Site icon Vistara News

Teesta Setalvad | ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್‌ಗೆ ಸುಪ್ರೀಂ ಮಧ್ಯಂತರ ಜಾಮೀನು

Teesta

ನವದೆಹಲಿ: ೨೦೦೨ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ಸಾಕ್ಷ್ಯಗಳನ್ನು ಹುಟ್ಟುಹಾಕಿದ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ (Teesta Setalvad) ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

ಗುಜರಾತ್‌ ಹೈಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ, ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ನೇತೃತ್ವದ ನ್ಯಾಯಪೀಠವು ತೀಸ್ತಾ ಸೆಟಲ್ವಾಡ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ತೀಸ್ತಾ ಸೆಟಲ್ವಾಡ್‌ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂಬ ಆರೋಪವಿದೆ. ಜೂನ್‌ ೨೫ರಿಂದಲೂ ಅವರು ಜೈಲಿನಲ್ಲಿದ್ದಾರೆ. “ಎರಡು ತಿಂಗಳಿನಿಂದ ಆರೋಪಿಯು ಜೈಲಿನಲ್ಲಿದ್ದಾರೆ. ಹಾಗಾಗಿ, ಅವರಿಗೆ ಜಾಮೀನು ನೀಡಬಹುದು. ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ” ಎಂದು ಪೀಠ ತಿಳಿಸಿತು.

ಇದನ್ನೂ ಓದಿ | ತೀಸ್ತಾ ಸೆಟಲ್ವಾಡ್‌ ಕೇಸ್‌ನಲ್ಲಿ ಅಹ್ಮದ್‌ ಪಟೇಲ್‌ ಹೆಸರು; ಪ್ರಶ್ನೆಯೊಂದನ್ನು ಕೇಳಿದ ಪುತ್ರಿ ಮುಮ್ತಾಜ್‌ ಪಟೇಲ್‌

Exit mobile version