Rahul Gandhi: ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ; ಸಮನ್ಸ್ ನೀಡಿದ ಬಿಹಾರ ಕೋರ್ಟ್​ - Vistara News

ದೇಶ

Rahul Gandhi: ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ; ಸಮನ್ಸ್ ನೀಡಿದ ಬಿಹಾರ ಕೋರ್ಟ್​

2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ಪ್ರಚಾರ ಸಭೆ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿ ‘ಎಲ್ಲ ಕಳ್ಳರ ಸರ್​ನೇಮ್​ ಮೋದಿ ಎಂದೇ ಇರುತ್ತದೆ’ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ಗುಜರಾತ್​ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೂರತ್​ ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದರಲ್ಲಿ ಅವರು ದೋಷಿ ಎಂದು ಸಾಬೀತಾಗಿದ್ದಾರೆ.

VISTARANEWS.COM


on

Ayodhya seer invites congress leader Rahul Gandhi to stay at ashram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ: ಈಗಾಗಲೇ 2019ರ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾಗಿ, 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗ ಬಿಜೆಪಿ ನಾಯಕ, ಬಿಹಾರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ (Sushil Kumar Modi) ಅವರು ರಾಹುಲ್ ಗಾಂಧಿ ವಿರುದ್ಧ ಬಿಹಾರ ಕೋರ್ಟ್​ನಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ (Rahul Gandhi defamation case) ಹೂಡಿದ್ದಾರೆ. ಈ ಸಂಬಂಧ ಏಪ್ರಿಲ್​ 12ರಂದು ಹಾಜರಾಗಿ ಹೇಳಿಕೆ ದಾಖಲಿಸುವಂತೆ ಬಿಹಾರ ಕೋರ್ಟ್ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.

2019ರ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ಪ್ರಚಾರ ಸಭೆ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿ ‘ಎಲ್ಲ ಕಳ್ಳರ ಸರ್​ನೇಮ್​ ಮೋದಿ ಎಂದೇ ಇರುತ್ತದೆ’ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ಗುಜರಾತ್​ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೂರತ್​ ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೇ ಮಾರ್ಚ್​ 23ರಂದು ತೀರ್ಪು ನೀಡಿದ ಸೂರತ್​ ಕೋರ್ಟ್​ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದೆ. ಹಾಗೇ, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸದ್ಯ 30 ದಿನಗಳ ಜಾಮೀನು ಆಧಾರದ ಮೇಲೆ ರಾಹುಲ್ ಗಾಂಧಿ ಹೊರಗೆ ಇದ್ದಾರೆ. ಇನ್ನು 2 ವರ್ಷ ಜೈಲು ಶಿಕ್ಷೆ ಎಂದು ಕೋರ್ಟ್ ತೀರ್ಪು ನೀಡಿ 24ಗಂಟೆಯಲ್ಲಿ ಅವರ ಲೋಕಸಭೆ ಸದಸ್ಯತ್ವ ಸ್ಥಾನ ರದ್ದಾಗಿದೆ.

ಇದೀಗ ಮೋದಿ ಉಪನಾಮಕ್ಕೆ ಮಾಡಿದ ಅವಹೇಳನದ ವಿಚಾರವಾಗಿಯೇ ಸುಶೀಲ್ ಮೋದಿ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸುಶೀಲ್​ ಕುಮಾರ್ ಮೋದಿ, ಈ ಕೇಸ್​ನಲ್ಲಿ ಸಾಕ್ಷಿಗಳಾದ ಮಾಜಿ ಸಚಿವ ನಿತಿನ್​ ನವೀನ್​ (ಬಂಕಿಪುರ ಶಾಸಕ), ದಿಘಾ ಶಾಸಕ ಸಂಜೀವ್​ ಚೌರಾಸಿಯಾ, ಭಾರತೀಯ ಜನತಾ ಯುವ ಮೋರ್ಚಾ ಮುಖಂಡ ಮನೀಶ್ ಕುಮಾರ್​ ಅವರ ಹೇಳಿಕೆಗಳನ್ನು ಕೋರ್ಟ್​​ನಲ್ಲಿ ದಾಖಲು ಮಾಡಲಾಗಿದ್ದು, ರಾಹುಲ್ ಗಾಂಧಿಯವರು ಏಪ್ರಿಲ್​ 12ರಂದು ಕೋರ್ಟ್​ಗೆ ಭೇಟಿಕೊಟ್ಟು, ತಮ್ಮ ಹೇಳಿಕೆ ನೀಡಲಿದ್ದಾರೆ. ಅಡಿಷನಲ್​ ಚೀಫ್​ ಜ್ಯೂಡಿಶಿಯಲ್​ ಮ್ಯಾಜಿಸ್ಟ್ರೇಟ್​ ಆದಿ ದೇವ್​ ಅವರು ಕೇಸ್​ ವಿಚಾರಣೆ ನಡೆಸಲಿದ್ದು, ಸುಶೀಲ್​ ಮೋದಿ ಪರ ವಕೀಲರಾದ ಎಸ್​. ಡಿ.ಸಂಜಯ್​ ವಾದಿಸಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಲಂಡನ್​ ಕೋರ್ಟ್​ನಲ್ಲಿ ಮೊಕದ್ದಮೆ ಹೂಡಲು ಲಲಿತ್​ ಮೋದಿ ನಿರ್ಧಾರ; ಪಪ್ಪು ನೀವು ಪೂರ್ತಿ ಮೂರ್ಖನಾಗಿ ಎಂದು ಟ್ವೀಟ್​

