Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌ - Vistara News

ದೇಶ

Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Sudha Murthy : ಹೆಮ್ಮೆಯ ಕನ್ನಡತಿ, ಸಮಾಜಸೇವಕಿ ಸುಧಾ ಮೂರ್ತಿ ಅವರು ರಾಜ್ಯ ಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಈ ನಡೆ ಎಲ್ಲೆಡೆ ಸಂಭ್ರಮಕ್ಕೆ ಕಾರಣವಾಗಿದೆ.

VISTARANEWS.COM


on

Sudha Murthy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ (Sudha Murthy) ಅವರು ರಾಜ್ಯಸಭೆ ಸದಸ್ಯರಾಗಿ (Rajya sabha Member) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು (Sudha Murthy Takes oath in Kannada) ಓದುವ ಮೂಲಕ ಮೆಚ್ಚುಗೆ ಗಳಿಸಿದರು.

ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ಇನ್ಫೋಸಿಸ್‌ ಸ್ಥಾಪನೆಯಲ್ಲಿ ಜತೆಯಾಗಿದ್ದ, ಸುಧಾಮೂರ್ತಿ ಅವರ ಜೀವನ ಸಂಗಾತಿ ಎನ್‌.ಆರ್‌. ನಾರಾಯಣ ಮೂರ್ತಿ (NR Narayanamurthy) ಅವರು ಕೂಡಾ ಇದ್ದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾರ್ಚ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಧಾ ಮೂರ್ತಿ ಅವರನ್ನು ರಾಜ್ಯಸಭೆ ನಾಮಕರಣ ಮಾಡಲಾಗಿರುವ ಸಂಗತಿಯನ್ನು ಖುಷಿಯಿಂದ ಹಂಚಿಕೊಂಡಿದ್ದರು.

“ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂಬ ಮಾಹಿತಿಯನ್ನು ನಿಮ್ಮ ಜತೆ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ಸಮಾಜಸೇವೆ, ಪರೋಪಕಾರ, ಶಿಕ್ಷಣಕ್ಕೆ ಕೊಡುಗೆ ಸೇರಿ ಹಲವು ದಿಸೆಯಲ್ಲಿ ಸುಧಾ ಮೂರ್ತಿ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಅವರ ಉಪಸ್ಥಿತಿಯು ನಾರಿಶಕ್ತಿಯ ದ್ಯೋತಕವಾಗಿರಲಿದೆ. ಹಾಗೆಯೇ, ಸಂಸತ್‌ನಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳವಾಗುತ್ತಿರುವುದು ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಸುಧಾ ಮೂರ್ತಿ ಅವರಿಗೆ ಶುಭವಾಗಲಿ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

Dr Sudha Murthy : ಸುಧಾ ಮೂರ್ತಿ, ಇವರು ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿ!

ಇನ್ಫೋಸಿಸ್‌ (Infosys Company) ಎಂಬ ಮಹಾಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಹೆಗಲೆಣೆಯಾಗಿ ದುಡಿದ, ಪರೋಪಕಾರ, ಸಜ್ಜನಿಕೆ, ವಿನಮ್ರತೆಗೆ ಮತ್ತೊಂದು ಹೆಸರಾಗಿ, ಎಲ್ಲರಿಂದಲೂ ಅಮ್ಮ ಎಂದೇ ಕರೆಸಿಕೊಳ್ಳುವ ಡಾ. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ (Nominated to Rajya sabha) ಮಾಡಲಾಗಿದೆ. ಸರಳತೆ, ವಿನಮ್ರತೆಗಳನ್ನೇ ಆವಾಹಿಸಿಕೊಂಡ ಡಾ. ಸುಧಾ ಮೂರ್ತಿ (Dr Sudha Murthy) ಎಂಬ ಸಾತ್ವಿಕ ಸಾಧಕಿಯ ಬದುಕಿನ ಸಾಧನೆಯ ಹೆಜ್ಜೆ ಗುರುತುಗಳು ಇಲ್ಲಿವೆ.

