Swara Bhaskar: ಸ್ವರಾ ಭಾಸ್ಕರ್- ಫಹಾದ್ ಮದುವೆ ಸಂಭ್ರಮ, ಹಳದಿ ಶಾಸ್ತ್ರ ಹೇಗಿತ್ತು? - Vistara News

ದೇಶ

Swara Bhaskar: ಸ್ವರಾ ಭಾಸ್ಕರ್- ಫಹಾದ್ ಮದುವೆ ಸಂಭ್ರಮ, ಹಳದಿ ಶಾಸ್ತ್ರ ಹೇಗಿತ್ತು?

ಸ್ವರಾ ಭಾಸ್ಕರ್ (Swara Bhaskar) ಮತ್ತು ಫಹಾದ್ ಅಹ್ಮದ್ ತಮ್ಮ ಹಳದಿ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.ಫೆ.16ರಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಇದೀಗ ಮತ್ತೆ ಮದುವೆಯಾಗುತ್ತಿದ್ದಾರೆ.

VISTARANEWS.COM


on

swara-bhaskar wedding festivities with Haldi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಸ್ವರಾ ಭಾಸ್ಕರ್ (Swara Bhaskar) ರಾಜಕೀಯ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಜತೆ ಮದುವೆ ಸಂಭ್ರಮದಲ್ಲಿದ್ದಾರೆ. ಫೆ.16ರಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಇದೀಗ ಮತ್ತೆ ಮದುವೆಯಾಗುತ್ತಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಹಳದಿ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸ್ವರಾ ಭಾಸ್ಕರ್ ಮತ್ತು ಫಹಾದ್ ಅಹ್ಮದ್ ತಮ್ಮ ಹಳದಿ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಇಲ್ಲಿ ಜೀವನದ ಎಲ್ಲ ಬಣ್ಣಗಳನ್ನು ಒಟ್ಟಿಗೆ ಆಚರಿಸಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ. ಇದೇ 15 ಮತ್ತು 16 ರಂದು ದೆಹಲಿಯಲ್ಲಿ ಎರಡು ದಿನಗಳ ಸಂಭ್ರಮಾಚರಣೆಗೆ ಅವರು ಸಜ್ಜಾಗಿದ್ದಾರೆ.

ಸ್ವರಾ ಭಾಸ್ಕರ್ ಹಳದಿ ಶಾಸ್ತ್ರದ ಫೋಟೊಗಳು

Swara Bhaskar

ನಟಿ ಈ ಹಿಂದೆ ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ವಿವಾಹವಾದ ಫೋಟೊಗಳನ್ನು ಹಂಚಿಕೊಂಡಿದ್ದರು. ಹಾಗೇಯೇ ನ್ಯಾಯಾಲಯದ ಮುಂದೆ ವಿವಾಹವಾದ ನಂತರ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೊ ಹಾಗೂ ಫೋಟೊಗಳನ್ನು ಜೋಡಿ ಶೇರ್‌ ಮಾಡಿಕೊಂಡಿದೆ. ಫಹಾದ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಬಯೋ ಪ್ರಕಾರ ಸಮಾಜವಾದಿ ಪಕ್ಷದ ಯುವ ಘಟಕದ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Swati Maliwal case: ಕೋರ್ಟ್‌ ವಿಚಾರಣೆ ವೇಳೆ ಕಣ್ಣೀರಿಟ್ಟ ಸ್ವಾತಿ ಮಲಿವಾಲ್‌!

