ಕರ್ನಾಟಕದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ; ಒಂದು ವಿಷಯಕ್ಕೆ ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್​ - Vistara News

ದೇಶ

ಕರ್ನಾಟಕದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ; ಒಂದು ವಿಷಯಕ್ಕೆ ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್​

Sharad Pawar: ಭಾನುವಾರ ಪಂಡರಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್​, ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಪ್ರತಿಪಾದಿಸಿದರು.

VISTARANEWS.COM


on

Surprised over PM Modi giving religious slogans during election campaigning in Karnataka Says Sharad Pawar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ರಧಾನಿ ನರೇಂದ್ರ ಮೋದಿ (PM Modi)ಯವರು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ನಿಮಿತ್ತ ರಾಜ್ಯದಲ್ಲಿ ನಡೆಸಿದ ಚುನಾವಣಾ ಪ್ರಚಾರದ ಬಗ್ಗೆ ಎನ್​ಸಿಪಿ (ನ್ಯಾಶನಲಿಸ್ಟ್​ ಕಾಂಗ್ರೆಸ್ ಪಾರ್ಟಿ) ಅಧ್ಯಕ್ಷ ಶರದ್ ಪವಾರ್ (Sharad Pawar) ಮಾತನಾಡಿ, ಒಂದು ವಿಷಯದ ಬಗ್ಗೆ ನನಗೆ ತುಂಬ ಅಚ್ಚರಿಯಾಯಿತು ಎಂದು ಹೇಳಿದ್ದಾರೆ. ‘ಮೇ 10ರಂದು ವಿಧಾನಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಭರದಿಂದ ಪ್ರಚಾರ ನಡೆಸಿದರು. ಆದರೆ ಅವರು ಪ್ರಚಾರದ ವೇಳೆ ಧಾರ್ಮಿಕ ಘೋಷಣೆಗಳನ್ನು (Religious Slogans)ಹೇಳುತ್ತಿರುವುದು ನನಗೆ ಅಚ್ಚರಿ ತರಿಸಿತು’ ಎಂದು ಶರದ್​ ಪವಾರ್ ಹೇಳಿದ್ದಾರೆ.

ಭಾನುವಾರ ಪಂಡರಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್​, ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಪ್ರತಿಪಾದಿಸಿದರು. ‘ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಜಾತ್ಯತೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತೇವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮರೆತಂತೆ ಕಾಣುತ್ತಾರೆ. ಅವರು ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹಲವು ಬಾರಿ ಧಾರ್ಮಿಕ ಘೋಷಣೆಗಳನ್ನು ಹೇಳಿದರು. ಹೀಗೆ ಧಾರ್ಮಿಕ ವಿಚಾರಗಳನ್ನು ಪ್ರಚಾರದ ವೇಳೆ ಪ್ರಸ್ತಾಪ ಮಾಡುವುದರಿಂದ ಹಲವು ತೊಂದರೆಯಾಗುತ್ತದೆ. ಸಮಾಜದಲ್ಲಿ ಭಿನ್ನ ವಾತಾವರಣ ಸೃಷ್ಟಿಸುತ್ತದೆ. ಇದು ಒಳ್ಳೆಯದಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Sharad Pawar: ಶರದ್‌ ಪವಾರ್‌ ಯುಟರ್ನ್‌, ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಿರಲು ತೀರ್ಮಾನ

