Tamil Nadu Catholic priest Benedict arrested for sexual abuse in BengaluruChurch Priest Arrested: ಸರಸದ ವಿಡಿಯೊ ವೈರಲ್‌, ಬೆಂಗಳೂರಿನಲ್ಲಿ ಕ್ರೈಸ್ತ ಪಾದ್ರಿಯ ಬಂಧನ - Vistara News

ದೇಶ

Church Priest Arrested: ಸರಸದ ವಿಡಿಯೊ ವೈರಲ್‌, ಬೆಂಗಳೂರಿನಲ್ಲಿ ಕ್ರೈಸ್ತ ಪಾದ್ರಿಯ ಬಂಧನ

Church Priest Arrested: ಯುವತಿಯರ ಜತೆ ಆತ್ಮೀಯವಾಗಿ ಕಳೆದ ಕ್ಷಣಗಳಿರುವ ವಿಡಿಯೊ ವೈರಲ್‌ ಆಗುತ್ತಲೇ ಯುವ ಪಾದ್ರಿಯು ತಲೆಮರೆಸಿಕೊಂಡಿದ್ದ. ಕೊನೆಗೆ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

VISTARANEWS.COM


on

Tamil Nadu Catholic priest Benedict arrested for sexual abuse in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಿಳೆಯರ ಜತೆ ಆತ್ಮೀಯವಾಗಿ ಕಳೆದ ದೃಶ್ಯಗಳಿರುವ ವಿಡಿಯೊ ಹಾಗೂ ಫೋಟೊಗಳು ವೈರಲ್‌ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಚರ್ಚ್‌ನ ಪಾದ್ರಿಯೊಬ್ಬನನ್ನು (Church Priest Arrested) ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಕನ್ಯಾಕುಮಾರಿಯ ಸೈರೋ ಮಾಲಂಕರ ಕ್ಯಾಥೋಲಿಕ್‌ ಚರ್ಚ್‌ ಪಾದ್ರಿ ಬೆನೆಡಿಕ್ಟ್‌ ಆ್ಯಂಟೋನನ್ನು ಕನ್ಯಾಕುಮಾರಿ ಪೊಲೀಸರು ಬಂಧಿಸಿದ್ದಾರೆ.

ಬೆನೆಡಿಕ್ಟ್‌ ಆ್ಯಂಟೋ ಹಲವು ಮಹಿಳೆಯರ ಜತೆ ಸರಸವಾಡಿದ, ಅಶ್ಲೀಲದ ಅಂಶಗಳಿರುವ ವಿಡಿಯೊಗಳು ಹಾಗೂ ಫೋಟೊಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಒಂದಷ್ಟು ಜನರು ಪಾದ್ರಿಯ ಲ್ಯಾಪ್‌ಟಾಪ್‌ನಿಂದ ವಿಡಿಯೊ ಹೆಕ್ಕಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿಡಿಯೊಗಳು ವೈರಲ್‌ ಆಗುತ್ತಲೇ ಪಾದ್ರಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ವಿಡಿಯೊ ಕಾಲ್‌ ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದ

ಹಲವು ವರ್ಷಗಳಿಂದ ಪಾದ್ರಿಯಾಗಿ ಕೆಲಸ ಮಾಡುತ್ತಿರುವ ಬೆನೆಡಿಕ್ಟ್‌ ಆ್ಯಂಟೋ, ಯುವತಿಯರು ಹಾಗೂ ಮಹಿಳೆಯರಿಗೆ ಕರೆ ಮಾಡುತ್ತಿದ್ದ, ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ವಿಡಿಯೊ ಕಾಲ್‌ ಮಾಡಿ ಲೈಂಗಿಕ ಪ್ರಚೋದನೆ ನೀಡುತ್ತಿದ್ದ. ಇದೇ ವೇಳೆ ಈತನ ಹುಚ್ಚಾಟದ ವಿಡಿಯೊಗಳನ್ನು ರೆಕಾರ್ಡ್ ಮಾಡಿ, ಸ್ಕ್ರೀನ್‌ಶಾಟ್‌ಗಳನ್ನು ಸಂಗ್ರಹಿಸುತ್ತಿದ್ದ. ಹೀಗೆ ಸಂಗ್ರಹಿಸಿದ ವಿಡಿಯೊಗಳು ಬೇರೆಯವರಿಗೆ ಸಿಕ್ಕಿವೆ. ಬಳಿಕ ಅವುಗಳನ್ನು ಪೋಸ್ಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಾಲಕಿಯರಿಗೂ ಪೀಡಿಸುತ್ತಿದ್ದ ಪಾದ್ರಿ