Sudha Murthy ಎಂಜಿನಿಯರಿಂಗ್‌ನಲ್ಲಿ ಚಿನ್ನದ ಪದಕ ಪಡೆದ ಏಕೈಕ ಮಹಿಳಾ ವಿದ್ಯಾರ್ಥಿನಿ

ಸುಧಾ ಮೂರ್ತಿ (ಹಿಂದೆ ಸುಧಾ ಕುಲಕರ್ಣಿ- Sudha Kulkarni)) ಅವರು ಹುಟ್ಟಿದ್ದು 1950ರ ಆಗಸ್ಟ್‌ 19ರಂದು. ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಗ್ರಾಮದ ಕುಲಕರ್ಣಿ ಮನೆತನ ಇವರದು. ಇವರ ತಂದೆ ರಾಮಚಂದ್ರ ಕುಲಕರ್ಣಿಯವರು ಹುಬ್ಬಳ್ಳಿಯ ಕೆ.ಎಂ.ಕಾಲೇಜಿನ ಸ್ತ್ರೀ ರೋಗ ತಜ್ಞರು ಮ್ತು ಪ್ರಾಧ್ಯಾಪಕರಾಗಿದ್ದರು. ತಾಯಿ ವಿಮಲಾ ಕುಲಕರ್ಣಿಯವರು ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸಿದ್ದ ಸಾಧಕಿ.

ರಾಮಚಂದ್ರ ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಯ ನಾಲ್ಕು ಮಕ್ಕಳಲ್ಲಿ ಇವರು ಒಬ್ಬರು ಸುಧಾ. ಹುಟ್ಟೂರಾದ ಶಿಗ್ಗಾಂವಿಯಲ್ಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದ ಅವರು‌ ಎಸ್ಸೆಸ್ಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದು ಟಾಪರ್‌ ಆಗಿದ್ದರು.

1972ರಲ್ಲಿ ಹುಬ್ಬಳ್ಳಿಯ ಬಿ.ವಿ.ಬಿ. ಕಾಲೇಜ್‌ ಆಫ್ ಎಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ ಮಾಡಿದ ಅವರು, 1974ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ಪೂರೈಸಿದರು. ಬೆಂಗಳೂರಿನ ಟಾಟಾ ಇನ್‌ಸ್ಟಿಟ್ಯೂಟ್‌ನಲ್ಲಿ ಎಮ್.ಇ (ಕಂಪ್ಯೂಟರ್ ಸೈನ್ಸ್) ಪದವಿ ಗಳಿಸಿದರು. ಟಾಟಾ ಸಂಸ್ಥೆಯಲ್ಲಿ ಚಿನ್ನದ ಪದಕ ಗಳಿಸಿದ ಏಕೈಕ ಮಹಿಳಾ ವಿದ್ಯಾರ್ಥಿನಿ ಇವರು.

Dr Sudha murthy 11
Sudhamurty ddd

ಟಾಟಾ ಕಂಪನಿಯಲ್ಲಿ ಉದ್ಯೋಗ ಪಡೆದ ಮೊದಲ ಮಹಿಳೆ!

ಸುಧಾ ಮೂರ್ತಿ ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಎಂಜಿನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಮುಂದೆ ಅವರು ಪುಣೆಯ ವಾಲಚಂದ್‌ ಗ್ರೂಪ್ ಆಫ್ ಇಂಡಸ್ಟ್ರೀಸ್‌ನಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ಆಗಿದ್ದರು.

ಇನ್ಫೋಸಿಸ್‌ ಎಂಬ ಮಹಾ ಕನಸು ನನಸಾದ ಬಗೆ..

1970ರ ಫೆಬ್ರವರಿ 10ರಂದು ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಅವರ ವಿವಾಹ ನಡೆಯಿತು. ತಾವು ದುಡಿದ ಅಷ್ಟೂ ಹಣವನ್ನು, ತಮ್ಮಲ್ಲಿದ್ದ ಚಿನ್ನಾಭರಣಗಳೆಲ್ಲವನ್ನೂ ಮಾರಿ ಇನ್ಫೋಸಿಸ್‌ ಎಂಬ‌ ಸಾಫ್ಟ್‌ವೇರ್‌ ಸಂಸ್ಥೆಯನ್ನು ಕಟ್ಟಿದರು. ತಾವು ಹಗಲು ರಾತ್ರಿ ದುಡಿದು ಅದನ್ನು ಎತ್ತರಕ್ಕೆ ಬೆಳೆಸಿದರು. ಲಕ್ಷಾಂತರ ಮಂದಿಗೆ ಉದ್ಯೋಗ ನೀಡುವಷ್ಟು ಮಟ್ಟಕ್ಕೆ ಬೆಳೆಸಿದರು.