ಶರದ್ ಪವಾರ್ ಅವರು ಇತ್ತೀಚೆಗೆ ಎನ್​ಸಿಪಿ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮೇ 2ರಂದು ಅವರು ಈ ತೀರ್ಮಾನ ಪ್ರಕಟಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ವಿರೋಧಿಸಿದ್ದರು. ಇನ್ನಿತರ ಪದಾಧಿಕಾರಿಗಳೂ ರಾಜೀನಾಮೆ ನೀಡಲು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲ, ಶರದ್ ಪವಾರ್ ರಾಜೀನಾಮೆಯನ್ನು ಎನ್​ಸಿಪಿ ಸಮಿತಿ ತಿರಸ್ಕರಿಸಿತ್ತು. ಹೀಗಾಗಿ ಅವರು ಮತ್ತೆ ಎನ್​ಸಿಪಿ ಅಧ್ಯಕ್ಷನ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Amit Shah: ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುತ್ತದೆ ಎಂಬುದಾಗಿ ಅವರು ಸುಳ್ಳು ಹೇಳುತ್ತಿದ್ದಾರೆ. ಮೋದಿ ಅವರು ಮೀಸಲಾತಿಯ ಬೆಂಬಲಿಗರಾಗಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Amit Shah
Koo

ಲಖನೌ:‌ ಕರ್ನಾಟಕ, ತೆಲಂಗಾಣದಲ್ಲಿ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ (Muslims Reservation) ನೀಡಿರುವ ವಿಚಾರವು ಲೋಕಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ಮೀಸಲಾತಿ ವಿಷಯವು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ, ಟೀಕೆ, ಆಕ್ರೋಶಗಳಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ, “ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಒಬಿಸಿ ಮೀಸಲಾತಿಯನ್ನು (OBC Reservation) ಮತ್ತೆ ಒಬಿಸಿಗೇ ನೀಡಲಾಗುವುದು” ಎಂದು ಅಮಿತ್‌ ಶಾ (Amit Shah) ಪುನರುಚ್ಚರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂಬುದಾಗಿ ರಾಹುಲ್‌ ಗಾಂಧಿ ಅವರು ಸುಳ್ಳು ಹಬ್ಬಿಸುತ್ತಿದ್ದಾರೆ. ಸುಳ್ಳುಗಳಲ್ಲೇ ರಾಹುಲ್‌ ಗಾಂಧಿ ಅವರು ಚುನಾವಣೆ ಮುಗಿಸುತ್ತಿದ್ದಾರೆ. ಆದರೆ, ಒಂದು ನೆನಪಿರಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅಷ್ಟೇ ಅಲ್ಲ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲ್ಲ ಹಾಗೂ ಬೇರೆಯವರಿಗೂ ಬಿಡಲ್ಲ. ಇದು ಮೋದಿ ಅವರ ಗ್ಯಾರಂಟಿಯಾಗಿದೆ” ಎಂಬುದಾಗಿ ಅಮಿತ್‌ ಶಾ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಯನ್ನು ಬೆಂಬಲಿಸುತ್ತಾರೆ. ನರೇಂದ್ರ ಮೋದಿ ಸರ್ಕಾರ 400 ಕ್ಷೇತ್ರಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿರುವ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗೆ ನೀಡಲಾಗುತ್ತದೆ. ಇದು ಮೋದಿ ಅವರ ಗ್ಯಾರಂಟಿಯಾಗಿದೆ. ರಾಹುಲ್‌ ಗಾಂಧಿ ಅವರಿಗೆ ವಾಸ್ತವದ ಅರಿವಿಲ್ಲ. ಕೇಂದ್ರದಲ್ಲಿ ಎರಡು ಅವಧಿಯಲ್ಲಿ ಬಿಜೆಪಿಯೇ ಬಹುಮತದ ಸರ್ಕಾರ ರಚಿಸಿ, ಆಡಳಿತ ನಡೆಸಿದೆ ಎಂಬುದರ ಅರಿವಿಲ್ಲ. ಎರಡು ಅವಧಿ ಆಡಳಿತ ನಡೆಸಿದರು ಬಿಜೆಪಿಯು ಮೀಸಲಾತಿಯನ್ನು ತೆಗೆದಿಲ್ಲ” ಎಂದು ತಿಳಿಸಿದರು.