ಯುವತಿಯರು ಹಾಗೂ ಮಹಿಳೆಯರಿಗೆ ಮಾತ್ರವಲ್ಲ, ಬಾಲಕಿಯರಿಗೂ ಕರೆ ಮಾಡಿ ಪೀಡಿಸುತ್ತಿದ್ದ ಎಂಬುದಾಗಿ ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ. ಹೆಣ್ಣುಮಕ್ಕಳ ಜತೆಗಿನ ವಿಡಿಯೊ ಕಾಲ್‌ಗಳನ್ನು ರೆಕಾರ್ಡ್‌ ಮಾಡಿ, ಅವುಗಳನ್ನು ಅವರಿಗೇ ಕಳುಹಿಸಿ, ಬಾಯಿ ಮುಚ್ಚಿಸುತ್ತಿದ್ದ ಎಂದು ತಿಳಿದುಬಂದಿದೆ. ಇಂತಹ ಕೃತ್ಯಗಳನ್ನು ಎಸಗಲು ಪಾದ್ರಿಯು ಬಾಲಕಿಯರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಎನ್ನಲಾಗುತ್ತಿದೆ.

30 ವರ್ಷದ ಪಾದ್ರಿಯು ಹಲವು ವರ್ಷಗಳಿಂದ ಚರ್ಚ್‌ನಲ್ಲಿದ್ದಾನೆ. ಈತ ಕನ್ಯಾಕುಮಾರಿಯ ನಾಗರಕೊಯಿಲ್‌ ಬಳಿಕ ಮಾರ್ತಾಂಡಂ ಗ್ರಾಮದವನು ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿ, ತಮಿಳುನಾಡಿಗೆ ಕರೆದೊಯ್ದಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದಷ್ಟೇ ಪಾದ್ರಿಯ ಲ್ಯಾಪ್‌ಟಾಪ್‌ ಜಪ್ತಿ ಮಾಡಲಾಗಿದೆ. ಈತ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: Religious Conversion: ಶಿವಮೊಗ್ಗದಲ್ಲಿ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ ಹಲವರು ಪೊಲೀಸ್‌ ವಶಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ. ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Prajwal Revanna Case What is diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading

ದೇಶ

Goldy Brar: ಸಿಧು ಮೂಸೆವಾಲಾ ಹತ್ಯೆ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಕೊಲೆ; ಕೊಂದಿದ್ದು ಯಾರು?

Goldy Brar: ಪಂಜಾಬಿ ಗಾಯಕ, ಕಾಂಗ್ರೆಸ್​ ಮುಖಂಡ ಸಿಧು ಮೂಸೆವಾಲಾ ಅವರನ್ನು 2022ರ ಮೇ ತಿಂಗಳಲ್ಲಿ ಮಾನ್ಸಾ ಜಿಲ್ಲೆಯಲ್ಲಿ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈಗ ಲಾರೆನ್ಸ್‌ ಬಿಷ್ಣೋಯಿ ಆಪ್ತ, ಸಿಧು ಮೂಸೆವಾಲಾ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್‌ನನ್ನು ಅಮೆರಿಕದಲ್ಲಿ ಹತ್ಯೆ ಮಾಡಲಾಗಿದೆ.

VISTARANEWS.COM


on

Goldy Brar
Koo

ವಾಷಿಂಗ್ಟನ್: ಪಂಜಾಬ್​ ಗಾಯಕ ಸಿಧು ಮೂಸೆವಾಲಾ (Sidhu Moosewala) ಹತ್ಯೆಯ ರೂವಾರಿ, ಕೆನಡಾ ಮೂಲದ ಗ್ಯಾಂಗ್​ಸ್ಟರ್​ ಗೋಲ್ಡಿ ಬ್ರಾರ್ (Gangster Goldy Brar) ಅಮೆರಿಕದಲ್ಲಿ ಹತ್ಯೆಗೀಡಾಗಿದ್ದಾನೆ. ದಲ್ಲಾ ಲಖಬೀರ್‌ ಗ್ಯಾಂಗ್‌ ಸದಸ್ಯರು ಕ್ಯಾಲಿಫೋರ್ನಿಯಾದಲ್ಲಿ (California) ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದಾಗ್ಯೂ, ಗೋಲ್ಡಿ ಬ್ರಾರ್‌ ಹತ್ಯೆಯ ಕುರಿತು ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.