ಲಲಿತ್​ ಮೋದಿಯಿಂದಲೂ ಕಾನೂನು ಸಮರದ ಎಚ್ಚರಿಕೆ
ಇನ್ನೊಂದೆಡೆ ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್​) ಸಂಸ್ಥಾಪಕ, ಮಾಜಿ ಮುಖ್ಯಸ್ಥ ಲಲಿತ್ ಮೋದಿ ಕೂಡ ಕಾಂಗ್ರೆಸ್ ನಾಯಕ, ಅನರ್ಹ ಸಂಸದ ರಾಹುಲ್ ಗಾಂಧಿ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಅಷ್ಟಲ್ಲದೆ, ಯುಕೆ ಕೋರ್ಟ್​​ನಲ್ಲಿ ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಾನು ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದೇನೆ ಎಂದು ಹೇಳಲಾಗುತ್ತಿದೆ. ಆದರೆ ಕಳೆದ 15ವರ್ಷಗಳಲ್ಲಿ ಒಂದು ರೂಪಾಯಿ ನಾನು ತೆಗೆದುಕೊಂಡಿದ್ದನ್ನೂ ಸಾಕ್ಷೀಕರಿಸಲು ಸಾಧ್ಯವಾಗಲಿಲ್ಲ. ತನಿಖೆ ನಡೆಯುತ್ತಿದೆ. ನಾನು ಹುಟ್ಟುಹಾಕಿದ ಮಹತ್ವದ ಕ್ರೀಡೆ ಐಪಿಎಲ್​ ಈಗ ಜಗತ್ತಿನಾದ್ಯಂತ ಮಹತ್ವ ಪಡೆದಿದೆ. ರಾಹುಲ್ ಗಾಂಧಿಯವರೇ ನಾನು ನಿಮ್ಮಂತೆ ದೋಷಿ ಎನ್ನಿಸಿಕೊಂಡಿಲ್ಲ ಎಂದೂ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

Ancient snake: 2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು.

VISTARANEWS.COM


on

Ancient snake vasuki indicus
Koo

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ, ಭಾರೀ ಗಾತ್ರದ ಹಾವು (big snake) ಭಾರತದಲ್ಲಿ ಬದುಕಿತ್ತು ಎಂಬುದು ಇದೀಗ ಸಂಶೋಧನೆಯಿಂದ ಗೊತ್ತಾಗಿದೆ. ಗುಜರಾತ್‌ನಲ್ಲಿ ಪತ್ತೆಯಾದ ಪ್ರಾಚೀನ ಹಾವೊಂದರ (Ancient snake) ಪಳೆಯುಳಿಕೆಗಳು (follisls) ಅದರ ಭಾರೀ ಗಾತ್ರ ಹಾಗೂ ತೂಕವನ್ನು ತಿಳಿಯಪಡಿಸಿವೆ. ಅದು ಸುಮಾರು 50 ಅಡಿ ಉದ್ದ ಹಾಗೂ 1,000 ಕೆಜಿ ತೂಕವಿತ್ತಂತೆ!

2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು. ನಿನ್ನೆ ವಿಜ್ಞಾನ ಪತ್ರಿಕೆಗಳಲ್ಲಿ ಇದು ವರದಿಯಾಗಿದೆ. ಈ ಜಾತಿಯ ಹಾವು 36ರಿಂದ ಸುಮಾರು 50 ಅಡಿ ಉದ್ದದವರೆಗೂ ಬೆಳೆಯುತ್ತಿತ್ತು.