ಮೀಸಲಾತಿ ಕುರಿತ ಚರ್ಚೆಯ ಮಧ್ಯೆಯೇ, ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Continue Reading

ದೇಶ

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Mohan Bhagwat: ಸಾಂವಿಧಾನಿಕವಾಗಿ ನೀಡಿರುವ ಎಲ್ಲ ಮೀಸಲಾತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ಬೆಂಬಲಿಸುತ್ತಿದೆ. ಮೊದಲು ಕೂಡ ಬೆಂಬಲಿಸಿದೆ. ಈಗಲೂ ಬೆಂಬಲ ನೀಡುತ್ತದೆ ಎಂಬುದಾಗಿ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ತಿಕ್ಕಾಟ ಶುರುವಾಗಿರುವ ಮಧ್ಯೆಯೇ ಮೋಹನ್‌ ಭಾಗವತ್‌ ಹೇಳಿಕೆ ಪ್ರಾಮುಖ್ಯ ಪಡೆದಿದೆ.

VISTARANEWS.COM


on

Mohan Bhagwat
Koo

ಹೈದರಾಬಾದ್: ಕರ್ನಾಟಕದಲ್ಲಿ ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರಾಜ್ಯ ಸರ್ಕಾರವು ಮುಸ್ಲಿಮರಿಗೆ ನೀಡಿರುವುದು ದೇಶ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇದು ಲೋಕಸಭೆ ಚುನಾವಣೆಯ (Lok Sabha Election 2024) ಪ್ರಮುಖ ಚರ್ಚೆಯ ವಿಷಯವಾಗಿದೆ. ಮೀಸಲಾತಿ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ, “ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಮೀಸಲಾತಿಯನ್ನು (Reservation) ಬೆಂಬಲಿಸುತ್ತದೆ” ಎಂಬುದಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಹೇಳಿರುವ ವಿಡಿಯೊ ಹರಿದಾಡುತ್ತಿದೆ. ಆದರೆ, ಸಂಘ ಪರಿವಾರವು ಮೊದಲಿನಿಂದಲೂ ಮೀಸಲಾತಿಯನ್ನು ಬೆಂಬಲಿಸುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಆರ್‌ಎಸ್‌ಎಸ್‌ ಮೀಸಲಾತಿಯನ್ನು ಬೆಂಬಲಿಸುತ್ತದೆ. ಸಮುದಾಯಗಳಿಗೆ ಎಲ್ಲಿಯವರೆಗೆ ಮೀಸಲಾತಿಯ ಅವಶ್ಯಕತೆ ಇದೆಯೋ, ಅಲ್ಲಿಯವರೆಗೆ ಮೀಸಲಾತಿಯನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ ಕುರಿತು ಜನರಿಗೆ ತಪ್ಪು ಕಲ್ಪನೆಗಳಿವೆ. ಆರ್‌ಎಸ್‌ಎಸ್‌ ಮೀಸಲಾತಿಯನ್ನು ವಿರೋಧಿಸುತ್ತದೆ. ಆದರೆ, ಹೊರಗಡೆ ಆ ಕುರಿತು ಹೇಳುವುದಿಲ್ಲ ಅಷ್ಟೆ ಎಂಬಂತೆ ಬಿಂಬಿಸಲಾಗುತ್ತಿದೆ. ಸಾಂವಿಧಾನಿಕವಾಗಿ ನೀಡಲಾಗಿರುವ ಮೀಸಲಾತಿಯನ್ನು ನಾವು ಬೆಂಬಲಿಸುತ್ತೇವೆ. ಇದರಿಂದ ಸಮುದಾಯಗಳಿಗೆ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಹಾಗಾಗಿ, ಯಾರೂ ಆರ್‌ಎಸ್‌ಎಸ್‌ ಕುರಿತು ತಪ್ಪು ಮಾಹಿತಿಯನ್ನು ಹರಡಬಾರದು” ಎಂಬುದಾಗಿ ಮೋಹನ್‌ ಭಾಗವತ್‌ ಮನವಿ ಮಾಡಿದರು.

