Site icon Vistara News

Organ Donation : ಅಂಗಾಂಗ ದಾನ ಮಾಡಿದವರ ಅಂತ್ಯ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವ

MK Stalin

ಚೆನ್ನೈ: ಈ ಸೌಲಭ್ಯ ಕರ್ನಾಟಕದಲ್ಲಿ ಅಲ್ಲ. ತಮಿಳುನಾಡಲ್ಲಿ. ಶನಿವಾರ ಅಲ್ಲಿನ ಸಿಎಂ ಎಂ. ಕೆ ಸ್ಟಾಲಿನ್ ಅವರು ಈ ಘೋಷಣೆ ಮಾಡಿದ್ದಾರೆ. ಅಂಗಾಂಗ ದಾನಿಗಳ ಅಂತ್ಯಕ್ರಿಯೆಗೆ ತಮ್ಮ ಸರ್ಕಾರ ಸಂಪೂರ್ಣ ಸರ್ಕಾರಿ ಗೌರವಗಳನ್ನು ನೀಡಲಿದೆ ಎಂದು ಪ್ರಕಟಿಸಿದ್ದಾರೆ. ಮೆದುಳು ನಿಷ್ಕ್ರಿಯಗೊಂಡವರು ಮತ್ತು ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬಂದ ಅವರ ಕುಟುಂಬ ಸದಸ್ಯರ ತ್ಯಾಗವನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಅಂಗಾಂಗ ದಾನದಲ್ಲಿ ತಮಿಳುನಾಡು ದೇಶದಲ್ಲಿ ಮುಂಚೂಣಿ ಸ್ಥಾನ ಪಡೆದಿದೆ. ಮೆದುಳು ನಿಷ್ಕ್ರಿಯಗೊಂಡವರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳಿಂದಾಗಿ ತಮಿಳು ನಾಡಿಗೆ ಈ ಗೌರವ ಲಭಿಸಿದೆ ” ಎಂದು ಡಿಎಂಕೆ ಮುಖ್ಯಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​​ನಲ್ಲಿ ಪ್ರಕಟಿಸಿದ್ದಾರೆ.

ಮೆದುಳು ನಿಷ್ಕ್ರಿಯಗೊಂಡ ಮತ್ತು ಅವರ ಅಂಗಾಂಗಗಳನ್ನು ಇತರರಿಗೆ ದಾನ ಮಾಡಿದ ವ್ಯಕ್ತಿಗಳಿಗೆ ಇನ್ನು ಮುಂದೆ ಅಂತಿಮ ವಿಧಿಗಳನ್ನು ನೆರವೇರಿಸುವಾಗ ರಾಜ್ಯ ಸರ್ಕಾರದ ಗೌರವಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ ಈ ಘೋಷಣೆಯನ್ನು ಶ್ಲಾಘಿಸಿದ ಪಿಎಂಕೆ ಮುಖ್ಯಸ್ಥ ಅನ್ಬುಮಣಿ ರಾಮದಾಸ್, ‘ಮೆದುಳು ನಿಷ್ಕ್ರಿಯಗೊಂಡವರು’ ಎಂದು ಘೋಷಿಸಲ್ಪಟ್ಟವರ ನಿಸ್ವಾರ್ಥ ತ್ಯಾಗಕ್ಕೆ ಇದಕ್ಕಿಂತ ಬೇರೆ ಯಾವುದೇ ಗೌರವ ಸಿಗದು ಎಂದು ಹೇಳಿದ್ದಾರೆ.

ಇದನ್ನೂ ಓದಿ : Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

ತಮ್ಮ ಅಂಗಾಂಗಗಳನ್ನು ದಾನ ಮಾಡಿ ಅನೇಕ ಜೀವಗಳನ್ನು ಉಳಿಸುವವರಿಗೆ ಇದಕ್ಕಿಂತ ಉತ್ತಮ ಗೌರವ ಮತ್ತು ಮಾನ್ಯತೆ ನೀಡಲು ಸಾಧ್ಯವಿಲ್ಲ” ಎಂದು ಅವರು ಪಕ್ಷದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಂಗಾಂಗ ದಾನದಲ್ಲಿ ಪಾರದರ್ಶಕತೆಯನ್ನು ತರುವಂತೆ ಪಿಎಂಕೆ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯುವ ಜನರಿಗೆ ಅಂಗಾಂಗಗಳ ಹಂಚಿಕೆಯಲ್ಲಿ ಆದ್ಯತೆ ನೀಡಬೇಕು ಎಂಬುದಾಗಿಯೂ ಅವರು ಹೇಳಿದ್ದಾರೆ.

Exit mobile version