ಗಾತ್ರದಲ್ಲಿ ʼವಾಸುಕಿʼಯ ಗಾತ್ರ ಹಾಗೂ ತೂಕ ಈಗ ಅಳಿವಿನಂಚಿನಲ್ಲಿರುವ ʼಟೈಟಾನೊಬೊವಾʼವನ್ನು ಮೀರಿರಬಹುದು. ಇದು 42 ಅಡಿ ಅಳತೆಯ ಅತಿದೊಡ್ಡ ಹಾವು. ಇದು 1 ಟನ್ ಅಥವಾ 1,000 ಕಿಲೋಗ್ರಾಂಗಳಷ್ಟು ತೂಕವನ್ನು ಹೊಂದಿರಬಹುದು ಎಂದು ಸಂಶೋಧಕರು ಹೇಳುತ್ತಾರೆ. ಇಂದು ಜೀವಂತವಾಗಿರುವ ಅತಿದೊಡ್ಡ ಹಾವೆಂದರೆ ಏಷ್ಯಾದ 33 ಅಡಿ ಉದ್ದದ ರೆಟಿಕ್ಯುಲೇಟೆಡ್ ಹೆಬ್ಬಾವು.

“ಅದರ ದೊಡ್ಡ ಗಾತ್ರವನ್ನು ಪರಿಗಣಿಸಿದರೆ, ವಾಸುಕಿಯು ನಿಧಾನವಾಗಿ ಚಲಿಸುವ ಹೊಂಚುದಾಳಿ ಪರಭಕ್ಷಕವಾಗಿತ್ತು. ಅದು ಅನಕೊಂಡಗಳು ಮತ್ತು ಹೆಬ್ಬಾವುಗಳಂತೆ ಸುತ್ತುವರಿದು ಬಿಗಿಯುವಿಕೆಯ ಮೂಲಕ ತನ್ನ ಬೇಟೆಯನ್ನು ಪಡೆಯುತ್ತಿತ್ತು” ಎಂದು ಐಐಟಿ-ರೂರ್ಕಿಯಲ್ಲಿ ಪ್ಯಾಲಿಯಂಟಾಲಜಿಯ ಪೋಸ್ಟ್‌ ಡಾಕ್ಟರಲ್ ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕ ದೇಬಜಿತ್ ದತ್ತಾ ಹೇಳುತ್ತಾರೆ. “ಈ ಹಾವು ಕರಾವಳಿಯ ಸಮೀಪವಿರುವ ಜೌಗು ಪ್ರದೇಶದಲ್ಲಿ ಜಾಗತಿಕ ತಾಪಮಾನವು ಇಂದಿನಕ್ಕಿಂತ ಹೆಚ್ಚಿರುವ ಸಮಯದಲ್ಲಿ ವಾಸಿಸುತ್ತಿತ್ತು” ಎಂದಿದ್ದಾರೆ.

ಹಿಂದೂ ಪುರಾಣಗಳಲ್ಲಿ ʼವಾಸುಕಿʼ ಎಂಬ ಭಾರೀ ನಾಗರಾಜನ ಕತೆಗಳು ಇವೆ. ಇದನ್ನು ಸಾಮಾನ್ಯವಾಗಿ ಶಿವನ ಕುತ್ತಿಗೆಗೆ ಸುತ್ತುವಂತೆ ಚಿತ್ರಿಸಲಾಗುತ್ತದೆ. ಸಮುದ್ರ ಮಥನಕ್ಕೆ ಈ ಹಾವನ್ನು ಬಳಸಿಕೊಳ್ಳಲಾಗಿತ್ತು ಎಂದು ಕತೆಯಿದೆ. ಈ ಹಿನ್ನೆಲೆಯಲ್ಲಿ ಸಂಶೋಧಕರು ಇದಕ್ಕೆ ʼವಾಸುಕಿ ಇಂಡಿಕಸ್ʼ ಎಂಬ ಹೆಸರನ್ನು ನೀಡಿದ್ದಾರೆ.

“ಇದು ಬಹಳ ಸಾಂಕೇತಿಕವಾಗಿದೆ” ಎಂದು ನಾಮಕರಣದ ನಂತರ ದತ್ತ ಹೇಳಿದ್ದಾರೆ. “ವಾಸುಕಿ ನಮ್ಮ ಸರ್ಪರಾಜ. ಹೀಗಾಗಿ ಇಲ್ಲಿರುವ ಅಸಾಧಾರಣವಾದ ದೊಡ್ಡ ಗಾತ್ರದ ಹಾವೂ ಅದೇ” ಎಂದು ಅವರು ವಿವರಿಸಿದರು.