ಕೆಲ ದಿನಗಳ ಹಿಂದಷ್ಟೇ ರಾಹುಲ್‌ ಗಾಂಧಿ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದ ವೈವಿಧ್ಯತೆಯನ್ನು ಹಾಳು ಮಾಡುತ್ತವೆ. ಸಂವಿಧಾನವನ್ನು ಬದಲಾಯಿಸುವುದು ಬಿಜೆಪಿಯ ಕುತಂತ್ರವಾಗಿದೆ. ಜನ ಧರ್ಮ, ಸಮುದಾಯಗಳ ಆಚರಣೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಸಂಘರ್ಷ ಉಂಟುಮಾಡಿದೆ” ಎಂದು ವಯನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Continue Reading

ದೇಶ

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

Election Commission: ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ವಿಷಯವನ್ನು ಬದಲಾಯಿಸುವಂತೆ ಭಾರತದ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ಸೂಚಿಸಿದೆ. ಪಕ್ಷದ ಪ್ರಚಾರ ಗೀತೆಯು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳು 1994ರ ಅಡಿಯಲ್ಲಿ ಸೂಚಿಸಲಾದ ಜಾಹೀರಾತು ಸಂಹಿತೆಗಳು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು ಎಂದು ಅದು ಹೇಳಿದೆ. ಈತನ್ಮಧ್ಯೆ ಎಎಪಿಯ ಪ್ರಚಾರ ಗೀತೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ ಎಂದು ಹಿರಿಯ ನಾಯಕಿ, ಸಚಿವೆ ಅತಿಶಿ ಆರೋಪಿಸಿದ್ದಾರೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ವಿಷಯವನ್ನು ಬದಲಾಯಿಸುವಂತೆ ಭಾರತದ ಚುನಾವಣಾ ಆಯೋಗ (Election Commission)ವು ಆಮ್ ಆದ್ಮಿ ಪಕ್ಷ (Aam Aadmi Party)ಕ್ಕೆ ಸೂಚಿಸಿದೆ. ಪಕ್ಷದ ಪ್ರಚಾರ ಗೀತೆಯು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳು 1994ರ ಅಡಿಯಲ್ಲಿ ಸೂಚಿಸಲಾದ ಜಾಹೀರಾತು ಸಂಹಿತೆಗಳು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು ಎಂದು ಚುನಾವಣಾ ಆಯೋಗ ಹೇಳಿದೆ.

ಅಗತ್ಯ ಬದಲಾವಣೆಗಳನ್ನು ಮಾಡಿದ ನಂತರ ಪ್ರಚಾರದ ಹಾಡನ್ನು ಮತ್ತೆ ಸಲ್ಲಿಸುವಂತೆ ಚುನಾವಣಾ ಆಯೋಗವು ದೆಹಲಿಯ ಆಡಳಿತ ಪಕ್ಷವಾದ ಆಪ್‌ಗೆ ತಿಳಿಸಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಜಾಹೀರಾತು ಸಂಹಿತೆಗಳ ನಿಬಂಧನೆಗಳನ್ನು ಉಲ್ಲಂಘಿಸುವ ಈ ಪ್ರಚಾರ ಹಾಡಿನ ವಿಷಯವು ನ್ಯಾಯಾಂಗದ ಮೇಲೆ ಅನುಮಾನವನ್ನು ಉಂಟು ಮಾಡುತ್ತದೆ ಎಂದು ಚುನಾವಣಾ ಆಯೋಗ ತನ್ನ ನೋಟಿಸ್‌ನಲ್ಲಿ ತಿಳಿಸಿದೆ.

