Site icon Vistara News

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

subramanian swamy

ನವದೆಹಲಿ: ಸ್ವಪಕ್ಷ ನಾಯಕರು, ಪ್ರಧಾನಿ ಮೋದಿ(PM Narendra Modi) ವಿರುದ್ಧವೇ ಅಚ್ಚರಿಕೆಯ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ(BJP Leader) ಸುಬ್ರಮಣಿಯನ್‌ ಸ್ವಾಮಿ(Subramanian Swamy) ಮತ್ತೆ ಸದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆ(Lok Sabha Elections 2024)ಯ ಆರನೇ ಹಂತದ ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ವೋಟ್‌ ಮಾಡಿರೋದಾಗಿ ಬಹಿರಂಗಪಡಿಸಿದ್ದಾರೆ. ಮತದಾನ ಅನ್ನೋದು ಅತ್ಯಂತ ಗೌಪ್ಯ ವಿಚಾರ. ಅದಾಗ್ಯೂ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ತಾವು ಯಾರಿಗೆ ಮತ ಚಲಾಯಿಸಿದ್ದು ಮತ್ತು ಆ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಮೋದಿಯನ್ನು ಬೈಯುತ್ತಲೇ ಅವರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ.

ಸ್ವಾಮಿಯ ಟ್ವೀಟ್‌ನಲ್ಲಿ ಏನಿದೆ?

ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮತದಾನಕ್ಕೆ ಎರಡು ದಿನ ಮೊದಲೂ ಇಂತಹದ್ದೇ ಒಂದು ಪೋಸ್ಟ್‌ ಮಾಡಿದ್ದ ಅವರು ಹರ್ಷ್‌ ಮಲ್ಹೋತ್ರಾ ಅವರನ್ನು ಹೊಗಳಿದ್ದರು. “ಇದೇ ಬರುವ ಶನಿವಾರ ಬೆಳಗ್ಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಮತ ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ. ಅವರೊಬ್ಬ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಇದೆ. ಸಂಸದರಾಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ನಾನು ಪೂರ್ವ ನಿಜಾಮುದ್ಧೀನ್‌ ಪ್ರದೇಶದಲ್ಲಿ ವಾಸವಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಸ್ವಾಮಿಯವರ ಟ್ವೀಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದು, ಶಾಹಿ ಹಾಕಿರುವ ಬೆರಳಿನೊಂದಿಗೆ ಫೊಟೋ ತೆಗೆದು ಅಪ್‌ಲೋಡ್‌ ಮಾಡಿ ಎಂದು ಅನೇಕ ಮನವಿ ಮಾಡಿದ್ದಾರೆ.

ಈ ಹಿಂದೆ ಸುಬ್ರಮಣಿಯನ್‌ ಸ್ವಾಮಿ, ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ, ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Exit mobile version