು.
ಇದನ್ನೂ ಓದಿ | Hijab Row | ಮೋದಿ ಪೇಟ, ಜೀನ್ಸ್, ನೆಹರು, ಇವು ಹಿಜಾಬ್ ವಿಚಾರಣೆ ವೇಳೆ ಪ್ರಸ್ತಾಪವಾದ ವಿಷಯಗಳು!