Sudhamurty ddd

ಸಾರ್ವಜನಿಕ ಸೇವೆಯಲ್ಲಿ ಮಮತೆಯ ತಾಯಿಯಾದರು

ಎಂಜಿನಿಯರ್‌ ಆಗಿದ್ದರೂ, ದೊಡ್ಡ ಸಂಸ್ಥೆಯನ್ನೇ ಕಟ್ಟಿದರೂ ಅವರ ತುಡಿತ ಇದ್ದಿದ್ದು ಸಮಾಜಸೇವೆಯಲ್ಲಿ. ಹೀಗಾಗಿ ಅವರು 1996ರಲ್ಲಿ ಸಾರ್ವಜನಿಕ ಚಾರಿಟೇಬಲ್ ಟ್ರಸ್ಟ್ ಅನ್ನು ಸ್ಥಾಪಿಸಿದರು. ಸುಧಾ ಮೂರ್ತಿ ಅವರು ದೇವದಾಸಿಯರ ಬದುಕಿನಲ್ಲಿ ಬದಲಾವಣೆ ಮಾಡಿದರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೆಲಸ ಮಾಡಿದರು. ಅವರ ಟ್ರಸ್ಟ್ ಇದುವರೆಗೆ 2,300 ಮನೆಗಳನ್ನು ನಿರ್ಮಿಸಿದೆ. ಟ್ರಸ್ಟ್​ ಮೂಲಕ ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಇದುವರೆಗೆ 70,000 ಗ್ರಂಥಾಲಯಗಳನ್ನು ನಿರ್ಮಾಣಮಾಡಿದ್ದಾರೆ. ಇವರ ಸಂಸ್ಥೆ ಇದುವರೆಗೆ 16,000 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿದೆ.

Sudhamurty ddd

ಅಪೂರ್ವ ಸಾಹಿತ್ಯ ಸೇವೆ, ಅವರು ಪುಸ್ತಕಗಳಿಂದಲೇ ಗಳಿಸಿದ್ದು 300 ಕೋಟಿ

ಸುಧಾ ಮೂರ್ತಿ ಅವರು ಸಾಧಕಿ, ಸಮಾಜಸೇವಕಿ ಮಾತ್ರವಲ್ಲ ಅಪರೂಪದ ಲೇಖಕಿ, ಬರಹಗಾರ್ತಿ. ಅವರು ಕನ್ನಡ ಮತ್ತು ಇಂಗ್ಲೀಷ್​ ಭಾಷೆಗಳಲ್ಲಿ ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ. ನಿಜವೆಂದರೆ, ಅವರು ಈಗಾಗಲೇ ಪುಸ್ತಕಗಳಿಂದಲೇ 300 ಕೋಟಿ ರೂ. ಆದಾಯ ಗಳಿಸಿದ್ದಾರೆ.

Sudha Murthy ಸುಧಾ ಮೂರ್ತಿಯವರ ಕನ್ನಡ ಕೃತಿಗಳು ಇವು

ಹಕ್ಕಿಯ ತೆರದಲಿ, ಶಾಲಾ ಮಕ್ಕಳಿಗಾಗಿ ಕಂಪ್ಯೂಟರ್, ಕಾವೇರಿಯಿಂದ ಮೇಕಾಂಗಿಗೆ, ಡಾಲರ್ ಸೊಸೆ, ಮಹಾಶ್ವೇತೆ, ಅತಿರಿಕ್ತೆ, ಪರಿಧಿ, ಮನದ ಮಾತು (ಅಂಕಣ ಬರಹಗಳ ಸಂಗ್ರಹ), ಗುಟ್ಟೊಂದು ಹೇಳುವೆ, ಸಾಮಾನ್ಯರಲ್ಲಿ ಅಸಾಮಾನ್ಯರು, ದಿ ಸರ್ಪೆಂಟ್ಸ್ ರಿವೇಂಜ್, ತುಮುಲ, ಋಣ, ಯಶಸ್ವಿ, ಸಾಫ್ಟ್ ಮನ, ಏರಿಳಿತದ ದಾರಿಯಲ್ಲಿ, ನೂನಿಯ ಸಾಹಸಗಳು

