Site icon Vistara News

Rallies On Roads |‌ ಹೆದ್ದಾರಿ, ಸಾರ್ವಜನಿಕ ಸ್ಥಳಗಳಲ್ಲಿ ರ‍್ಯಾಲಿ ನಿಷೇಧ, ಆಂಧ್ರದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Y S Jagan Mohan Reddy

ನವದೆಹಲಿ: ರಸ್ತೆಗಳು, ರಾಷ್ಟ್ರೀಯ ಹೆದ್ದಾರಿಗಳು ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ರ‍್ಯಾಲಿಗಳನ್ನು (Rallies On Roads) ಆಯೋಜಿಸದಂತೆ ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ. ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿ ಎಂದು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು ರ‍್ಯಾಲಿ ನಡೆಸದಂತೆ ಆಂಧ್ರಪ್ರದೇಶ ಸರ್ಕಾರವು ಆದೇಶ ಹೊರಡಿಸಿದೆ. ಆದರೆ, ಆಂಧ್ರಪ್ರದೇಶ ಹೈಕೋರ್ಟ್‌ ಜನವರಿ 23ರವರೆಗೆ ಆಂಧ್ರದ ಆದೇಶವನ್ನು ಅಮಾನತುಗೊಳಿಸಿದ್ದು, ಜನವರಿ 23ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಆಂಧ್ರಪ್ರದೇಶ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಆಂಧ್ರದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ದ್ವಿಸದಸ್ಯ ಪೀಠವು, “ಜನವರಿ 23ರಂದು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಅಲ್ಲಿಯೇ ರಾಜ್ಯ ಸರ್ಕಾರ ವಾದ ಮಂಡಿಸಲಿ. ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿಯನ್ನು ಪರಿಗಣಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಡಿಸೆಂಬರ್‌ 28ರಂದು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ರೋಡ್‌ ಶೋ ನಡೆಸುವ ವೇಳೆ ಕಾಲ್ತುಳಿತ ಉಂಟಾಗಿ ಎಂಟು ಮಂದಿ ಮೃತಪಟ್ಟಿದ್ದರು. ಇದೇ ಘಟನೆಗಳು ಕೆಲವೆಡೆ ನಡೆದಿದ್ದವು. ಹಾಗಾಗಿ, ರಾಜ್ಯ ಸರ್ಕಾರವು ರಸ್ತೆಗಳಲ್ಲಿ ರೋಡ್‌ ಶೋ ನಡೆಸಬಾರದು ಎಂದು ಜನವರಿ 2ರಂದು ಆದೇಶ ಹೊರಡಿಸಿತ್ತು. ಬಳಿಕ ಇದಕ್ಕೆ ಆಂಧ್ರ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ | Supreme Court | ಬಿಹಾರ ಜಾತಿ ಗಣತಿ ಪ್ರಶ್ನಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

Exit mobile version