ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಿಭವ್ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಎಂದು ಹೇಳಲಾಗುತ್ತಿದೆ. ಮೇ 13 ರಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಬಂದಿದ್ದಾಗ ಅವರ ಮೇಲೆ ಹಲ್ಲೆ ನಡೆಸಿದ್ದರು.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕುಮಾರ್ ಅವರನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ. ದೆಹಲಿ ಪೊಲೀಸರು ಕುಮಾರ್ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದಾಗ್ಯೂ, ಕುಮಾರ್ ಅವರ ಕಸ್ಟಡಿ ವಿಚಾರಣೆಯನ್ನು ವಕೀಲರು ವಿರೋಧಿಸಿದ್ದರು. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.
ಸೋಮವಾರ, ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿತ್ತು. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ, ನಗರ ನ್ಯಾಯಾಲಯದ ತೀರ್ಪಿನ ವಿರುದ್ಧ ಬಿಭವ್ ಕುಮಾರ್ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.
ವಿಚಾರಣೆಯ ಸಮಯದಲ್ಲಿ ಹಾಜರಾದ ಸ್ವಾತಿ ಮಲಿವಾಲ್ ಅವರು ತನಗೆ ಬೆದರಿಕೆಗಳು ಬರುತ್ತಿವೆ ಎಂದು ಜಾಮೀನು ಅರ್ಜಿಯನ್ನು ವಿರೋಧಿಸಿದರು. ವಿಚಾರಣೆ ವೇಳೆ ಅವರು ಕಣ್ಣೀರಿಟ್ಟಿದ್ದರು.
ಇದನ್ನೂ ಓದಿ: Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ
ಆರೋಪಿಗಳ ಪರವಾಗಿ ಹಾಜರಾದ ವಕೀಲರು “ಇದು ಸಿಎಂ ಅವರ ಅಧಿಕೃತ ನಿವಾಸ. ಅತಿಕ್ರಮಣ ನಡೆದಿದೆ ಮತ್ತು ವರದಿಯನ್ನು ಸಲ್ಲಿಸಲಾಗಿದೆ. ಮಾಲಿವಾಲ್ಗೆ ಆ ಸಭೆಗೆ ಬರಲು ಆಹ್ವಾನ ಹಾಗೂ ನಿಗದಿತ ಸಮಯ ಇರಲಿಲ್ಲ ಎಂದು ವಾದಿಸಿದ್ದಾರೆ.
ಕುಮಾರ್ ಅವರನ್ನು ಮೇ 18ರಂದು ಬಂಧಿಸಲಾಗಿತ್ತು. ಬಂಧನದಿಂದಾಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ನಿಷ್ಪ್ರಯೋಜಕ ನಿರ್ಧರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅದೇ ದಿನ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು. ಕಳೆದ ಶುಕ್ರವಾರ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.
ಕುಮಾರ್ ವಿರುದ್ಧ ಮೇ 16 ರಂದು ವಿವಿಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕ್ರಿಮಿನಲ್ ಬೆದರಿಕೆ, ಹಲ್ಲೆ ಅಥವಾ ಮಹಿಳೆಯ ಮೇಲೆ ಬಲಪ್ರಯೋಗ ಕೇಸುಗಳು ದಾಖಲಾಗಿವೆ.