Site icon Vistara News

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Swati Maliwal

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌(Arvind Kejriwal) ನಿವಾಸದಲ್ಲಿ ಕೆಲವು ದಿನಗಳ ಹಿಂದೆ ಹಲ್ಲೆಗೊಳಗಾಗಿದ್ದ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್‌(Swati Maliwal) ಇಂದು ಕೋರ್ಟ್‌ಗೆ ಹಾಜರಾಗಿದ್ದಾರೆ. ನಿನ್ನೆಯಷ್ಟೇ ಹಲ್ಲೆ ಮಾಡಿರುವ ಆರೋಪಿ ವಿಭವ್‌ ಕುಮಾರ್‌(Bibav Kumar) ವಿರುದ್ಧ ದೂರು ನೀಡಿದ್ದ ಸ್ವಾತಿ ಇಂದು ದೆಹಲಿಯ ತೀಸ್‌ ಹಜಾರಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಇನ್ನ ಸ್ವಾತಿ ನೀಡಿರುವ ದೂರಿನಾಧಾರದಲ್ಲಿ ಪೊಲೀಸರು ವಿಭವ್‌ ಕುಮಾರ್‌ ವಿರುದ್ಧ FIR ದಾಖಲಿಸಿದ್ದಾರೆ.

ಘಟನೆ ನಡೆದು 4 ದಿನಗಳಾದರೂ ಈ ಕುರಿತು ಸ್ವಾತಿ ಅಧಿಕೃತ ದೂರು ನೀಡಿರಲಿಲ್ಲ. ಈ ನಡುವೆ ಗುರುವಾರ ಪೊಲೀಸರು ಸ್ವಾತಿ ಮನೆಗೆ ಆಗಮಿಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ವಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ವಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಪೀರಿಯೆಡ್ಸ್‌ ಆಗಿದೆ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ವಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಟ್ಟಿ ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.

ಇದನ್ನೂ ಓದಿ:Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

ಸ್ವಾತಿ ಪರ ಬಿಜೆಪಿ ಬ್ಯಾಟಿಂಗ್‌

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ. ವಿಚಾರದಲ್ಲಿ ಮೌನ ವಹಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಒಬ್ಬ ಗೂಂಡಾ ಎಂಬುದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ಆರೋಪಿಸಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಕೂಡ ಖಂಡನೆ ವ್ಯಕ್ತಪಡಿಸಿದ್ದು, ಘಟನೆ ನಡೆದು ಇಷ್ಟು ದಿನ ಕಳೆದ ಬಳಿಕ ಸ್ವಾತಿ ದೂರು ನೀಡಿದ್ದಾರೆ ಎಂದಾದರೆ ಅವರ ಮೇಲೆ ಒತ್ತಡ ಇದ್ದಿದ್ದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

Exit mobile version