Swati Maliwal case:ಬಿಭವ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌. ಹರಿಹರನ್‌, ಸ್ವಾತಿ ಮಲಿವಾಲ್‌ ಸಿಎಂ ನಿವಾಸಕ್ಕೆ ಅನುಮತಿ ಇಲ್ಲದೇ ನುಗ್ಗಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಿ ಬಿಭವ್‌ ಕುಮಾರ್‌ ಇರಲೇ ಇಲ್ಲ. ಪೂರ್ವಾನುಮತಿ ಇಲ್ಲದೇ ಯಾರಾದರೂ ಸಿಎಂ ನಿವಾಸಕ್ಕೆ ಈ ರೀತಿಯಾಗಿ ಪ್ರವೇಶಿಸಲು ಹೇಗೆ ಸಾಧ್ಯ? ಹೀಗಾಗಿ ಆಕೆಯನ್ನು ಭದ್ರತಾ ಸಿಬ್ಬಂದಿ ತಡೆದು ಬಿಭವ್‌ ಕುಮಾರ್‌ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಇಂತಹದ ಘಟನೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Swati Maliwal Case
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar)ಯಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ವೇಳೆ ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal case) ಕಣ್ಣೀರಿಟ್ಟಿದ್ದಾರೆ. ಸೋಮವಾರ ತೀಸ್‌ ಹಜಾರಿ ಕೋರ್ಟ್‌ನಲ್ಲಿ ಬಿಭವ್‌ ಕುಮಾರ್‌ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ವಾದ ಪ್ರತಿವಾದ ನಡೆಯುತ್ತಿದ್ದಂತೆ ಸ್ವಾತಿ ಮಲಿವಾಲ್‌ ಭಾವುಕರಾದರು. ಅಲ್ಲದೇ ಬಿಭವ್‌ ಕುಮಾರ್‌ ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.

ಬಿಭವ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌. ಹರಿಹರನ್‌, ಸ್ವಾತಿ ಮಲಿವಾಲ್‌ ಸಿಎಂ ನಿವಾಸಕ್ಕೆ ಅನುಮತಿ ಇಲ್ಲದೇ ನುಗ್ಗಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಿ ಬಿಭವ್‌ ಕುಮಾರ್‌ ಇರಲೇ ಇಲ್ಲ. ಪೂರ್ವಾನುಮತಿ ಇಲ್ಲದೇ ಯಾರಾದರೂ ಸಿಎಂ ನಿವಾಸಕ್ಕೆ ಈ ರೀತಿಯಾಗಿ ಪ್ರವೇಶಿಸಲು ಹೇಗೆ ಸಾಧ್ಯ? ಹೀಗಾಗಿ ಆಕೆಯನ್ನು ಭದ್ರತಾ ಸಿಬ್ಬಂದಿ ತಡೆದು ಬಿಭವ್‌ ಕುಮಾರ್‌ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಇಂತಹದ ಘಟನೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ಸ್ವಾತಿ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಹೀಗಿರುವಾಗ ಇದು ಹೇಗೆ ಕೊಲೆ ಯತ್ನ ಆಗುತ್ತದೆ. ಬಿಭವ್‌ ಕುಮಾರ್‌ ವಿರುದ್ಧದ ಆರೋಪ ಸಂಪೂರ್ಣವಾಗಿ ನಿರಾಧಾರವಾದುದು. ಹೀಗಾಗಿ ಸದ್ಯ ಅವರಿಗೆ ಜಾಮೀನು ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಸ್ವಾತಿ ಮಲಿವಾಲ್‌ ಮೇಲೆ ಸಿಎಂ ಕೇಜ್ರಿವಾಲ್‌ ನಿವಾಸದಲ್ಲೇ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದ. ಇದಾದ ನಾಲ್ಕು ದಿನಗಳ ಬಳಿಕ ಸ್ವಾತಿ ಪೊಲೀಸರಿಗೆ ದೂರು ನೀಡಿದ್ದರು., ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ಬಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಬಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ಬಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಿಟ್ಟು ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದರು. ಇದಾದ ಬಳಿಕ ಕಳೆದ ವಾರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್‌ ಕುಮಾರ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಸದ್ಯ ಆತನನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇದನ್ನೂ ಓದಿ:Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Continue Reading

ದೇಶ

Arvind Kejriwal: ಕೇಜ್ರಿವಾಲ್‌ಗೆ ಕ್ಯಾನ್ಸರ್? ಸ್ಫೋಟಕ ಮಾಹಿತಿ ನೀಡಿದ ಆತಿಶಿ, ಜೈಲಿಗೆ ಹೋಗಲ್ವಾ?

