ನವದೆಹಲಿ: ವನ್ಯಜೀವಿಗಳ ಆವಾಸಸ್ಥಾನಗಳಲ್ಲಿ ಯಾವುದೇ ಕಾಮಗಾರಿ ಮುಂದುವರಿಸದಂತೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ಹೊರಡಿಸಿದೆ. ಹುಲಿ ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು ಹಾಗೂ ರಾಷ್ಟ್ರೀಯ ಉದ್ಯಾನಗಳಲ್ಲಿ ಯಾವುದೇ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠವು, ಉತ್ತರಾಖಂಡದ ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮವಾಗಿ ಸಫಾರಿ ನಡೆಸಲಾಗುತ್ತಿದೆ, ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ವೇಳೆ ಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದು ಆದೇಶಿಸಿತು.
“ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ನಿರ್ಮಾಣ ಕಾಮಗಾರಿ ಕೈಗೊಳ್ಳಬಾರದು” ಎಂದು ಸೂಚಿಸಿದೆ. ಸಫಾರಿ ಹಾಗೂ ಮೃಗಾಲಯ ಆರಂಭಿಸುವ ಕುರಿತ ಮಾರ್ಗಸೂಚಿಗಳಿಗೆ ತಿದ್ದುಪಡಿ ತರುವಂತೆ ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ರಚಿಸಿದ ಸೆಂಟ್ರಲ್ ಎಂಪವರ್ಡ್ ಕಮಿಟಿಯು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇದರ ಬೆನ್ನಲ್ಲೇ ಕಾಮಗಾರಿಗಳಿಗೆ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ: Road Dispute: ಪುಷ್ಪಗಿರಿ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಪ್ರಕರಣ; ಕೊಡಗಿನ ಬಿಜೆಪಿ ಶಾಸಕರ ಮೇಲೆ ತೂಗುಗತ್ತಿ