Site icon Vistara News

ನೂತನ ಚುನಾವಣಾ ಆಯುಕ್ತರಾಗಿ ಸುಖಬೀರ್‌ ಸಂಧು, ಜ್ಞಾನೇಶ್‌ ಕುಮಾರ್‌ ನೇಮಕ

Election Commissioners

Sukhbir Sandhu, Gyanesh Kumar Appointed As Election Commissioners

ನವದೆಹಲಿ: ಕೇಂದ್ರ ಸರ್ಕಾರವು (Central Government) ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದೆ. ಪಂಜಾಬ್‌ನ ಬಿ. ಸುಖಬೀರ್‌ ಸಂಧು (Sukhbir Sandhu) ಹಾಗೂ ಕೇರಳದ ಜ್ಞಾನೇಶ್‌ ಕುಮಾರ್‌ (Gyanesh Kumar) ಅವರನ್ನು ಚುನಾವಣಾ ಆಯುಕ್ತರನ್ನಾಗಿ (Election Commissioners) ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರಿರುವ ಆಯ್ಕೆ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ಚುನಾವಣಾ ಆಯುಕ್ತರ ನೇಮಕದ ಕುರಿತು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಆಯ್ಕೆ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್‌ ರಂಜನ್‌ ಚೌಧರಿ, “ಸುಖಬೀರ್‌ ಸಂಧು ಹಾಗೂ ಜ್ಞಾನೇಶ್‌ ಕುಮಾರ್‌ ಅವರು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸುಖಬೀರ್‌ ಸಂಧು ಹಾಗೂ ಜ್ಞಾನೇಶ್‌ ಕುಮಾರ್‌ ಅವರು ಐಎಎಸ್‌ ನಿವೃತ್ತ ಅಧಿಕಾರಿಗಳಾಗಿದ್ದಾರೆ. ಸುಖಬೀರ್‌ ಸಂಧು ಅವರು ಪಂಜಾಬ್‌ನವರಾದರೆ, ಜ್ಞಾನೇಶ್‌ ಕುಮಾರ್‌ ಅವರು ಕೇರಳದವರು ಎಂದು ತಿಳಿದುಬಂದಿದೆ. ಖಾಲಿ ಇರುವ ಎರಡು ಹುದ್ದೆಗಳಿಗೆ ಈಗ ಆಯುಕ್ತರನ್ನು ನೇಮಕ ಮಾಡಿದ ಕಾರಣ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಾಗತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ; ದ್ರೌಪದಿ ಮುರ್ಮುಗೆ ವರದಿ ಸಲ್ಲಿಸಿದ ಸಮಿತಿ, ಮುಂದೇನು?

ಆಯುಕ್ತರಾಗಿದ್ದ ಅರುಣ್ ಗೋಯೆಲ್ ಅವರ ಕೆಲ ದಿನಗಳ ಹಿಂದಷ್ಟೇ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರು. ಕಳೆದ ತಿಂಗಳು ಅನೂಪ್‌ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿಯಾಗಿದ್ದವು. ಅದರಲ್ಲೂ, ಚುನಾವಣೆ ಆಯೋಗವು ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿದ್ದು, ಇಬ್ಬರು ಆಯುಕ್ತರ ನೇಮಕವು ಅನಿವಾರ್ಯವಾಗಿತ್ತು. ಹಾಗಾಗಿ, ನರೇಂದ್ರ ಮೋದಿ ಅವರಿರುವ ಆಯ್ಕೆ ಸಮಿತಿ ಸಭೆಯು ಇಬ್ಬರು ಆಯುಕ್ತರನ್ನು ನೇಮಕ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version