ವಾಸುಕಿ ಇಂಡಿಕಸ್‌ನ ಪಳೆಯುಳಿಕೆಯನ್ನು IIT-ರೂರ್ಕಿಯ ಪ್ರಾಗ್ಜೀವಶಾಸ್ತ್ರದ ಪ್ರಾಧ್ಯಾಪಕ ಸುನಿಲ್ ಬಾಜಪೇಯಿ ಅವರು 2005ರಲ್ಲಿ ಕಂಡುಹಿಡಿದರು. ಅವರು ಕಚ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಅವಶೇಷಗಳನ್ನು ಪತ್ತೆಹಚ್ಚಿದರು.

ಆ ಸಮಯದಲ್ಲಿ, ʼಸೈಂಟಿಫಿಕ್ ಅಮೇರಿಕನ್ʼ ಪ್ರಕಾರ, ಅವಶೇಷಗಳು ಈಗಾಗಲೇ ತಿಳಿದಿರುವ ಇತಿಹಾಸಪೂರ್ವ ಜಾತಿಯ ಮೊಸಳೆಗೆ ಸೇರಿವೆ ಎಂದು ಬಾಜಪೇಯಿ ನಂಬಿದ್ದರು. 2022ರವರೆಗೆ ಪಳೆಯುಳಿಕೆ ಅವರ ಪ್ರಯೋಗಾಲಯದಲ್ಲಿ ಇತ್ತು. ಅದೇ ವರ್ಷ ಪ್ರಯೋಗಾಲಯಕ್ಕೆ ಸೇರಿದ ದತ್ತಾ ಅವುಗಳನ್ನು ಪರೀಕ್ಷಿಸಲು ಪ್ರಾರಂಭಿಸಿದರು. ಆ ಚೂರುಗಳು ಬೇರೆ ಜಾತಿಗೆ ಸೇರಿದವು ಎಂದು ಇಬ್ಬರಿಗೂ ಅರಿವಾಯಿತು.

“ಪಳೆಯುಳಿಕೆಯು 2005ರಲ್ಲಿ ಕಂಡುಬಂದಿದೆ, ಆದರೆ ನಾನು ಬೇರೆ ಬೇರೆ ಪಳೆಯುಳಿಕೆಗಳ ಮೇಲೆ ಕೆಲಸ ಮಾಡುತ್ತಿರುವುದರಿಂದ, ಅದು ಹಾಗೇ ಉಳಿಯಿತು. 2022ರಲ್ಲಿ ನಾವು ಪಳೆಯುಳಿಕೆಯನ್ನು ಮರು-ಪರಿಶೀಲಿಸಲು ಪ್ರಾರಂಭಿಸಿದ್ದೇವೆ. ಆರಂಭದಲ್ಲಿ ಅದರ ಗಾತ್ರದಿಂದಾಗಿ, ಇದು ಮೊಸಳೆ ಎಂದು ನಾನು ಭಾವಿಸಿದೆ. ಆದರೆ ನಂತರ ಅದು ಹಾವಿನದ್ದಾಗಿದೆ ಎಂದು ಅರಿತುಕೊಂಡೆವು” ಎಂದು ಬಾಜಪೇಯಿ ತಿಳಿಸಿದರು.

ಇದನ್ನೂ ಓದಿ: Hottest Year: 1.25 ಲಕ್ಷ ವರ್ಷಗಳಲ್ಲೇ 2023 ಅತಿ ಬಿಸಿಯಾದ ವರ್ಷ, ಕಾರಣ ಏನು?

Continue Reading

ದೇಶ

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

Narendra Modi : ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ಅಮ್ರೋಹಾ(ಉತ್ತರ ಪ್ರದೇಶ): ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi ) ಮತ್ತೊಂದು ಬಾರಿ ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ. ಇದಕ್ಕಾಗಿ ನಾನು ಅಮ್ರೋಹಾದ ಜನರನ್ನು ತುಂಬಾ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್​ನಲ್ಲಿ ಶಮಿ ಏಳು ವಿಕೆಟ್​ಗಳನ್ನು ಪಡೆದಿದ್ದರು. ಎಡ ಪಾದದ ಗಾಯದಿಂದಾಗಿ ಅವರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರಗುಳಿದಿದ್ದಾರೆ.