ಕ್ಯಾಲಿಫೋರ್ನಿಯಾದಲ್ಲಿರುವ ಹೋಟೆಲ್‌ ಫೇರ್‌ಮೌಂಟ್‌ನಲ್ಲಿ ಲಖಬೀರ್‌ ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. 2022ರ ಮೇ 29ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿದ್ದು, ಈತನೇ ಮಾಸ್ಟರ್‌ಮೈಂಡ್‌ ಎಂದು ತಿಳಿದುಬಂದಿದೆ. ವರ್ಷಾರಂಭದಲ್ಲಿಯೇ ಈತನನ್ನು ಭಯೋತ್ಪಾದಕ ಎಂದು ಭಾರತ ಸರ್ಕಾರ ಘೋಷಿಸಿತ್ತು .

Killer of Sidhu Moosewala Goldy brar declared 'terrorist' under UAPA

ಸಿಧು ಹತ್ಯೆಯ ಮಾಸ್ಟರ್​ ಮೈಂಡ್​ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಎಂಬುದು ಸ್ಪಷ್ಟವಾಗಿದೆ. ಬಿಷ್ಣೋಯಿಯನ್ನು ಈಗಾಗಲೇ ಎನ್​ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಈ ಬ್ರಾರ್​ ಕೂಡ ಅದೇ ಬಿಷ್ಣೋಯಿ ಗ್ಯಾಂಗ್​​ನವನು. ಬ್ರಾರ್ ಮೂಲತಃ ಪಂಜಾಬ್​ನ ಮುಕ್ತ್ಸಾರ್​​ನವನಾಗಿದ್ದು, ಕೆನಡಾದಲ್ಲಿ ನೆಲೆಸಿದ್ದ. ಇವನ​​ ವಿರುದ್ಧ ಇಂಟರ್​​​ಪೋಲ್​ ರೆಡ್​ ನೋಟಿಸ್​ ಜಾರಿಯಾಗಿತ್ತು. ಇವನ ವಿರುದ್ಧ ಕೇವಲ ಸಿಧು ಮೂಸೆ ಹತ್ಯೆ ಕೇಸ್​ ಮಾತ್ರವಲ್ಲ, ಇನ್ನಿತರ ಕೆಲವು ಹತ್ಯೆ, ಕ್ರಿಮಿನಲ್​ ಪಿತೂರಿ, ಕಾನೂನು ಬಾಹಿರ ಶಸ್ತ್ರಾಸ್ತ್ರಗಳ ಪೂರೈಕೆ, ಹತ್ಯೆ ಪ್ರಯತ್ನ ಇನ್ನಿತರ ಅನೇಕ ಕೇಸ್​​ಗಳಲ್ಲಿ ಬೇಕಾದವನಾಗಿದ್ದ.

ಗೋಲ್ಡಿ ಬ್ರಾರ್ ಎಂದೇ ಕುಖ್ಯಾತನಾಗಿರುವ ಸತೀಂದರ್ಜಿತ್ ಸಿಂಗ್, ವಿದ್ಯಾರ್ಥಿ ವೀಸಾ ಮೂಲಕ 2007ರಲ್ಲಿ ಕೆನಾಡಗೆ ಹೋಗಿದ್ದ. ಕೊಲೆ, ಸುಲಿಗೆ ಸೇರಿದಂತೆ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಕೆನಡಾದಲ್ಲಿದ್ದುಕೊಂಡೇ ನಡೆಸುತ್ತಿದ್ದ. ಗಡಿಯಾಚೆಗಿನ ಏಜೆನ್ಸಿಯ ಬೆಂಬಲದೊಂದಿಗೆ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತು ರಾಷ್ಟ್ರೀಯವಾದಿ ಪರ ನಾಯಕರಿಗೆ ಬೆದರಿಕೆ ಕರೆಗಳನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಎಂದು ತಿಳಿದುಬಂದಿದೆ.

ಗೋಲ್ಡಿ ಬ್ರಾರ್ ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದ. ಭಾರತದಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಈತನ ಪಾಲಿದೆ. ಬ್ರಾರ್ ಪಂಜಾಬ್‌ನ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದ. ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳಿಗೆ ಈತ ಉತ್ತೇಜನ ನೀಡುತ್ತಿದ್ದ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Continue Reading

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Salman Khan:ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Salman Khan
Koo

ನವದೆಹಲಿ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ನಿವಾಸದ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಯೊಬ್ಬ ಪೊಲೀಸ್‌ ಕಸ್ಟಡಿ(Police custody)ಯಲ್ಲೇ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾನೆ. ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿರುವ ಅನೂಜ್‌ ತಾಪನ್‌ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರನ್ನು ಸಿಐಡಿ ತನಿಖೆಗೆ ಹಾಜರು ಪಡಿಸಲಾಗಿದೆ. ಸಾಮಾನ್ಯವಾಗಿ ಲಾಕ್‌ ಅಪ್‌ನಲ್ಲಿ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾವಹಿಸುತ್ತಾರೆ. ಹಾಗಿದ್ದರೂ ಕೆಲವು ಆರೋಪಿಗಳು ತಾವು ಧರಿಸಿರುವ ಪೈಜಾಮಾದಿಂದ ಗಂಟು ಹಾಕಿ ಅದರ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದರು. ಇವರನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಲಾಗಿದ್ದು,. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಪೊಲೀಸರು ಘೋಷಿಸಿದ್ದರು.