Sudhamurty ddd

ಸುಧಾ ಮೂರ್ತಿಯವರ ಇಂಗ್ಲಿಷ್‌ ಪುಸ್ತಕಗಳು

The Serpent’s Revenge, How I Taught My Grandmother to Read., Something Happened on the Way to Heaven, The Old Man and His God: Discovering the Spirit of India, The Day I Stopped Drinking Milk, Wise and Otherwise, Gently Falls the Bakula, The Accolades Galore, The Bird with Golden Wings: Stories of Wit and Magic, Dollar Bahu, Grandma’s Bag of Stories (children’s fiction), The Magic Drum And Other Favourite Stories (children’s stories), House of Cards
The Mother I Never Knew (two novellas), Three thousand stitches, The Man from the Egg
Here, There, Everywhere, Magic of the lost Temple, How the earth got its beauty

ಬ್ರಿಟನ್‌ ಪ್ರಧಾನಿಯ ಅತ್ತೆಯಾದರೂ ಕಿಂಚಿತ್ತೂ ಹಮ್ಮಿಲ್ಲ, ಬಿಮ್ಮಿಲ್ಲ!

ಇನ್ಫೋಸಿಸ್‌ ಕಟ್ಟಿದ ಗರಿಮೆಯ ಸುಧಾ ಮೂರ್ತಿ ಅವರಿಗೆ ಇಬ್ಬರು ಮಕ್ಕಳು. ಮಗ ರೋಹನ್‌ ಮೂರ್ತಿ ಮತ್ತು ಮಗಳು ಅಕ್ಷತಾ ಮೂರ್ತಿ. ಅಕ್ಷತಾ ಮೂರ್ತಿ ಅವರ ಗಂಡ ರಿಷಿ ಸುನಕ್‌ ಬ್ರಿಟನ್‌ ಪ್ರಧಾನಿ. ಇಷ್ಟೆಲ್ಲ ದೊಡ್ಡ ಹಿನ್ನೆಲೆ ಹೊಂದಿದ್ದರೂ ಸುಧಾ ಮೂರ್ತಿ ಸರಳತೆಯ ಸಾಕಾರ ಮೂರ್ತಿಯಾಗಿದ್ದಾರೆ. ಯಾವುದೇ ಆಭರಣ ಹಾಕಿಕೊಳ್ಳದೆ, ಕೇವಲ ಸರಳ ಸಾದಾ ಸೀರೆಯಲ್ಲಿ ಮಿಂಚುವ ಇವರು ಆಭರಣ ಖರೀದಿ ಮಾಡಿಯೇ ಇಲ್ಲವಂತೆ.

Sudhamurty ddd
Sudhamurty ddd

ಚೆನ್ನಾಗಿ ತಲೆ ಬಾಚಿ ಕಟ್ಟಿ, ಹೂವಿಟ್ಟುಕೊಂಡು, ದೊಡ್ಡದೊಂದು ತಿಲಕವಿಟ್ಟು ಪುಟಪುಟನೆ ನಡೆಯುವ ಇವರನ್ನು ನೋಡಿದರೆ ಎಲ್ಲರಿಗೂ ಅಮ್ಮನೋ, ಅಕ್ಕನೋ ಎಂಬ ಆಪ್ತ ಭಾವ. ಅವರೂ ಅಷ್ಟೆ ದೇವಾಲಯಗಳಿಗೆ ಹೋಗಿ ತರಕಾರಿ ಹೆಚ್ಚುತ್ತಾರೆ, ಭಜನೆ ಹೇಳುತ್ತಾರೆ, ಯಾವುದೋ ಅಂಗಡಿಗೆ ಹೋಗಿ ಖರೀದಿ ಮಾಡುತ್ತಾರೆ.. ಹೀಗೆ ಸರಳತೆಯಿಂದಲೇ ಬದುಕು ಸಾಗಿಸುವ ಅವರು ಸಾಧನೆ, ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿ.