ಅಮ್ರೋಹಾದ ‘ಧೋಲಕ್’ (ಸಂಗೀತ ವಾದ್ಯ) ಅನ್ನೂ ಪ್ರಧಾನಿ ಇದೇ ವೇಳೆ ಶ್ಲಾಘಿಸಿದರು. ಗಂಗಾ ಮಾತೆಯ ದಡದಲ್ಲಿರುವ ಈ ಭೂಮಿ ಭಗವಾನ್ ಶ್ರೀ ಕೃಷ್ಣನ ಹೆಜ್ಜೆಗುರುತುಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ರಾಜಾ ಗಜ ಸಿಂಗ್ ಮತ್ತು ಠಾಕೂರ್ ಜೈರಾಮ್ ಸಿಂಗ್ ಅವರಂತಹ ಸಾಹಸಿಗರು ಹುಟ್ಟಿದ ಜನರ ಭೂಮಿ. ನನಗೆ ಧೋಲಕ್ ನೀಡಿದ್ದೀರಿ. ಇದು ಅಮ್ರೋಹಾದ ಮತ್ತೊಂದು ಹೆಗ್ಗುರುತು. ಇಲ್ಲಿನ ಧೋಲಕ್ ನ ಬಡಿತವು ಎಲ್ಲೆಡೆ ಪ್ರತಿಧ್ವನಿಸುತ್ತದೆ. ನಮ್ಮ ಯೋಗಿ ಜಿ ಅವರ ಪ್ರಯತ್ನದಿಂದಾಗಿ, ಬಿಜೆಪಿ ಸರ್ಕಾರವು ಅಮ್ರೋಹಾದ ಧೋಲಕ್​ಗೆ ಜಿಐ (ಜಿಯಾಗ್ರಾಫಿಕಲ್ ಇಂಡಿಕೇಟೆಡ್​ ಒರಿಜಿನ್​) ಟ್ಯಾಗ್ ನೀಡಿದೆ. ಇಡೀ ಜಗತ್ತಿನಲ್ಲಿ ಅದಕ್ಕೆ ಒಂದು ಗುರುತನ್ನು ಕೊಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಯುಪಿಯಲ್ಲಿ ಮತದಾನ ನಡೆಯಲಿದ್ದು, ಅಮ್ರೋಹಾ, ಮೀರತ್, ಬಾಗ್ಪತ್, ಗಾಜಿಯಾಬಾದ್, ಗೌತಮಬುದ್ಧ ನಗರ, ಬುಲಂದ್ಶಹರ್ (ಎಸ್ಸಿ), ಅಲಿಗಢ ಮತ್ತು ಮಥುರಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಅಮ್ರೋಹಾದಲ್ಲಿ ಬಿಜೆಪಿಯ ಕನ್ವರ್ ಸಿಂಗ್ ತನ್ವರ್ ಮತ್ತು ಕಾಂಗ್ರೆಸ್ ನ ಡ್ಯಾನಿಶ್ ಅಲಿ ನಡುವೆ ಪ್ರಮುಖ ಸ್ಪರ್ಧೆ ಇದೆ. ಬಿಎಸ್ಪಿಯ ಮುಜಾಹಿದ್ ಹುಸೇನ್ ಕೂಡ ಚುನಾವಣಾ ಕಣದಲ್ಲಿದ್ದಾರೆ. ಅಮ್ರೋಹಾದಿಂದ ಒಟ್ಟು 12 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