Arvind Kejriwal: ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು ಎಂದು ಆಪ್‌ ತಿಳಿಸಿದೆ. ಹಾಗಾಗಿ, ಜೂನ್‌ 2ರಂದು ಕೇಜ್ರಿವಾಲ್‌ ಅವರು ಜೈಲಿಗೆ ಹೋಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿದೆ. ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ನೀಡಿರುವ ಹೊಸ ಮಾಹಿತಿಯು ಇಂಥದ್ದೊಂದು ಪ್ರಶ್ನೆ ಮೂಡುವಂತಾಗಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿದೆ.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದಾರೆ. ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಧಿಕಾರಿಗಳಿಗೆ ಶರಣಾಗಬೇಕಿದೆ. ಇದಕ್ಕೂ ಮೊದಲು ಕೂಡ ಕೇಜ್ರಿವಾಲ್‌ ಅವರ ಆರೋಗ್ಯದ ಬಗ್ಗೆ ಆಪ್‌ ನಾಯಕರು ಕಳವಳ ವ್ಯಕ್ತಪಡಿಸಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

Asaduddin Owaisi: ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

VISTARANEWS.COM


on

Asaduddin Owaisi Party Leader
Koo

ನಾಸಿಕ್: ಅಸಾದುದ್ದೀನ್ ಓವೈಸಿ (Asaduddin Owaisi) ಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

ಅಯೋಧ್ಯೆಯಲ್ಲಿ ರಾಮಮಂದಿರವೇ ಇರ್ಲಿಲ್ಲ: ಅಸಾದುದ್ದೀನ್‌ ಓವೈಸಿ ವಿವಾದ!

ಕಲಬುರಗಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರು (Asaduddin Owaisi), “ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “500 ವರ್ಷಗಳಿಂದ ಬಾಬರಿ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ. ಆದರೆ, ಷಡ್ಯಂತ್ರದ ಮೂಲದ ಮುಸ್ಲಿಮರಿಂದ ರಾಮಮಂದಿರವನ್ನು ಕಸಿದುಕೊಳ್ಳಲಾಯಿತು. ಕಾಂಗ್ರೆಸ್‌ನ ಜಿ.ಬಿ. ಪಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಮಸೀದಿಯಲ್ಲಿ ರಾಮನ ಮೂರ್ತಿಗಳನ್ನು ಇರಿಸಲಾಯಿತು. ಆಗ, ನಾಯರ್‌ ಅವರು ಅಯೋಧ್ಯೆ ಜಿಲ್ಲಾಧಿಕಾರಿಯಾಗಿದ್ದರು. ಇದಾದ ಬಳಿಕ ರಾಮನ ಮೂರ್ತಿಗಳನ್ನು ಮಸೀದಿಯಿಂದ ತೆಗೆಯಲೇ ಇಲ್ಲ” ಎಂದು ತಿಳಿಸಿದ್ದಾರೆ.

“ರಾಮಮಂದಿರದ ಕುರಿತು ಮಹಾತ್ಮ ಗಾಂಧೀಜಿ ಅವರು ಎಂದಿಗೂ ಪ್ರಸ್ತಾಪ ಮಾಡಿಲ್ಲ. ವಿಶ್ವ ಹಿಂದು ಪರಿಷತ್‌ ಹುಟ್ಟುವ ಮೊದಲೇ ಮಸೀದಿ ಇತ್ತು. ಜಿ.ಬಿ. ಪಂತ್‌ ಅವರು ಮಸೀದಿಯಿಂದ ರಾಮನ ಮೂರ್ತಿಗಳನ್ನು ವಾಪಸ್‌ ತೆಗೆದುಕೊಂಡಿದ್ದರೆ 1992ರಲ್ಲಿ ಮಸೀದಿಯನ್ನು ನೆಲಸಮಗೊಳಿಸಲು ಆಗುತ್ತಿರಲಿಲ್ಲ. ತುಂಬ ವ್ಯವಸ್ಥಿತವಾಗಿ ಮಸೀದಿಯನ್ನು ಮುಸ್ಲಿಮರಿಂದ ಕಿತ್ತುಕೊಳ್ಳಲಾಯಿತು. ಇಂಡಿಯಾ ಒಕ್ಕೂಟದ ಸದಸ್ಯರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರೂ ಈಗ ಹನುಮಾನ್‌ ಚಾಲೀಸಾ ಪಠಣ ಆಯೋಜಿಸಲು ಮುಂದಾಗಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತರ ಮತಗಳೇ ಮುಖ್ಯವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ram Mandir: ಅಮೆಜಾನ್‌ನಲ್ಲಿ ರಾಮಮಂದಿರ ಪ್ರಸಾದ ಸಿಗುತ್ತದೆಯೇ? ಕೇಂದ್ರ ಕೆಂಡವಾಗಿದ್ದೇಕೆ?

