ನವದೆಹಲಿ: ಕೇಂದ್ರೀಯ ತನಿಖಾ ದಳ(CBI) ಕೇಂದ್ರ ಸರ್ಕಾರ(Union Government)ದ ನಿಯಂತ್ರಣದಲ್ಲಿ ಇಲ್ಲ ಎಂದು ಸರ್ಕಾರ ಸುಪ್ರೀಂಕೋರ್ಟ್(Supreme Court)ಗೆ ಸ್ಪಷ್ಟಪಡಿಸಿದೆ. ಸಿಬಿಐ ರಾಜ್ಯ ಸರ್ಕಾರದ ಯಾವುದೇ ಅನುಮತಿ ಪಡೆಯದೇ ಅನೇಕ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪಶ್ಚಿಮ ಬಂಗಾಳ(West Bengal) ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರದ ಪರ ವಕಾಲತ್ತು ವಹಿಸಿದ್ದ ಸಾಲಿಸಿಟರ್ ಜನರಲ್ ತುಷಾತ್ ಮೆಹ್ತಾ, ಸರ್ಕಾರ ಯಾವುದೇ ಕೇಸ್ ದಾಖಲಿಸಿಲ್ಲ. ಆದರೆ ಸಿಬಿಐ ಕೇಸ್ ದಾಖಲಿಸಿ ವಿಚಾರಣೆ ನಡೆಸುತ್ತಿದೆ. ಸಿಬಿಐ ಸರ್ಕಾರದ ಅಧೀನದಲ್ಲಿಲ್ಲ ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಇದ್ದ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಸಂವಿಧಾನದ 131ನೇ ವಿಧಿಯಡಿಯಲ್ಲಿ ಪಶ್ಚಿಮ ಬಂಗಾಳ ಈ ಮೊಕದ್ದಮೆ ಹೂಡಿದ್ದು, ರಾಜ್ಯದಲ್ಲಿ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡದೇ ಇದ್ದರೂ ಸಿಬಿಐ ತನ್ನ ತನಿಖೆ, ಎಫ್‌ಐಆರ್ ದಾಖಲು ಮಾಡುವುದನ್ನು ಮುಂದುವರೆಸಿದೆ. ಬಿಜೆಪಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಿಬಿಐಯನ್ನು ರಾಜಕೀಯವಾಗಿ ದುರ್ಬಳಕೆ ಮಾಡುತ್ತಿದೆ. ತಮ್ಮ ವಿರೋಧಿಗಳ ಮೇಲೆ ದಾಳಿ ನಡೆಸಿ, ಸುಳ್ಳು ಪ್ರಕರಣಗಳನ್ನು ದಾಖಲಿಸುವಂತೆ ಕೇಂದ್ರ ಸರ್ಕಾರ ಸಿಬಿಐಗೆ ಸೂಚನೆ ನೀಡುತ್ತಿದೆ. ವಿರೋಧಿಗಳನ್ನು ಹತ್ತಿಕ್ಕಲು ಸರ್ಕಾರ ಸಿಬಿಐಯನ್ನು ಬಳಸಿಕೊಳ್ಳುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಸರ್ಕಾರ ತನ್ನ ದೂರಿನಲ್ಲಿ ಆರೋಪಿಸಿತ್ತು. ಸಿಬಿಐ ರಾಜಕೀಯ ಪಕ್ಷಗಳ ಕೈಗೊಂಬೆ ಎಂಬ ಆರೋಪ ಮೊದಲಿನಿಂದಲೂ ಕೇಳಿಬರುತ್ತಿದೆ. ಹೀಗಾಗಿ 2013ರಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಸುಪ್ರೀಂಕೋರ್ಟ್, ಸಿಬಿಐಯನ್ನು ಪಂಜರದಲ್ಲಿರುವ ಗಿಣಿ ಎಂದು ಕರೆದಿತ್ತು.
ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಕೆಲವು ದಿನಗಳ ಹಿಂದೆ ಶೋಧ ನಡೆಸಿದ ಸಿಬಿಐ ಪೊಲೀಸ್ ಸೇವಾ ರಿವಾಲ್ವರ್, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಶಪಡಿಸಿಕೊಂಡಿತ್ತು. ಇವನ್ನು ಶಹಜಹಾನ್ ಶೇಖ್‌ನ ಸಹಚರನಿಗೆ ಸಂಬಂಧಿಸಿದ ಸ್ಥಳಗಳಿಂದ ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿದ ಸಿಬಿಐ ಪೊಲೀಸ್ ಸೇವಾ ರಿವಾಲ್ವರ್, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಶಪಡಿಸಿಕೊಂಡಿತ್ತು. ಇವನ್ನು ಶಹಜಹಾನ್ ಶೇಖ್‌ನ ಸಹಚರನಿಗೆ ಸಂಬಂಧಿಸಿದ ಸ್ಥಳಗಳಿಂದ ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶೋಧದಲ್ಲಿ ವೇಳೆ ಸಿಬಿಐ, ಬಾಂಬ್ ಪತ್ತೆ ದಳ, ರಾಷ್ಟ್ರೀಯ ಭದ್ರತಾ ಪಡೆ, ಕೇಂದ್ರ ಅರೆಸೇನಾ ಪಡೆ, ಪಶ್ಚಿಮ ಬಂಗಾಳ ಪೊಲೀಸರು ಭಾಗವಹಿಸಿದ್ದರು.
ಇದನ್ನೂ ಓದಿ:Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು
ಇ.ಡಿ ತಂಡವು ಕಳೆದುಕೊಂಡಿದ್ದ ಕೆಲವು ವಸ್ತುಗಳು ಮತ್ತು ಇತರ ಪ್ರಮುಖ ವಸ್ತುಗಳನ್ನು ಸಂದೇಶ್‌ಖಾಲಿಯಲ್ಲಿ ಶೇಖ್‌ನ ಸಹಚರರ ನಿವಾಸದಲ್ಲಿ ಬಚ್ಚಿಡಲಾಗಿದೆ ಎನ್ನುವ ಮಾಹಿತಿ ಮೇರೆಗೆ ಸಿಬಿಐ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದವು. ಶಸ್ತ್ರಾಸ್ತ್ರಗಳ ಪೈಕಿ ವಿದೇಶಿ ನಿರ್ಮಿತ ಬಂದೂಕುಗಳೂ ಇದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯ ಮಾಲೀಕನನ್ನು ಅಬು ತಾಲೇಜ್ ಮೊಲ್ಲಾಹ್ ಎಂದು ಗುರುತಿಸಲಾಗಿದೆ.