Continue Reading

Lok Sabha Election 2024

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಅದರಂತೆ ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ 92 ವರ್ಷದ ವೃದ್ಧರೊಬ್ಬರಿಗಾಗಿ ಚುನಾವಣಾ ಸಿಬ್ಬಂದಿ ಬರೋಬ್ಬರಿ 18 ಕಿ.ಮೀ. ಕಾಡು ದಾರಿಯಲ್ಲಿ ನಡೆದಿದ್ದಾರೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್‌ 19) ನಡೆದಿದೆ. ಒಟ್ಟು 7 ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಈ ವೋಟ್‌ ಪ್ರಮ್ ಹೋಮ್‌ (Vote from home)ಗಾಗಿ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ವೃದ್ಧರ ಮನೆ ಬಾಗಿಲಿಗೇ ಬರುತ್ತಾರೆ. ಅದರಂತೆ ಕೇರಳದಲ್ಲಿ 92 ವರ್ಷದ ವೃದ್ಧರೊಬ್ಬರ ಒಂದೇ ಒಂದು ವೋಟಿಗಾಗಿ ಚುನಾವಣಾ ಸಿಬ್ಬಂದಿ ದಟ್ಟ ಕಾಡಿನಲ್ಲಿ ಸುಮಾರು 18 ಕಿ.ಮೀ. ಪ್ರಯಾಣ ಬೆಳೆಸಿದ್ದಾರೆ. ಸದ್ಯ ಚುನಾವಣಾ ಸಿಬ್ಬಂದಿಯ ಈ ಕರ್ತವ್ಯ ಪ್ರಜ್ಞೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೇರಳದ ಇಡುಕ್ಕಿ ಜಿಲ್ಲೆಯ ಎಡಮಲಕ್ಕುಡಿ ಎಂಬ ಬುಡಕಟ್ಟು ಗ್ರಾಮದಲ್ಲಿ ವಾಸಿಸುತ್ತಿರುವ ಶಿವಲಿಂಗಂ ಅವರ ವೋಟಿಗಾಗಿ ಚುನಾವಣಾ ಸಿಬ್ಬಂದಿ ಕಲ್ಲು-ಮುಳ್ಳುಗಳ ಹಾದಿ ತುಳಿದು 18 ಕಿ.ಮೀ. ನಡೆದಿದ್ದಾರೆ. ಇಡುಕ್ಕಿ ಲೋಕಸಭಾ ಕ್ಷೇತ್ರದ ಹಿರಿಯ ನಾಗರಿಕ ಮತದಾರರಾದ ಶಿವಲಿಂಗಂ ಅನಾರೋಗ್ಯದಿಂದ ಹಾಸಿಗೆ ಹಾಸಿಗೆ ಹಿಡಿದಿದ್ದಾರೆ. ಆದರೂ ತಮ್ಮ ಹಕ್ಕನ್ನು ಚಲಾಯಿಸಬೇಕೆಂಬ ಮಹದಾಸೆ ಹೊಂದಿದ್ದರು.

ಆನಂದ ಭಾಷ್ಪ

ಈ ಬಾರಿಯ ವೋಟ್ ಫ್ರಮ್ ಹೋಮ್ ಸೌಲಭ್ಯ ಶಿವಲಿಂಗಂ ಅವರ ಕುಟುಂಬದವರ ಗಮನಕ್ಕೆ ಬಂದಿತ್ತು. ಕೂಡಲೇ ಕುಟುಂಬಸ್ಥರು ಸ್ಥಳೀಯ ಬೂತ್ ಅಧಿಕಾರಿಯ ಸಹಾಯದಿಂದ ವೋಟ್ ಫ್ರಮ್ ಹೋಮ್‌ಗೆ ಅರ್ಜಿ ಸಲ್ಲಿಸಿದ್ದರು. ಇವರ ಮನವಿಯನ್ನು ಪುರಸ್ಕರಿಸಿದ ಚುನಾವಣಾ ಆಯೋಗ ಸಿಬ್ಬಂದಿಯನ್ನು ನೇಮಿಸಿತ್ತು. ಮತ ಚಲಾಯಿಸುವಾಗ ಶಿವಲಿಂಗಂ ಅವರಿಗೆ ಕಣ್ಣೀರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ರೋಚಕ ಪ್ರಯಾಣ

ಚುನಾವಣಾ ಸಿಬ್ಬಂದಿ ಶಿವಲಿಂಗಂ ಅವರ ಮನೆಗೆ ತಲುಪಿದ್ದೇ ಒಂದು ಸಾಹಸಗಾಥೆ. ಮೂವರು ಮಹಿಳೆಯರು ಸೇರಿದಂತೆ 9 ಜನರಿದ್ದ ಚುನಾವಣಾ ಸಿಬ್ಬಂದಿಯ ತಂಡ ಬುಧವಾರ ಶಿವಲಿಂಗಂ ಮನೆಗೆ ಹೊರಟಿತ್ತು. ಇದಕ್ಕಾಗಿ ಸಿಬ್ಬಂದಿ ಬೆಳಿಗ್ಗೆ ಸುಮಾರು 6 ಗಂಟೆಗೆ ಮುನ್ನಾರ್‌ನಿಂದ ಹೊರಟು ಅಲ್ಲಿಂದ ವಾಹನದಲ್ಲಿ ಪಯಣಿಸಿ ಇರ್ವಿಕುಲಂ ರಾಷ್ಟ್ರೀಯ ಉದ್ಯಾನವನದ ನಡುವೆ ಸಾಗಿ ಇಡಮಲಕ್ಕುಡಿಯ ಪ್ರವೇಶ ದ್ವಾರವಾದ ಪೆಟ್ಟಿಮುಡಿಯಲ್ಲಿರುವ ಕೆಪ್ಪಕಾಡು ಪ್ರದೇಶವನ್ನು ತಲುಪಿದರು.