ʼಹಾಡಿನ ನಿಷೇಧಕ್ಕೆ ಸಂಚುʼ

ಆಪ್‌ನ ಜಾಹೀರಾತಿನಲ್ಲಿರುವ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ಡೆಂಗೆ’ ಎಂಬ ವಾಕ್ಯವನ್ನು ಚುನಾವಣಾ ಆಯೋಗ ಬದಲಾಯಿಸುವಂತೆ ಸೂಚಿಸಿದೆ. ಈತನ್ಮಧ್ಯೆ ಎಎಪಿಯ ಪ್ರಚಾರ ಗೀತೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ ಎಂದು ಹಿರಿಯ ನಾಯಕಿ, ಸಚಿವೆ ಅತಿಶಿ ಆರೋಪಿಸಿದ್ದಾರೆ. ಅಲ್ಲದೆ ಚುನಾವಣಾ ಆಯೋಗದ ಕ್ರಮವು ಎಎಪಿ ವಿರುದ್ಧ ಬಿಜೆಪಿ ಎಸೆದ ರಾಜಕೀಯ ಅಸ್ತ್ರ ಎಂದು ಅವರು ಹೇಳಿದ್ದಾರೆ. ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಚುನಾವಣಾ ಆಯೋಗ ಪಕ್ಷವೊಂದರ ಪ್ರಚಾರ ಗೀತೆಯನ್ನು ನಿಷೇಧಿಸಿದೆ ಎಂದು ದೂರಿದ್ದಾರೆ.

“ಬಿಜೆಪಿಯ ಮತ್ತೊಂದು ರಾಜಕೀಯ ಅಸ್ತ್ರವಾದ ಚುನಾವಣಾ ಆಯೋಗವು ಎಎಪಿಯ ಪ್ರಚಾರ ಗೀತೆಯನ್ನು ನಿಷೇಧಿಸಿದೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷದ ಚುನಾವಣಾ ಹಾಡಿಗೆ ನಿಷೇಧ ಹೇರಿದೆʼʼ ಎಂದು ಅತಿಶಿ ಹೇಳಿದ್ದಾರೆ. ಬಿಜೆಪಿಯ ನಾಯಕರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ʼʼಆಪ್‌ನ ಪ್ರಚಾರದ ಹಾಡು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನು ಕೆಟ್ಟದಾಗಿ ಬಿಂಬಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆʼʼ ಎಂದು ಅವರು ಹೇಳಿದ್ದಾರೆ. “ರಾಜಕೀಯ ನಾಯಕರು ಬಿಜೆಪಿಗೆ ಸೇರಿದ ಕೂಡಲೇ ಇ.ಡಿ, ಸಿಬಿಐ ಅವರ ಪ್ರಕರಣ ಮುಚ್ಚಿ ಹಾಕುತ್ತದೆ. ಇದಕ್ಕೆ ಚುನಾವಣಾ ಆಯೋಗವು ಆಕ್ಷೇಪಿಸುವುದಿಲ್ಲ. ಆದರೆ ನಮ್ಮ ಪ್ರಚಾರ ಹಾಡಿನಲ್ಲಿ ನಾವು ಅದನ್ನು ಉಲ್ಲೇಖಿಸಿದಾಗ ಚುನಾವಣಾ ಆಯೋಗವು ಮೂಗು ತೂರಿಸುತ್ತದೆ” ಎಂದು ಅವರು ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: Arvind Kejriwal: ದೆಹಲಿ ಹೈಕೋರ್ಟ್‌ನಿಂದ ಸಿಕ್ಕಿಲ್ಲ ರಿಲೀಫ್‌; ಸುಪ್ರೀಂ ಕೋರ್ಟ್‌ ಕದ ತಟ್ಟಿದ ಅರವಿಂದ್ ಕೇಜ್ರಿವಾಲ್

ವಾಕಥಾನ್‌

ಈ ಮಧ್ಯೆ ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಬೆಂಬಲ ಸೂಚಿಸಿ ಆಪ್‌ನಿಂದ ಇಂದು (ಏಪ್ರಿಲ್‌ 28) ʼವಾಕ್‌ ಫಾರ್‌ ಕೇಜ್ರಿವಾಲ್‌ʼ ವಾಕಥಾನ್‌ ನಡೆಯಿತು. ಎಎಪಿಯ ಯುವ ಘಟಕ ಮತ್ತು ಲೋಕಸಭಾ ಅಭ್ಯರ್ಥಿಗಳು ಜಂಟಿಯಾಗಿ ವಾಕಥಾನ್‌ ಆಯೋಜಿಸಿತ್ತು. ದಕ್ಷಿಣ ದೆಹಲಿಯಿಂದ ನವದೆಹಲಿವರೆಗೆ ಈ ವಾಕಥಾನ್‌ ಆಯೋಜಿಸಲಾಯಿತು.

