ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದಲ್ಲಿ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್ಯಸಭೆ ಆಪ್ ಸದಸ್ಯೆ ಸ್ವಾತಿ ಮಾಲಿವಾಲ್ (Swati Maliwal) ಅವರು ಆರೋಪಿಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವ್ ಕುಮಾರ್ (Bibhav Kumar) ಅವರೇ ಹಲ್ಲೆ ಮಾಡಿದ್ದಾರೆ ಎಂದು ಸ್ವಾತಿ ಮಾಲಿವಾಲ್ ಅವರು ಆರೋಪಿಸಿ ಎಫ್‌ಐಆರ್ ಕೂಡ ದಾಖಲಿಸಿದ್ದಾರೆ. ಆದರೆ, ಈ ಪ್ರಕರಣಕ್ಕೀಗ ಟ್ವಿಸ್ಟ್ ಸಿಕ್ಕಿದ್ದು, ಸ್ವಾತಿ ಮಾಲಿವಾಲ್ ಆರೋಪ ಸುಳ್ಳು ಎಂದು ಆಪ್ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿರುವ ಕುರಿತ ವಿಡಿಯೊವನ್ನು ಕೂಡ ಬಿಡುಗಡೆ ಮಾಡಿದ್ದಾರೆ.
“ಸ್ವಾತಿ ಮಾಲಿವಾಲ್ ಅವರು ನೀಡಿರುವ ಹೇಳಿಕೆಯು ಸಂಪೂರ್ಣವಾಗಿ ಸುಳ್ಳುಗಳಿಂದ ಕೂಡಿದೆ ಎಂಬುದು ಈ ವಿಡಿಯೊದಿಂದ ಬಯಲಾಗಿದೆ. ಸ್ವಾತಿ ಮಾಲಿವಾಲ್ ಅವರು ಹೇಳಿದ ಸುಳ್ಳುಗಳನ್ನು ದೇಶದ ಜನರ ಮುಂದಿಡುತ್ತಿದ್ದೇವೆ” ಎಂದು ಆಪ್ ನಾಯಕಿ, ಸಚಿವೆ ಆತಿಶಿ ಅವರು ಸುದ್ದಿಗೋಷ್ಠಿಯಲ್ಲಿ ತಮ್ಮದೇ ಪಕ್ಷದ ನಾಯಕಿ ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ, ಅವರು ದೆಹಲಿ ಸಿಎಂ ಕಚೇರಿಯಲ್ಲಿ ನಡೆದ ಗಲಾಟೆ ಕುರಿತ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.
AAPiya @AtishiAAP ran away on the reporter's question of "aadha adhura video" of Swati Maliwal.
— BALA (@erbmjha) May 17, 2024
Ye karenge Mahila ki suraksha? pic.twitter.com/22oSxx70Dg
ವಿಡಿಯೊದಲ್ಲಿ ಏನಿದೆ?
ದೆಹಲಿ ಸಿಎಂ ಕಚೇರಿಗೆ ಭೇಟಿ ನೀಡಿದ ವೇಳೆ ಸ್ವಾತಿ ಮಾಲಿವಾಲ್ ಅವರಿಗೆ ಭದ್ರತಾ ಸಿಬ್ಬಂದಿಯು ಹೊರಗೆ ತೆರಳಿ ಎಂಬುದಾಗಿ ಹೇಳಿದ್ದಾರೆ. ಆದರೆ, ನಾನು ಹೊರಗೆ ಹೋಗಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭದ್ರತಾ ಸಿಬ್ಬಂದಿಯೊಬ್ಬರಿಗೆ ಬಾಂಡ್ಲಿ (ಬೊಕ್ಕ ತಲೆಯವರು) ಎಂಬುದಾಗಿ ಬೈದಿದ್ದಾರೆ. ನಾನು ಇದರ ಬಗ್ಗೆ ಎಲ್ಲರಿಗೂ ಹೇಳುತ್ತೇನೆ ಎಂದು ಸ್ವಾತಿ ಮಾಲಿವಾಲ್ ಅವರು ದೆಹಲಿ ಸಿಎಂ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮಾಡಿ, ಆದರೆ ಇಲ್ಲಿಂದ ಹೊರಡಿ ಎಂದು ಸಿಬ್ಬಂದಿ ಸೂಚಿಸಿದ್ದಾರೆ. ಆಗ, ಸ್ವಾತಿ ಮಾಲಿವಾಲ್ ಅವರು ಭದ್ರತಾ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿದ್ದಾರೆ. ಇಷ್ಟೆಲ್ಲ ಅಂಶಗಳು ವಿಡಿಯೊದಲ್ಲಿವೆ.
ಸ್ವಾತಿ ಮಾಲಿವಾಲ್ ಆರೋಪವೇನು?
ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ವಿಭವ್ ಕುಮಾರ್ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಟ್ಟಿ ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.