ಅಲ್ಲಿಂದ ಮತ್ತೆ ನಿಜವಾದ ಸವಾಲು ಆರಂಭವಾಗಿತ್ತು. ಕಡಿದಾದ ನಿರ್ಜನ ರಸ್ತೆಯ ಮೂಲಕ ಅವರು ಮತ್ತೆ 18 ಕಿ. ಮೀ. ಪ್ರಯಾಣ ಬೆಳೆಸಿದರು. ದಟ್ಟ ಅರಣ್ಯದಲ್ಲಿ ಕಾಲ್ನಡಿಗೆ ಮೂಲಕ ಸಾಗಿದ ಅವರು ಶಿವಲಿಂಗಂ ಅವರ ಮನೆಗೆ ತಲುಪುವಾಗ ಗಂಟೆ ಮಧ್ಯಾಹ್ನ 1.15 ಆಗಿತ್ತು.

ಇದನ್ನೂ ಓದಿ: Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

ʼʼಅಲ್ಲಿಗೆ ತಲುಪಿದಾಗ ಮೊದಲಿಗೆ ಶಿವಲಿಂಗಂ ಅವರನ್ನು ಗುರುತಿಸುವುದು ಕಷ್ಟವಾಗಿತ್ತು. ಯಾಕೆಂದರೆ ಅಲ್ಲಿ ಸುಮಾರು 10 ಮನೆಗಳಿದ್ದವು. ಕೊನೆಗೂ ಶಿವಲಿಂಗಂ ಅವರನ್ನು ಗುರುತಿಸಿದೆವು. ಗುಡಿಸಲಿನಲ್ಲಿ ವಾಸವಾಗಿರುವ ಅವರು ಮಾತನಾಡಲು ಮತ್ತು ಎದ್ದು ನಿಲ್ಲಲೂ ಕಷ್ಟ ಪಡುತ್ತಿದ್ದಾರೆ. ಆದರೂ ಈ ಇಳಿ ವಯಸ್ಸಿನಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯದ ಅವರನ್ನು ನೋಡಿ ಹೆಮ್ಮೆ ಎನಿಸಿತು. ಕೊನೆಗೆ ಅವರ ಮನೆಯಲ್ಲೇ ವೋಟಿಂಗ್ ಬೂತ್ ಸಿದ್ಧಪಡಿಸಿ ಅವರ ಗೌಪ್ಯ ಮತದಾನಕ್ಕೆ ಅವಕಾಶ ಮಾಡಿಕೊಟ್ಟೆವುʼʼ ಎಂದು ಸಿಬ್ಬಂದಿಯೊಬ್ಬರು ವಿವರಿಸಿದಾರೆ.

Continue Reading

ಪ್ರಮುಖ ಸುದ್ದಿ

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Narendra Modi: “ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್​ ಪೋಸ್ಟ್​​ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಭಾರತದ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಏಳು ಹಂತಗಳ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣಾ ಆಯೋಗ ಮತದಾನ “ಹೆಚ್ಚಿನ ಪ್ರಮಾಣದಲ್ಲಿ ಆಗಿದೆ” ಎಂದು ಬಣ್ಣಿಸಿದೆ. ಮತದಾನವು “ಹೆಚ್ಚಾಗಿ ಶಾಂತಿಯುತವಾಗಿ” ಉಳಿದಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇಕಡಾ 69.43 ರಷ್ಟು ಮತದಾನ ದಾಖಲಾಗಿತ್ತು. ಕೆಲವು ಕ್ಷೇತ್ರಗಳು ಆಗ ವಿಭಿನ್ನವಾಗಿದ್ದವು ಮತ್ತು ಮತದಾನಕ್ಕೆ ಹೋದ ಒಟ್ಟು ಸ್ಥಾನಗಳ ಸಂಖ್ಯೆ 91 ಆಗಿತ್ತು.

