Site icon Vistara News

Swara Bhaskar: ಮೊದಲ ರಾತ್ರಿಯ ಬೆಡ್‌ರೂಮ್ ಅಲಂಕಾರದ ಫೋಟೊ ಹಂಚಿಕೊಂಡ ಸ್ವರಾ ಭಾಸ್ಕರ್!

Swara Bhaskar

ಬೆಂಗಳೂರು: ನಟಿ ಸ್ವರಾ ಭಾಸ್ಕರ್ (Swara Bhaskar) ರಾಜಕೀಯ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಅವರೊಂದಿಗೆ ವಿವಾಹವಾಗಿದ್ದಾರೆ. ಬಹುಕಾಲದ ಗೆಳೆಯನ ಜತೆ ಸ್ವರಾ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ ತಮ್ಮ ಮೊದಲ ರಾತ್ರಿಯ ಬೆಡ್‌ರೂಮ್ ಶೃಂಗಾರದ ಫೋಟೊವನ್ನು ನಟಿ ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಫಹಾದ್ ಅಹ್ಮದ್ ಜತೆ ನಟಿ ಸ್ವರಾ ಭಾಸ್ಕರ್ ಸೆಲ್ಫಿಯನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಫಹಾದ್ ಮಿಯಾ! ಸಹೋದರನ ವಿಶ್ವಾಸವು ಹಾಗೇ ಉಳಿಯಲಿ. ನೀವು ಈಗ ಮದುವೆಯಾಗಿ, ಹುಟ್ಟುಹಬ್ಬದ ಶುಭಾಶಯಗಳು ಎಂದು ಹೇಳಿದ್ದರು. ಈ ಹಳೆಯ ಟ್ವೀಟ್ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವಿಶೇಷ ಅಂದರೆ ಮದುವೆಗೂ 10 ದಿನಗಳ ಹಿಂದೆ ಸ್ವರಾ ಭಾಸ್ಕರ್ ಈ ಟ್ವೀಟ್ ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಮೊದಲ ರಾತ್ರಿಯ ಬೆಡ್‌ರೂಮ್ ಫೋಟೊ ಬಗ್ಗೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: Swara Bhaskar: ʻಸಹೋದರʼ ಎಂದು ಕರೆದು ಮದ್ವೆಯಾದ ಸ್ವರಾ ಭಾಸ್ಕರ್: ಟ್ರೋಲ್‌ ಆಯ್ತು ಪೋಸ್ಟ್‌!

ಇತ್ತೀಚಿಗಷ್ಟೇ ಸ್ವರಾ- ಫಯಾದ್ ಜೋಡಿ ಮೊದಲ ರಾತ್ರಿಯನ್ನು ಆಚರಿಸಿದ್ದಾರೆ. ಸ್ವರಾ ಅವರ ತಾಯಿ ಮಲಗುವ ಕೋಣೆಯನ್ನು ಸುಂದರವಾಗಿ ಅಲಂಕರಿಸಿದರು. ಈ ಕುರಿತ ಫೋಟೋವನ್ನು ಸ್ವರಾ ತಮ್ಮ ಇನ್ಸ್ಟಾನ್‌ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಇದು ಕೂಡ ಈಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ.

ನಟಿ ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ವಿವಾಹವಾದ ಫೋಟೊಗಳನ್ನು ಹಂಚಿಕೊಂಡಿದ್ದರು. ಹಾಗೇಯೇ ನ್ಯಾಯಾಲಯದ ಮುಂದೆ ವಿವಾಹವಾದ ನಂತರ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೊ ಹಾಗೂ ಫೋಟೊಗಳನ್ನು ಜೋಡಿ ಶೇರ್‌ ಮಾಡಿಕೊಂಡಿದೆ. ಫಹಾದ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಬಯೋ ಪ್ರಕಾರ ಸಮಾಜವಾದಿ ಪಕ್ಷದ ಯುವ ಘಟಕದ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿದ್ದಾರೆ.

Exit mobile version