Continue Reading

ದೇಶ

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Fire Accident:ಗುಜರಾತ್‌ ರಾಜ್‌ಕೋಟ್‌ ಮಹಾನಗರಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ನಾಲ್ಕು ವರ್ಷಗಳ ಕಾಲ ನೀವು ನಿದ್ದೆಯಲ್ಲಿದ್ದಿರೇ? ನಿಮಗೆ ಕಣ್ಣು ಕಾಣುವುದಿಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಇನ್ನು ಮುಂದೆ ರಾಜ್‌ ಕೋಟ್‌ ಸ್ಥಳೀಯಾಡಳಿತ ಮತ್ತು ರಾಜ್ಯ ಸರ್ಕಾರವನ್ನು ನಂಬಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಅಲ್ಲದೇ ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 28 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹೇಳಿದೆ.

VISTARANEWS.COM


on

Fire accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ (Fire Accident) ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಗತ್ಯ ಅನುಮತಿ ಅಥವಾ ಪರವಾಣಗಿ ಪಡೆಯದೇ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಗೇಮಿಂಗ್‌ ಜೋನ್‌ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗುಜರಾತ್‌ ರಾಜ್‌ಕೋಟ್‌ ಮಹಾನಗರಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ನಾಲ್ಕು ವರ್ಷಗಳ ಕಾಲ ನೀವು ನಿದ್ದೆಯಲ್ಲಿದ್ದಿರೇ? ನಿಮಗೆ ಕಣ್ಣು ಕಾಣುವುದಿಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಇನ್ನು ಮುಂದೆ ರಾಜ್‌ ಕೋಟ್‌ ಸ್ಥಳೀಯಾಡಳಿತ ಮತ್ತು ರಾಜ್ಯ ಸರ್ಕಾರವನ್ನು ನಂಬಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಅಲ್ಲದೇ ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 28 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹೇಳಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು ಬೆಂಕಿ ಅವಘಡ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಕೋರ್ಟ್‌ ಕೂಡ ಅನೇಕ ಸಲಹೆ ಸೂಚನೆ, ತೀರ್ಪನ್ನೂ ನೀಡಿತ್ತು. ಅದಾಗಿಯೂ ಮತ್ತೆ ಮತ್ತೆ ಇಂತಹ ಘಟನೆಗಳು ನಡೆಯುತ್ತಿದೆ ಎಂದಾದರೆ ಅದು ಸರ್ಕಾರ ಬೆಜವಾಬ್ದಾರಿಯುತ ನಡೆ ಎಂದು ಕೋರ್ಟ್‌ ಅಸಮಾಧಾನ ಹೊರ ಹಾಕಿದೆ.

ಶನಿವಾರ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್‌ ಜೋನ್‌ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 28 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ.

ಇದನ್ನೂ ಓದಿ: MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

ಇನ್ನು ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ. ಈ ನಡುವೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Continue Reading
Advertisement
Karan Johar announces Dhadak 2
ಬಾಲಿವುಡ್14 mins ago

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

snake bite in chikkamagaluru
ಕ್ರೈಂ15 mins ago

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

PM Narendra Modi
ಕರ್ನಾಟಕ19 mins ago

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

IPL 2024
ಪ್ರಮುಖ ಸುದ್ದಿ29 mins ago

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

Prajwal revanna Case
ಕರ್ನಾಟಕ32 mins ago

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Munawar Faruqui gets married for second timeʼ Munawar Faruqui gets married for second timeʼ
ಬಾಲಿವುಡ್44 mins ago

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Congress Kutumba programme to strengthen organization at booth level says DCM DK Shivakumar
ಬೆಂಗಳೂರು52 mins ago

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Virat kohli
ಪ್ರಮುಖ ಸುದ್ದಿ55 mins ago

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Road Accident
ಚಿಕ್ಕಮಗಳೂರು58 mins ago

Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಹಿಮಾಲಯ book cover page launch 2
ಪ್ರಮುಖ ಸುದ್ದಿ58 mins ago

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು24 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