ನವದೆಹಲಿ: ದೇಶದ ಉನ್ನತ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳ ನೇಮಕ್ಕಾಗಿ ರಚಿಸಿರುವ ಕೊಲಿಜಿಯಂ ವ್ಯವಸ್ಥೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮಧ್ಯೆ ಜಟಾಪಟಿ ಉಂಟಾಗಿದೆ. ಇದರ ಮಧ್ಯೆಯೇ, ಸರ್ವೋಚ್ಚ ನ್ಯಾಯಾಲಯವು ಕೊಲಿಜಿಯಂ ಅನ್ವಯ ಹೈಕೋರ್ಟ್‌ಗಳ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು (Collegium Recommendation) ಮಾಡಿದೆ.
ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟನಾ ಹೈಕೋರ್ಟ್ ಮುಖ್ಯ ನ್ಯಾ.ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾ.ಪಿ.ವಿ. ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾ.ಅಸಾದುದ್ದೀನ್ ಅಮಾನುಲ್ಲಾ ಹಾಗೂ ಅಲಹಾಬಾದ್ ಹೈಕೋರ್ಟ್ ನ್ಯಾ.ಮನೋಜ್ ಮಿಶ್ರಾ ಅವರ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ದೀಪಾಂಕರ್ ದತ್ತಾ ಅವರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ದೀಪಾಂಕರ್ ದತ್ತಾ ಅವರನ್ನು ನೇಮಕ ಮಾಡುವತನಕ ಹೊಸ ಶಿಫಾರಸು ಮಾಡದಿರಲು ಸುಪ್ರೀಂ ನಿರ್ಧರಿಸಿತ್ತು. ಇದಾದ ಬಳಿಕ ಕೇಂದ್ರ ಸರ್ಕಾರವು ದತ್ತಾ ಅವರನ್ನು ನೇಮಕ ಮಾಡಿತ್ತು. ಅಷ್ಟರಮಟ್ಟಿಗೆ, ಕೇಂದ್ರ ಹಾಗೂ ಸುಪ್ರೀಂ ಕೋರ್ಟ್ ಮಧ್ಯೆ ಜಟಾಪಟಿ ನಡೆಯುತ್ತಿದೆ.
ಇದನ್ನೂ ಓದಿ | Supreme Court | ಕೊಲಿಜಿಯಂ ಕಾನೂನುಬದ್ಧ, ಅನುಸರಿಸಬೇಕು : ಕೇಂದ್ರಕ್ಕೆ ಸುಪ್ರೀಂ ಸೂಚನೆ