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಹೇಳಿದ್ದ.

ಇದನ್ನೂ ಓದಿ:Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ ಎಂದು ಹೇಳಿದ್ದ.

Continue Reading

ಪ್ರಮುಖ ಸುದ್ದಿ

SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

SMART Missile: ಸಾಗರ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇರಿಸುವ, ಜಲಾಂತರ್ಗಾಮಿ ನೌಕೆಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವ ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (ಸ್ಮಾರ್ಟ್)‌ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದರಿಂದ ಭಾರತದ ನೌಕಾಪಡೆಗೆ ಹೆಚ್ಚಿನ ಬಲ ಬಂದಂತಾಗಿದೆ.

VISTARANEWS.COM


on

SMART Missile
Koo

ಭುವನೇಶ್ವರ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿರುವ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ದ್ವೀಪದಲ್ಲಿ ಬುಧವಾರ (ಮೇ 1) ಪರೀಕ್ಷಾರ್ಥವಾಗಿ ಉಡಾವಣೆ ಮಾಡಲಾಯಿತು. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿದುಬಂದಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆಯಾಗಿದೆ. 2020ರ ಅಕ್ಟೋಬರ್‌ 5ರಂದು ಅಬ್ದುಲ್‌ ಕಲಾಂ ದ್ವೀಪದಲ್ಲಿಯೇ ಮೊದಲ ಪರೀಕ್ಷೆ ನಡೆಸಲಾಗಿತ್ತು.

ಕ್ಷಿಪಣಿಯ ವೈಶಿಷ್ಟ್ಯಗಳು

  • ಇದು ಕ್ಯಾನಿಸ್ಟರ್‌ ಆಧಾರಿತ, ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದೆ
  • ಭಾರತೀಯ ನೌಕಾಪಡೆಗಾಗಿ ಡಿಆರ್‌ಡಿಒ ದೇಶೀಯವಾಗಿ ನಿರ್ಮಿಸಿದೆ
  • ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಲಿದೆ
  • ಇದು ಸುಮಾರು 643 ಕಿ.ಮೀ ದೂರದ ಗುರಿಯನ್ನು ಹೊಡೆದುರುಳಿಸುವ ದಕ್ಷತೆ ಹೊಂದಿದೆ
  • 50 ಕೆ.ಜಿ. ಸ್ಫೋಟಕಗಳನ್ನು 20 ಕಿಲೋಮೀಟರ್‌ ದೂರದವರೆಗೆ ಸಾಗಿಸುವ ಸಾಮರ್ಥ್ಯ
  • ಆಗಸದಲ್ಲಿಯೇ ಶತ್ರುಗಳ ಪಡೆಯ ನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನದ ಅಳವಡಿಕೆ
  • ಆಗಸದಿಂದಲೂ ಉಡಾವಣೆ ಮಾಡುವ ದಕ್ಷತೆ, ಟ್ರಕ್‌ ಆಧಾರಿತ ಕೋಸ್ಟಲ್‌ ಬ್ಯಾಟರಿ ಮೂಲಕವೂ ಉಡಾವಣೆ ಸಾಧ್ಯ
  • ಇದನ್ನೂ ಓದಿ: Gaganyaan Mission: ಗಗನಯಾನಕ್ಕೆ ಇಸ್ರೋ ಸಿದ್ಧತೆ, ಮತ್ತೊಂದು ಮಹತ್ವದ ಪರೀಕ್ಷೆ ಯಶಸ್ವಿ!
Continue Reading
Advertisement
Saree Fashion
ಫ್ಯಾಷನ್4 mins ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ12 mins ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್12 mins ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ27 mins ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್36 mins ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ46 mins ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Blackmail Case
ಬೆಂಗಳೂರು47 mins ago

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Wedding Eye Makeup Tips
ಫ್ಯಾಷನ್1 hour ago

Wedding Eye Makeup Tips: ಮದುವೆಯಲ್ಲಿ ಮದುಮಗಳ ಐ ಮೇಕಪ್‌ಗೆ 5 ಸಿಂಪಲ್‌ ಸೂತ್ರ

Assault case In Bengaluru
ಬೆಂಗಳೂರು1 hour ago

Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

Hassan Pen Drive Case Prajwal seeks 7 days time to appear for questioning
ಕ್ರೈಂ1 hour ago

Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