Site icon Vistara News

Hijab Row‌ | ಇಂದು ಸುಪ್ರೀಂ ತೀರ್ಪು, ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು: ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧಾರಣೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಜೆ.ಜೆ ನಗರ, ಜೆ.ಸಿ ನಗರ, ಶಿವಾಜಿ ನಗರ, ಪುಲಕೇಶಿ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಕಣ್ಗಾವಲು ಇಡಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸುವ ಕುರಿತಾಗಿ ನಗರದ ಎಲ್ಲಾ ಡಿಸಿಪಿಗಳ ಜೊತೆ ಕಮಿಷನರ್ ಮೀಟಿಂಗ್ ನಡೆಸಿದ್ದಾರೆ. ಮಂಗಳೂರು- ಉಡುಪಿಯಲ್ಲೂ ಸಾಕಷ್ಟು ನಿಗಾ ವಹಿಸಲು ಸೂಚಿಸಲಾಗಿದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ‌ (Hijab Row)ದ ಕುರಿತ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸತತವಾಗಿ ವಿಚಾರಣೆ ನಡೆಸಿತ್ತು. ಕರ್ನಾಟಕ ಮಾತ್ರವಲ್ಲ, ದೇಶದ ಮಟ್ಟಿಗೆ ಗಮನ ಸೆಳೆದ ಕಾರಣ ಗುರುವಾರದ ಈ ತೀರ್ಪು ಕುತೂಹಲ ಹುಟ್ಟಿಸಿದೆ. ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜ್‌ಗಳು, ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸರ್ವೋಚ್ಚ ನ್ಯಾಯಾಲಯ ಸತತವಾಗಿ ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿತ್ತು. ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಸುಧಾಂಶ ಧುಲಿಯಾ ಅವರಿದ್ದ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಇದನ್ನೂ ಓದಿ | Hijab Row | ಹಿಜಾಬ್‌ ನಿಷೇಧ ಪ್ರಕರಣ, ನಾಳೆಯೇ ಸುಪ್ರೀಂ ಕೋರ್ಟ್‌ ತೀರ್ಪು ಸಾಧ್ಯತೆ

Exit mobile version