ಇದನ್ನೂ ಓದಿ: lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳು ಮತ್ತು ಜನಾಂಗೀಯ ಬಿಕ್ಕಟ್ಟು ಪೀಡಿತ ಮಣಿಪುರದಿಂದ ಹಿಂಸಾಚಾರ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಸಶಸ್ತ್ರ ಗುಂಪು ಜನರು ಮತ ಚಲಾಯಿಸಲು ತಮ್ಮ ಮನೆಗಳಿಂದ ಹೊರಬರದಂತೆ ತಡೆದಿದ್ದಾರೆ ಎಂದು ಇನ್ನರ್​​ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಎ ಬಿಮೋಲ್ ಅಕೋಯಿಜಾಮ್ ಆರೋಪಿಸಿದ್ದಾರೆ.

ಮಣಿಪುರದ ಒಳಭಾಗದ ಮತಗಟ್ಟೆಗಳಲ್ಲಿ ಜನರು ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಒಡೆದ ಕನಿಷ್ಠ ನಾಲ್ಕು ಘಟನೆಗಳು ವರದಿಯಾಗಿವೆ. ಸಶಸ್ತ್ರ ಗುಂಪಿನ ಪ್ರಾಕ್ಸಿ ಮತದಾನದ ಬಗ್ಗೆ ಜನರು ಅಸಮಾಧಾನಗೊಂಡರು.

ಉತ್ತರಾಖಂಡ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳು ಇಂದು ಒಂದೇ ಹಂತದ ಚುನಾವಣೆಯಲ್ಲಿ ತಮ್ಮ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ.

ಛತ್ತೀಸ್ ಗಢದ ಬಸ್ತಾರ್ ನ 56 ಹಳ್ಳಿಗಳ ಜನರು ತಮ್ಮ ಸ್ವಂತ ಹಳ್ಳಿಗಳಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗ್ರೇಟ್ ನಿಕೋಬಾರ್ ನ ಶೋಂಪೆನ್ ಬುಡಕಟ್ಟು ಜನಾಂಗದವರು ಮೊದಲ ಬಾರಿಗೆ ಮತ ಚಲಾಯಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ದೇಶದ ಹೆಚ್ಚಿನ ಭಾಗಗಳಲ್ಲಿ ಮತದಾರರು ಬಿಸಿಲಿನ ತಾಪವನ್ನು ಧೈರ್ಯದಿಂದ ಎದುರಿಸಿದರೆ, ಇತರ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಲ್ಲಿ ತಾಳ್ಮೆಯಿಂದ ಕಾಯುತ್ತಿದ್ದರು.

Continue Reading
Advertisement
MS Dhoni
ಪ್ರಮುಖ ಸುದ್ದಿ18 mins ago

MS Dhoni : ಧೋನಿ ಆಡಲು ಇಳಿದಾಗ ಸ್ಟೇಡಿಯಮ್​ನಲ್ಲಿ ಶಬ್ದ ಮಾಲಿನ್ಯ; ಡಿಕಾಕ್ ಹೆಂಡತಿಯ ಪೋಸ್ಟ್​ ವೈರಲ್​

Impact Player Rule
ಕ್ರೀಡೆ37 mins ago

Impact Player Rule : ಇಂಪ್ಯಾಕ್ಟ್​ ಪ್ಲೇಯರ್​​ ಸಿಕ್ಕಾಪಟ್ಟೆ ವಿರೋಧ; ಇದೀಗ ಋತುರಾಜ್​ ಸರದಿ

Tillu Square anupama parameswaran movie tillu square release date
ಒಟಿಟಿ54 mins ago

Tillu Square: ಅನುಪಮಾ ಪರಮೇಶ್ವರನ್‌‌ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಬಹಿರಂಗ

rowdy sheeters attack bangalore
ಕ್ರೈಂ1 hour ago

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

KL Rahul
ಪ್ರಮುಖ ಸುದ್ದಿ1 hour ago

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

Neha Murder Case dhruva sarja priya savadi and kavya shastry condemn
ಸಿನಿಮಾ1 hour ago

Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

IPL 2024
ಕ್ರೀಡೆ1 hour ago

IPL 2024 : ಸೋಲಿನ ಬಳಿಕ ಚೆನ್ನೈ ತಂಡದ ಅಂಕಪಟ್ಟಿಯಲ್ಲಿನ ಸ್ಥಾನವೆಷ್ಟು? ಇಲ್ಲಿದೆ ಎಲ್ಲ ವಿವರ

cet exam karnataka exam authority
ಪ್ರಮುಖ ಸುದ್ದಿ2 hours ago

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Ancient snake vasuki indicus
ವೈರಲ್ ನ್ಯೂಸ್2 hours ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ3 hours ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ18 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