Continue Reading

ದೇಶ

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Vitamin D:ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

VISTARANEWS.COM


on

Foods rich in vitamin D
Koo

ನವದೆಹಲಿ:ವಿಟಮಿನ್‌ ಡಿ(Vitamin D) ಕೊರತೆ ಎಂಬುದು ಪ್ರಪಂಚಾದ್ಯಂತ ಹೆಚ್ಚಿನ ಜನರಲ್ಲಿ ಅತ್ಯಂತ ಸಾಮಾನ್ಯವಾಗಿ ಕಂಡು ಬರುವ ಪೌಷ್ಟಿಕಾಂಶ ಕೊರತೆ(Nutrient shortages)ಯಾಗಿದೆ. ಇದು ಸಾಮಾನ್ಯವಾಗಿ 65 ವರ್ಷ ಮೇಲ್ಪಟ್ಟ ಜನರಲ್ಲಿ ಕಂಡು ಬರುವ ಪೌಷ್ಠಿಕಾಂಶ ಕೊರತೆ. ಪ್ರಪಂಚದ ಶೇ.13ರಷ್ಟು ಜನರಲ್ಲಿ ವಿಟಮಿನ್‌ ಡಿ ಕೊರತೆ ಕಂಡು ಬರುತ್ತದೆ. ವಿಟಮಿನ್‌ ಡಿ ಕೊರತೆಯಿಂದ ಎಲುಬು, ಗಂಟು ನೋವು, ಸಂಧು ನೋವು, ಮೂಡ್‌ ಚೇಂಜ್‌ ಹೀಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದರೆ ಇದೀಗ ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌(Cancer)ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

ವಿಟಮಿನ್‌ ಡಿ ಕೊರತೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ?

ವಿಟಮಿನ್‌ ಡಿ 3 ಮತ್ತು ಕ್ಯಾಲ್ಸಿಯಂ ಮಾತ್ರೆ ಸೇವನೆಯಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿಲ್ಲ ಎಂದು ಅಧ್ಯಯನ ವರದಿ ಹೇಳಿದೆ. ವಿಟಮಿನ್‌ ಡಿ ಕ್ಯಾನ್ಸರ್‌ ಸೆಲ್‌ಗಳ ವಿಡಿಜನ್‌ ಮತ್ತು ಅವುಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ . ಅದರ ಕೊರತೆ ಆದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರ್‌ಗೆ ತುತ್ತಾಗು ಸಾಧ್ಯತೆ ಹೆಚ್ಚಿರುತ್ತದೆ. ವೈದ್ಯರ ಹೇಳುವ ಪ್ರಕಾರ ವಿಟಮಿನ್‌ ಡಿ ಮನುಷ್ಯನ ಎಲುಬುಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೇ ದೇಹದಲ್ಲಿರುವ ದೋಷಯುಕ್ತ ಜೀನ್‌ಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಈ ಪ್ರಕ್ರಿಯೆಗೆ MMR ಎಂದು ಕರೆಯಲಾಗಿದ್ದು, ಇದಕ್ಕೆ ವಿಟಮಿನ್‌ ಡಿ ಅಗತ್ಯ ಹೆಚ್ಚಾಗಿದೆ. ಇನ್ನು ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೇಯೇ ಎಂಬ ವಿಷಯದ ಬಗ್ಗೆ ಮತ್ತಷ್ಟು ಅಧ್ಯಯನ ಮುಂದುವರೆದಿದೆ.

ವಿಟಮಿನ್ ಡಿ ಕೊರತೆ ಉಂಟಾಗದಿರಲು ಏನು ಮಾಡಬೇಕು?

