ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ (Sunanda Pushkar death) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ, ದಿಲ್ಲಿ ನಗರ ಪೊಲೀಸರು ದಿಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಈ ಅರ್ಜಿ ವಿಚಾರಣೆ ನಡೆಸಲಿದ್ದಾರೆ.
ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ನಿಗೂಢವಾಗಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಶಶಿ ತರೂರ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಕಳೆದ ಆಗಸ್ಟ್‌ನಲ್ಲಿ ವಿಚಾರಣಾ ನ್ಯಾಯಾಲಯವು, ಸುನಂದಾ ಆತ್ಮಹತ್ಯೆಗೆ ಶಶಿ ತರೂರ್ ಅವರು ಪ್ರಚೋದನೆ ನೀಡಿದ್ದಾರೆಂಬ ಆರೋಪ ಕೈ ಬಿಟ್ಟು, ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಸುನಂದಾ ಅವರ ಸಾವಿಗೆ ಶಶಿ ಅವರೇ ಕಾರಣ ಎಂದು ಸಾಬೀತು ಪಡಿಸುವ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕೋರ್ಟ್ ಹೇಳಿತ್ತು.
ದಿಲ್ಲಿ ನಗರ ಪೊಲೀಸರು ಇದೀಗ ವಿಚಾರಣಾ ಕೋರ್ಟ್ ತೀರ್ಪು ಪ್ರಶ್ನಿಸಿ, ದಿಲ್ಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹಾಗಾಗಿ, ತಿರುವನಂತಪುರಂ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿರುವ ಶಶಿ ತರೂರ್ ಅವರಿಗೆ ಮತ್ತೆ ಸಂಕಟ ಎದುರಾಗಿದೆ.
ಇದನ್ನೂ ಓದಿ | Dr BR Ambedkar | ಅಂಬೇಡ್ಕರ್ ದೇಶದ ಮೊದಲ ಸ್ತ್ರೀವಾದಿ ನಾಯಕ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್