Site icon Vistara News

Supreme Court: 2021ರಲ್ಲಿ ಬಿಜೆಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್‌

Supreme Court

Supreme Court Strikes Down Electoral Bonds Scheme: What Are The Reasons? What is the Scheme?

ನವದೆಹಲಿ: ನ್ಯಾಯಾಂಗ ನಿಂದನೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸುಪ್ರೀಂ ಕೋರ್ಟ್‌ (Supreme Court) ೨೦೨೧ರಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದಿನೇಶ್‌ ಮಹೆಸ್ವರಿ ಹಾಗೂ ಬಿ.ಆರ್‌.ಗವಾಯಿ ನೇತೃತ್ವದ ನ್ಯಾಯಪೀಠವು, ದಂಡದ ಆದೇಶವನ್ನು ರದ್ದುಗೊಳಿಸಿದೆ.

೨೦೨೦ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಅಪರಾಧದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ತಿಳಿಸುವಲ್ಲಿ ಬಿಜೆಪಿಯು ಸರ್ವೋಚ್ಚ ನ್ಯಾಯಾಲಯದ ನಿರ್ದೇಶಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಕೋರ್ಟ್‌ ೨೦೨೧ರಲ್ಲಿ ಬಿಜೆಪಿಗೆ ಒಂದು ಲಕ್ಷ ರೂ. ದಂಡ ವಿಧಿಸಿತ್ತು. ಕಡಿಮೆ ಪ್ರಸರಣ ಇರುವ ಪತ್ರಿಕೆಗಳಲ್ಲಿ ಮಾತ್ರ ಅಭ್ಯರ್ಥಿಗಳ ಮಾಹಿತಿ ಕುರಿತು ಜಾಹೀರಾತು ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ, ಈಗ ನ್ಯಾಯಾಲಯವು ಆದೇಶ ಹಿಂಪಡೆದಿದೆ.

ಮರುಪರಿಶೀಲನಾ ಅರ್ಜಿಯ ವಿಚಾರಣೆ ವೇಳೆ ಪ್ರಕರಣದಲ್ಲಿ ಉದ್ದೇಶಪೂರ್ವಕ ಕೃತ್ಯ ಸಾಬೀತಾಗದ ಕಾರಣ ಆದೇಶ ಹಿಂಪಡೆಯಲಾಗಿದೆ. ಬಿಜೆಪಿ ಮಾತ್ರವಲ್ಲ, ಸಿಪಿಎಂ ಹಾಗೂ ಎನ್‌ಸಿಪಿಗೆ ತಲಾ ಐದು ಲಕ್ಷ ರೂ. ಹಾಗೂ ಕಾಂಗ್ರೆಸ್‌, ಆರ್‌ಜೆಡಿ, ಜೆಡಿಯುಗೆ ತಲಾ ಒಂದು ಲಕ್ಷ ರೂ. ದಂಡ ವಿಧಿಸಲಾಗಿತ್ತು.

ಇದನ್ನೂ ಓದಿ:Pawan Khera: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಬೇಲ್

Exit mobile version