ಸುಧಾ ಮೂರ್ತಿ ಅವರಿಗೆ ದೇಶವು ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ. ಇದೀಗ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡುವ ಮೂಲಕ ದೊಡ್ಡ ಗೌರವ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸುಧಾ ಮೂರ್ತಿ ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: Sudha Murty: ರಾಜ್ಯಸಭೆಗೆ ಕನ್ನಡತಿ ಸುಧಾ ಮೂರ್ತಿ ನಾಮನಿರ್ದೇಶನ; ನಾರಿ ಶಕ್ತಿ ಎಂದ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Encounter in Kupwara: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಕುಮ್ಕಾರಿ ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್.

VISTARANEWS.COM


on

Encounter in Kupwara
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ (Encounter in Kupwara). ಘಟನೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

ಜಿಲ್ಲೆಯ ಕುಮ್ಕಾರಿ (Kumkari) ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್. ಇಲ್ಲಿ ಭಯೋತ್ಪಾದಕರ ದಂಡು ಬೀಡು ಬಿಟ್ಟಿದೆ ಎನ್ನುವ ಖಚಿತ ಮಾಹಿತಿ ಮೇರೆ ಸೈನಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿದ್ದು, ಇದನ್ನು ಮಟ್ಟ ಹಾಕಲು ಯೋಧರು ನಿರತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಈಗಾಗಲೇ ಹಲವು ಭಯೋತ್ಪಾದಕರು ಹತರಾಗಿದ್ದಾರೆ.

ಜುಲೈ 24ರಂದು ಕುಪ್ವಾರಾ ಜಿಲ್ಲೆಯ ಕೌಟ್‌ನ ತ್ರಿಮುಖ್ ಟಾಪ್ ಬಳಿ ಸೇನಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಎನ್‌ಸಿಒ ನಿಯೋಜಿತ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಇನ್ನು ಜುಲೈ 18ರಂದು ಕುಪ್ವಾರಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಕೇರನ್‌ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದರು.

ಜಡ್ಡಾನ ಬಾಟಾ ಗ್ರಾಮದಲ್ಲಿ ಉಗ್ರರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆಗೆ ಬೆಳ್ಳಂಬೆಳಗ್ಗೆ 2 ಗಂಟೆಗೆ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಶೋಧ ಕಾರ್ಯದ ವೇಳೆ ಸರ್ಕಾರಿ ಶಾಲೆಯೊಳಗಿನ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು.

ಈ ಬಗ್ಗೆ ಜಮ್ಮುವಿನ ರಕ್ಷಣಾ ಇಲಾಖೆ ಪಿಆರ್‌ಒ ಪ್ರತಿಕ್ರಿಯಿಸಿ, ಉಧಂಪುರದ ಏರ್ ಫೋರ್ಸ್ ಸ್ಟೇಷನ್‌ನಿಂದ ಎಎಲ್‌ಎಚ್‌ನ ತ್ವರಿತ ಕ್ರಮವು ದೋಡಾದಲ್ಲಿ (ಜೆ&ಕೆ) ತೀವ್ರವಾಗಿ ಗಾಯಗೊಂಡ ಸೈನಿಕನ ಜೀವವನ್ನು ಉಳಿಸಿತ್ತು. ಸವಾಲಿನ ಹವಾಮಾನದ ಹೊರತಾಗಿಯೂ, ಉಧಮ್‌ಪುರದ ಕಮಾಂಡ್ ಆಸ್ಪತ್ರೆಯಲ್ಲಿ ಸಕಾಲಿಕ ವೈದ್ಯಕೀಯ ಆರೈಕೆಯನ್ನು ಖಾತರಿಪಡಿಸುವ ಮೂಲಕ ಸ್ಥಳಾಂತರಿಸುವಿಕೆ ಯಶಸ್ವಿಯಾಗಿದೆ. ಅವರ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ತಂಡಕ್ಕೆ ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿತ್ತು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

