ನವದೆಹಲಿ: ಯುವತಿಯರು ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಿಕೊಳ್ಳಬೇಕು ಹಾಗೂ ಎರಡು ನಿಮಿಷಗಳ ಸುಖಕ್ಕಾಗಿ ಎಲ್ಲವನ್ನೂ ಕಳೆದುಕೊಳ್ಳಬಾರದು ಎಂದು ಅತ್ಯಾಚಾರ ಪ್ರಕರಣವೊಂದರ ವಿಚಾರಣೆ ವೇಳೆ ಕೋಲ್ಕೊತಾ ಅಭಿಪ್ರಾಯಪಟ್ಟಿರುವುದನ್ನು ಸುಪ್ರೀಂ ಕೋರ್ಟ್ (Supreme Court) ಆಕ್ಷೇಪಿಸಿದೆ. “ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಅಥವಾ ಬೋಧಿಸುವುದು ಸರಿಯಲ್ಲ ಎಂದು ನಾವು ನಿರೀಕ್ಷೆ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರ ಅರ್ಜಿದಾರರಿಗೆ ನೋಟಿಸ್ ನೀಡಿದೆ.
ಕಲ್ಕತ್ತಾ ಹೈಕೋರ್ಟ್ನ ಹೇಳಿಕೆಗಳು ಆಕ್ಷೇಪಾರ್ಹ ಮತ್ತು ಅನಗತ್ಯ ಎಂಬುದಾಗಿಯೂ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ಅಕ್ಟೋಬರ್ನಲ್ಲಿ ಕಲ್ಕತ್ತಾ ಹೈಕೋರ್ಟ್ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ ವಿಧಿಸಿದ್ದ ಪ್ರಕರಣದ ವಿಚಾರಣೆ ವೇಳೆ “ಹದಿ ಹರೆಯದ ಯುವತಿಯರು ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು. ಎರಡು ನಿಮಿಷಗಳ ಲೈಂಗಿಕ ಆನಂದವನ್ನು ಅನುಭವಿಸಲು ಅವಳು ಒಪ್ಪಿಕೊಂಡರೆ ಸಮಾಜದ ದೃಷ್ಟಿಯಲ್ಲಿ ಆಕೆ ಎಲ್ಲವನ್ನೂ ಕಳೆದುಕೊಂಡವಳು,’ ಎಂದು ಹೇಳಿತ್ತು.
ತನ್ನ ದೇಹದ ಸಮಗ್ರತೆ, ಘನತೆ ಮತ್ತು ಆತ್ಮಗೌರವದ ಹಕ್ಕನ್ನು ರಕ್ಷಿಸುವುದು ಯುವತಿಯರ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ಹೇಳಿತ್ತು. ಹುಡುಗರು ಹುಡುಗಿಯ ಘನತೆಯನ್ನು ಗೌರವಿಸಬೇಕು ಮತ್ತು ಮಹಿಳೆಯರನ್ನು ಗೌರವಿಸಲು ಯುವಕರು ತಮ್ಮ ಮನಸ್ಸನ್ನು ತರಬೇತುಗೊಳಿಸಬೇಕು ಎಂದು ಕೋರ್ಟ್ ಹೇಳಿತ್ತು.
“ಯುವತಿ ಅಥವಾ ಮಹಿಳೆಯರಿಗೆ ಗೌರವ ತೋರುವುದು ಯುವಕರ ಕರ್ತವ್ಯವಾಗಿದೆ ಮಹಿಳೆಯ ಸ್ವಾಭಿಮಾನ, ಅವಳ ಘನತೆ ಮತ್ತು ಗೌಪ್ಯತೆ ಮತ್ತು ಅವಳ ದೇಹದ ಸ್ವಾಯತ್ತತೆಯ ಹಕ್ಕನ್ನು ಗೌರವಿಸಲು ಯುವಕರು ತಮ್ಮ ಮನಸ್ಸನ್ನು ತರಬೇತುಗೊಳಿಸಬೇಕು” ಎಂದು ನ್ಯಾಯಾಲಯ ಹೇಳಿತ್ತು.
ಇದನ್ನೂ ಓದಿ : Mahua Moitra: ಪ್ರಶ್ನೆ ಕೇಳಲು ಲಂಚ; ತೃಣಮೂಲ ಸಂಸದೆ ಮಹುವಾ ಮೋಯಿತ್ರಾ ಲೋಕಸಭೆಯಿಂದ ಉಚ್ಚಾಟನೆ
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಯ ವಿರುದ್ಧ ಯುವಕನೊಬ್ಬ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸುತ್ತಿದ್ದ ಕಲ್ಕತ್ತಾ ಹೈಕೋರ್ಟ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತ್ತು. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸೆಷನ್ಸ್ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿತ್ತು. ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ ಹೈಕೋರ್ಟ್, ಚಿಕ್ಕ ವಯಸ್ಸಿನಲ್ಲಿ ಲೈಂಗಿಕ ಸಂಬಂಧದಿಂದ ಉಂಟಾಗುವ ಕಾನೂನು ತೊಡಕುಗಳನ್ನು ತಪ್ಪಿಸಲು ಶಾಲೆಗಳಲ್ಲಿ ಸಮಗ್ರ ಲೈಂಗಿಕ ಶಿಕ್ಷಣಕ್ಕೆ ನೀಡಬೇಕು ಎಂದೂ ಹೇಳಿತ್ತು.
ಕೋರ್ಟ್ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ( special status to Jammu and Kashmir) ಕಲ್ಪಿಸುವ ಆರ್ಟಿಕಲ್ 370 ರದ್ಧು (Article 370 Scrap) ಪ್ರಶ್ನಿಸಿ ಅನೇಕ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದವು (Supreme Court). ಈ ಕುರಿತು ವಿಚಾರಣೆ ಪೂರ್ತಿಗೊಳಿಸಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 11, ಸೋಮವಾರ ತನ್ನ ಅಂತಿಮ ಪ್ರಕಟಿಸಲಿದೆ(Judgement on Dec 11).
ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.
ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.