1. ವಿಟಮಿನ್ ಡಿ ಕೊರತೆಗೆ ಪ್ರಮುಖ ಮದ್ದು ಎಂದರೆ ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲುವುದು. ತ್ವಚೆಯ ಮೇಲೆ ಯುವಿ-ಬಿ ಕಿರಣಗಳು ಬಿದ್ದಾಗ ಕೊಲೆಸ್ಟ್ರಾಲ್ ವಿಟಮಿನ್ ಡಿ ಆಗಿ ಪರಿವರ್ತನೆ ಆಗುವುದು. ನಿಮ್ಮ ತ್ವಚೆಯ ಬಣ್ಣದ ಮೇಲೆ ನೀವು ಬಿಸಿಲಿನಲ್ಲಿ ನಿಲ್ಲುವ ಸಮಯಲ್ಲಿ ವ್ಯತ್ಯಾಸವಿರುತ್ತದೆ. ಕಪ್ಪು ಬಣ್ಣದ ತ್ವಚೆಯವರು ಬಿಳಿ ಬಣ್ಣದ ತ್ವಚೆಯವರಿಗಿಂತ ಹೆಚ್ಚು ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕು. ಇನ್ನು ವಯಸ್ಸು ಹೆಚ್ಚಾದಂತೆ ಬಿಸಿಲಿನಲ್ಲಿ ಹೆಚ್ಚು ಹೊತ್ತು ನಿಂತರೆ ಒಳ್ಳೆಯದು.

ಇದನ್ನೂ ಓದಿ:IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

2. ಮೀನು ಹಾಗೂ ಸಮುದ್ರ ಆಹಾರಗಳಲ್ಲಿ ವಿಟಮಿನ್ ಡಿ ಇರುತ್ತದೆ. ಬೂತಾಯಿ, ಮೃದ್ವಂಗಿಗಳು, ಸಿಗಡಿ, ಬಂಗುಡೆ ಈ ಮೀನುಗಳಲ್ಲಿ ವಿಟಮಿನ್ ಡಿ ಅಂಶವಿರುತ್ತದೆ.

3. ಬೆಳಸುವ ಅಣಬೆಗಳಿಗಿಂತ ನೈಸರ್ಗಿಕವಾಗಿ ಸಿಗುವ ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕವಿರುತ್ತದೆ.

4. ಮೀನು ತಿನ್ನದವರು ಮೊಟ್ಟೆಯನ್ನು ತಿಂದರೆ ಅದರಲ್ಲಿ ಸ್ವಲ್ಪ ಪ್ರಮಾಣದ ವಿಟಮಿನ್ ಡಿ ದೊರೆಯುವುದು. ಮೊಟ್ಟೆಯ ಬಿಳಿ ಜತೆಗೆ ಅರಿಶಿಣ ಕೂಡ ತಿನ್ನಿ.

5. ಇನ್ನು ದನದ ಹಾಲು ಕುಡಿಯುವುದು, ಸೋಯಾ ಹಾಲು, ಕಿತ್ತಳೆ ಜ್ಯೂಸ್‌ ಇವುಗಳನ್ನು ಕೂಡ ಡಯಟ್‌ನಲ್ಲಿ ಸೇರಿಸಿ.
ಓಟ್‌ಮೀಲ್ ಹಾಗೂ ಧಾನ್ಯಗಳಲ್ಲಿ ಕೂಡ ಸ್ವಲ್ಪ ಪ್ರಮಾಣದಲ್ಲಿ ವಿಟಮಿನ್ ಡಿ ಇರುತ್ತದೆ.

Continue Reading
Advertisement
Pakistan Cricket
ಕ್ರಿಕೆಟ್1 min ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Amit Shah
ದೇಶ3 mins ago

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Samantha Ruth Prabhu announces new film Bangaram
ಟಾಲಿವುಡ್21 mins ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Aamir Khan talks about power of namaste
ಬಾಲಿವುಡ್25 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ32 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ56 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 202459 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ1 hour ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ1 hour ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ1 hour ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ7 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202424 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