ನಾಲ್ವರು ಯೋಧರು ಹುತಾತ್ಮ

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಜುಲೈ 16ರ ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದರು. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದರು. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

Continue Reading

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading

ದೇಶ

Building Collapsed: 3 ಅಂತಸ್ತಿನ ಕಟ್ಟಡ ಕುಸಿತ; ಅವಶೇಷದ ಅಡಿಯಲ್ಲಿ ಹಲವರು ಸಿಕ್ಕಿ ಬಿದ್ದಿರುವ ಶಂಕೆ

Building Collapsed: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Building Collapsed
Koo

ಮುಂಬೈ: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ (Building Collapsed). ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು ಜಿ+3 ಕಟ್ಟಡ. ಈ ಕಟ್ಟಡ ಇರುವ ಶಹಬಾಜ್ ಗ್ರಾಮ ಬೇಲಾಪುರ ವಾರ್ಡ್ ವ್ಯಾಪ್ತಿಗೆ ಬರುತ್ತವೆ. ಕಟ್ಟಡದಲ್ಲಿ 13 ಫ್ಲ್ಯಾಟ್‌ಗಳಿವೆ. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೈಲಾಸ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಕ್ಷಿಸಲಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು 10 ವರ್ಷ ಹಳೆಯ ಕಟ್ಟಡ. ಯಾವ ಕಾರಣಕ್ಕಾಗಿ ಕುಸಿದಿದೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಅವರು ಎಚ್ಚರಿಸಿದ್ದಾರೆ.

ವಾರದ ಹಿಂದೆಯೂ ನಡೆದಿತ್ತು

ಕಳೆದ ವಾರ ನಾಲ್ಕು ಅಂತಸ್ತಿನ ಕಟ್ಟಡ(Building Collapsed)ವೊಂದು ಏಕಾಏಕಿ ಕುಸಿದು ಬಿದ್ದು, ಮಹಿಳೆಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮುಂಬೈ (Mumbai)ಯಲ್ಲಿ ನಡೆದಿತ್ತು. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರ ಮುಂಭಾಗದ ಭಾಗ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ಆ ಘಟನೆ ಮರೆಯಾಗುವ ಮುನ್ನ ಇನ್ನೊಂದು ದುರಂತ ಸಂಭವಿಸಿದೆ.

ನಾಲ್ಕು ಅಂತಸ್ತಿನ ರುಬಿನಿಸಾ ಮಂಜಿಲ್ ಕಟ್ಟಡದ ಎರಡು ಮತ್ತು ಮೂರನೇ ಮಹಡಿಯ ಭಾಗಗಳು ಬಾಲ್ಕನಿಯೊಂದಿಗೆ ಬೆಳಗ್ಗೆ ಕುಸಿದು ಬಿದ್ದಿದ್ದವು. ಕಟ್ಟಡ ಕುಸಿತದ ವೇಳೆ ಸುಮಾರು 35-40 ಮಂದಿ ಕಟ್ಟಡದಲ್ಲಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಅವಶೇಷಗಳಡಿಯಲ್ಲಿ ಕಾಲು ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಕಾಂಕ್ರೀಟ್ ಚಪ್ಪಡಿಗಳನ್ನು ಎತ್ತುತ್ತಿರುವ ದೃಶ್ಯ ಕಂಡು ಬಂದಿತ್ತು. ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗಳೊಂದಿಗೆ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು. ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಕಟ್ಟಡ ಕುಸಿದಿತ್ತು ಎನ್ನಲಾಗಿದೆ. ಇನ್ನು ಈ ಕಟ್ಟಡ ಅತ್ಯಂತ ಹಳೆಯ ಕಟ್ಟಡವಾಗಿರುವ ಕಾರಣ ಅದನ್ನು ಸಂಪೂರ್ಣವಾಗಿ ತೆರವು ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Continue Reading

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading
Advertisement
shiradi ghat train karnataka rian news
ಪ್ರಮುಖ ಸುದ್ದಿ15 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು20 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ34 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ38 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ48 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ48 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ1 hour ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ2 hours ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ2 hours ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ2 hours ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