2002ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ (Narendra Modi) ಮತ್ತು ಇತರ ಬಿಜೆಪಿ ನಾಯಕರನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಸಾಮಾಜಿಕ ಕಾರ್ಯಕರ್ತತೆ ತೀಸ್ತಾ ಸೆಟಲ್ವಾಡ್ (Teesta Setalvad) ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ತಿರಸ್ಕರಿಸಿದೆ. ಅಷ್ಟೇ ಅಲ್ಲ ‘ಕೂಡಲೇ ಶರಣಾಗಿ’ ಎಂದೂ ತೀಸ್ತಾರಿಗೆ ಆದೇಶಿಸಿದೆ. 2002ರಲ್ಲಿ ಗುಜರಾತ್ನಲ್ಲಿ ನಡೆದಿದ್ದ ಗುಜರಾತ್ ಗಲಭೆ (2002 Gujarat Riots Case) ಕೇಸ್ನಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ಸಿಲುಕಿಸಿ, ಅವರಿಗೆ ಶಿಕ್ಷೆ ಕೊಡಲಿಸಲು ಈ ತೀಸ್ತಾ ಸೆಟಲ್ವಾಡ್ ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
2002ರಲ್ಲಿ ನಡೆದ ಗುಜರಾತ್ ಗುಲ್ಬರ್ಗ್ ಸೊಸೈಟಿ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿ ಇನ್ನಿತರ ಹಲವು ಹಿರಿಯ ನಾಯಕರ ಪಾತ್ರವೇನೂ ಇಲ್ಲ ಎಂದು ಗುಜರಾತ್ ಎಸ್‌ಐಟಿ ಕ್ಲೀನ್‌ಚಿಟ್ ಕೊಟ್ಟಿತ್ತು. ಆದರೆ ಆ ಕ್ಲೀನ್‌ಚಿಟ್ ಪ್ರಶ್ನಿಸಿ ಹಿರಿಯ ಕಾಂಗ್ರೆಸ್ ಸಂಸದ ಎಹ್ಸಾನ್ ಜಫ್ರಿ (ಗುಜರಾತ್ ಗಲಭೆಯಲ್ಲಿ ಮೃತಪಟ್ಟವರು) ಪತ್ನಿ ಜಕಿಯಾ ಜಫ್ರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವರ್ಷ ಜೂನ್ ತಿಂಗಳಲ್ಲಿ ಈ ಕೇಸ್ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಎಸ್‌ಐಟಿ ನೀಡಿದ್ದ ಕ್ಲೀನ್ಚಿಟ್ನ್ನು ಎತ್ತಿಹಿಡಿದಿತ್ತು. ಅಷ್ಟೇ ಅಲ್ಲ ಅರ್ಜಿ ವಿಚಾರಣೆ ವೇಳೆ ‘ತೀಸ್ತಾ ಸೆಟಲ್ವಾಡ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿಗಳಾದ ಆರ್‌ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರ ಹೆಸರು ಉಲ್ಲೇಖಿಸಿ, ಗುಜರಾತ್ ಗಲಭೆ ವಿಚಾರದಲ್ಲಿ ಹಲವು ಮಾದರಿಯ ಸುಳ್ಳು ಸಾಕ್ಷಿಗಳು, ತಪ್ಪಾದ ಮಾಹಿತಿಗಳಿಂದಲೇ ದೊಡ್ಡಮಟ್ಟದ ಪಿತೂರಿ ನಡೆಸಿದ್ದು ಕಾಣಿಸುತ್ತದೆ. ಆದರೆ ಹೀಗೆ ಕಟ್ಟಿದ್ದ ಸುಳ್ಳಿನ ಮನೆ, ಕಾರ್ಡ್‌ಹೌಸ್‌ನಂತೆ ಉದುರಿಬಿದ್ದಿದೆ. ಪಿತೂರಿಯಲ್ಲಿ ಕೈಜೋಡಿಸಿದವರೆಲ್ಲ ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕು. ಅವರೆಲ್ಲರೂ ಕಾನೂನು ಕ್ರಮ ಎದುರಿಸಬೇಕು’ ಎಂದು ಹೇಳಿತ್ತು. ಅದಾದ ಮೇಲೆ ಗುಜರಾತ್ ಪೊಲೀಸರು ತೀಸ್ತಾ ಸೆಟಲ್ವಾಡ್ ಮತ್ತು ಇನ್ನಿಬ್ಬರು ನಿವೃತ್ತ ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಇದನ್ನೂ ಓದಿ: ಗುಜರಾತ್ ಗಲಭೆ; ನರೇಂದ್ರ ಮೋದಿಯನ್ನು ಮರಣ ದಂಡನೆಗೆ ಸಿಲುಕಿಸುವುದೇ ತೀಸ್ತಾ ಸೆಟಲ್ವಾಡ್ ಸಂಚಾಗಿತ್ತು !
ಆಗಿನಿಂದಲೂ ತೀಸ್ತಾ ಸೆಟಲ್ವಾಡ್ರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಕಳೆದ ವರ್ಷ ತೀಸ್ತಾ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಹೀಗಾಗಿ ಅವರು ಬಂಧನದಿಂದ ಪಾರಾಗಿದ್ದರು. ಈ ಮಧ್ಯಂತರ ಜಾಮೀನು ಅವಧಿ ಮುಗಿಯುವ ಮುನ್ನ ನಿರೀಕ್ಷಣಾ ಜಾಮೀನು ಪಡೆದು ಮತ್ತೆ ಬಂಧನದಿಂದ ಪಾರಾಗುವ ಸಲುವಾಗಿ ತೀಸ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲೀಗ ಹಿನ್ನಡೆಯಾಗಿದೆ.
ತೀಸ್ತಾ ಸೆಟಲ್ವಾಡ್ ಬಗೆಗಿನ ಇನ್ನಷ್ಟು ಸುದ್ದಿಗಳು:
1. ಗುಜರಾತ್ ಗಲಭೆ ಕೇಸ್; ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ
2. ವಿದೇಶಿ ದೇಣಿಗೆ ಪ್ರಕರಣ; ಗುಜರಾತ್ ಎಟಿಎಸ್‌ನಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ
3.2007ರಲ್ಲಿ ತೀಸ್ತಾ ಸೆಟಲ್ವಾಡ್‌ಗೆ ಪದ್ಮ ಪುರಸ್ಕಾರ ದೊರೆತಿದ್ದು ಹೇಗೆ? ಯಾಕೆ?; ಎಸ್‌ಐಟಿ ವರದಿ ಇದು !
4. ಗುಜರಾತ್ ಗಲಭೆ: ತೀಸ್ತಾ ಸೆಟಲ್ವಾಡ್ ಪಿತೂರಿಗೆ ಬೆಂಬಲಿಸಿದ್ದು ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ !