Lok Sabha Election: ಅಮಿತ್‌ ಶಾ, ಚಂದ್ರಬಾಬು ನಾಯ್ಡು ಭೇಟಿ; ಬಿಜೆಪಿ-ಟಿಡಿಪಿ ಮೈತ್ರಿ ಖಚಿತ? - Vistara News

ದೇಶ

Lok Sabha Election: ಅಮಿತ್‌ ಶಾ, ಚಂದ್ರಬಾಬು ನಾಯ್ಡು ಭೇಟಿ; ಬಿಜೆಪಿ-ಟಿಡಿಪಿ ಮೈತ್ರಿ ಖಚಿತ?

Lok Sabha Election: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದು, ಶುಕ್ರವಾರ ಮೈತ್ರಿ ಘೋಷಣೆಯಾಗುವ ಸಾಧ್ಯತೆ ಇದೆ.

VISTARANEWS.COM


on

Amit Shah And Chandra Babu Naidu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರಿ ನೀಡಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಬಿಜೆಪಿ ಹಾಗೂ ತೆಲುಗು ದೇಶಂ ಪಕ್ಷವು (TDP) ಮೈತ್ರಿ (BJP TDP Alliance) ಮಾಡಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿಯಾಗಿದ್ದು, ಶುಕ್ರವಾರವೇ (ಮಾರ್ಚ್‌ 8) ಮೈತ್ರಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಚಂದ್ರಬಾಬು ನಾಯ್ಡು ಅವರು ದೆಹಲಿಯಲ್ಲಿ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ಬಿಜೆಪಿ-ಟಿಡಿಪಿ ಮೈತ್ರಿ, ಶೀಘ್ರವೇ ಸೀಟು ಹಂಚಿಕೆ ಸೇರಿ ಹಲವು ವಿಷಯಗಳ ಕುರಿತು ಚಂದ್ರಬಾಬು ನಾಯ್ಡು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರಪ್ರದೇಶದಲ್ಲಿ 25 ಲೋಕಸಭೆ ಕ್ಷೇತ್ರಗಳಿದ್ದು, ಉಭಯ ಪಕ್ಷಗಳು ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನಕ್ಕೆ ಬರಬೇಕಿದೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮೊದಲು ಕೂಡ ಟಿಡಿಪಿಯು ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. 2018ರಲ್ಲಿ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಸಿಎಂ ಆಗಿದ್ದಾಗ ಎನ್‌ಡಿಎ ತೊರೆದಿದ್ದರು.

ಒಡಿಶಾದ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜು ಜನತಾದಳ ಹಾಗೂ ಬಿಜೆಪಿ ಮಧ್ಯೆ ಮೈತ್ರಿ ಕುರಿತು ಕೂಡ ಮಾತುಕತೆ ನಡೆಯುತ್ತಿದ್ದು, ಇದರ ಬಗ್ಗೆಯೂ ಶುಕ್ರವಾರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಸುಮಾರು 15 ವರ್ಷಗಳ ಬಳಿಕ ಕೇಂದ್ರದಲ್ಲಿ ಎನ್‌ಡಿಎ ಜತೆ ಕೈಜೋಡಿಸಲು ನವೀನ್‌ ಪಟ್ನಾಯಕ್‌ ಅವರು ತೀರ್ಮಾನಿಸಿದ್ದಾರೆ. ರಾಜ್ಯ ಸರ್ಕಾರಕ್ಕೂ ಸಂಪೂರ್ಣ ನೆರವು ನೀಡುವುದಾಗಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Rahul Gandhi: ವಯನಾಡಿನಿಂದಲೇ ರಾಹುಲ್‌ ಗಾಂಧಿ ಸ್ಪರ್ಧೆ; ಕಾಂಗ್ರೆಸ್‌ ಸಿಇಸಿ ತೀರ್ಮಾನ

ಮತ್ತೊಂದೆಡೆ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಅಧೀರ್‌ ರಂಜನ್‌ ಚೌಧರಿ ಸೇರಿ ಹಲವು ನಾಯಕರು ಕಾಂಗ್ರೆಸ್‌ ಕೇಂದ್ರೀಯ ಚುನಾವಣೆ ಸಮಿತಿ ಸಭೆ ನಡೆಸಿದ್ದು, ಶುಕ್ರವಾರವೇ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಕರ್ನಾಟಕದ 11 ಹಾಗೂ ತೆಲಂಗಾಣದ 7 ಲೋಕಸಭೆ ಕ್ಷೇತ್ರಗಳು ಸೇರಿ ಒಟ್ಟು 40 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಶುಕ್ರವಾರ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್ನಾಥ್ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಖಡ್ಸೆ ಅವರು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರ್ಪಡೆಯಾಗಿದ್ದಾರೆ. ಈ ರಕ್ಷಾ ಖಡ್ಸೆ (Raksha Khadse) ಅವರು ರಾಜಕೀಯದಲ್ಲಿ ಬೆಳೆದು ಬಂದ ಹಾದಿ ಕುತೂಹಲಕರವಾಗಿದೆ. ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Raksha Khadse
Koo

ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ರಚನೆಯಾದ 3.0 ಸರಕಾರದ ಸಚಿವಾಲಯದಲ್ಲಿ (3.0 cabinet Ministry) ಈಗ ಎಲ್ಲರ ಗಮನ ಸೆಳೆದಿರುವುದು ಬಿಜೆಪಿ (BJP) ಯುವ ಸಂಸದೆ (MP) ರಕ್ಷಾ ಖಡ್ಸೆ (Raksha Khadse). ಮಹಾರಾಷ್ಟ್ರದ (maharastra) ರೇವರ್ (Raver) ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಬಿಜೆಪಿಯ ರಕ್ಷಾ ಖಡ್ಸೆ , 2024ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್‌ನಾಥ್‌ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಅವರ ಕಠಿಣ ಪರಿಶ್ರಮ ಮತ್ತು ನಿರಂತರ ವಿಜಯಿಯಾಗಿರುವುದಕ್ಕೆ ಕೊಡುಗೆಯಾಗಿ ಅವರನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಎನ್‌ಡಿಎ ಜೊತೆ ವಿವಿಧ ಪಕ್ಷಗಳ ಮೈತ್ರಿ ಬಳಿಕ ಹೊಸ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯ ಮಧ್ಯೆ ಮಹಾರಾಷ್ಟ್ರದ ಹಲವಾರು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಅನುಭವಿಸಿದ್ದರೂ ರಕ್ಷಾ ಖಡ್ಸೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು. ಮಹಾರಾಷ್ಟ್ರದ ರೇವರ್‌ನಲ್ಲಿ ಎರಡು ಬಾರಿ ಬಿಜೆಪಿ ಸಂಸದರಾಗಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ದಾಖಲಿಸಿದರು. ರಕ್ಷಾ ಖಡ್ಸೆ ತಮ್ಮ ಹ್ಯಾಟ್ರಿಕ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರಿದ್ದಾರೆ.


ರಾಜಕೀಯ ಪ್ರವೇಶ

2013ರಲ್ಲಿ ಪತಿ ನಿಖಿಲ್ ಖಡ್ಸೆ ನಿಧನದ ಬಳಿಕ ರಕ್ಷಾ ಖಡ್ಸೆ ಅವರು ತಮ್ಮ ವೈಯಕ್ತಿಕ ವರ್ಚಸ್ಸಿನ ಮೂಲಕವೇ ಎಲ್ಲರ ಗಮನ ಸೆಳೆದಿದ್ದಾರೆ. ಇಬ್ಬರು ಸಣ್ಣ ಮಕ್ಕಳೊಂದಿಗೆ ರಾಜಕೀಯ ಜವಾಬ್ದಾರಿ ಹೊತ್ತ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಇದು ಅವರ ವೈಯಕ್ತಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳೊಂದಿಗೆ ಸಮತೋಲನಗೊಳಿಸುವ ಸಾಮರ್ಥ್ಯವನ್ನು ಎತ್ತಿ ತೋರಿಸಿತ್ತು.

ರಕ್ಷಾ ಖಡ್ಸೆ ಮಧ್ಯಪ್ರದೇಶದ ಖೇಟಿಯಾದಲ್ಲಿ ಜನಿಸಿದರು. ಅವರ ರಾಜಕೀಯ ಜೀವನವು ತಳಮಟ್ಟದಲ್ಲಿ ಪ್ರಾರಂಭವಾಯಿತು. ಕೊಥಡಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರು ಬಳಿಕ ಜಲ್ಗಾಂವ್ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು.

ಯಶಸ್ಸಿನ ಪಯಣ

ಸ್ಥಳೀಯ ರಾಜಕಾರಣದಲ್ಲಿ ಅವರ ಆರಂಭಿಕ ಯಶಸ್ಸು 2014ರ ಲೋಕಸಭಾ ಚುನಾವಣೆಯಲ್ಲಿ ಸಂಸತ್ ಸದಸ್ಯರಾಗಿ (ಸಂಸದ) ಚುನಾವಣೆಗೆ ನಿಲ್ಲಲು ಪ್ರೇರಣೆಯಾಯಿತು. ಎನ್‌ಸಿಪಿಯ ಮನೀಶ್ ಜೈನ್‌ ಅವರನ್ನು 3,18,608 ಮತಗಳ ಅಂತರದಿಂದ ಸೋಲಿಸಿ ಲೋಕಸಭೆ ಪ್ರವೇಶಿಸಿದರು. 16ನೇ ಲೋಕಸಭೆಯ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾದ ಅವರಿಗೆ ಆಗ 26 ವರ್ಷ.

2019ರ ಲೋಕಸಭಾ ಚುನಾವಣೆಯಲ್ಲಿ ಖಡ್ಸೆ ಎರಡನೇ ಬಾರಿಗೆ ರೇವರ್ ಲೋಕಸಭೆಯ ಸಂಸದರಾಗಿ ಮತ್ತೆ ಆಯ್ಕೆಯಾದರು. ಆಗ ಅವರು ಕಾಂಗ್ರೆಸ್‌ನ ಉಲ್ಹಾಸ್ ಪಾಟೀಲ್ ಅವರನ್ನು 3,35,882 ಮತಗಳಿಂದ ಸೋಲಿಸಿದರು.

2024ರ ಲೋಕಸಭಾ ಚುನಾವಣೆಯಲ್ಲಿ, ಅವರು ತಮ್ಮ ರೇವರ್ ಸ್ಥಾನವನ್ನು ಉಳಿಸಿಕೊಂಡರು. ಹತ್ತಿರದ ಎನ್‌ಸಿಪಿ ಶರಾದ್ ಪವಾರ್ ಬಣದ ಅಭ್ಯರ್ಥಿಯನ್ನು 2,72,183 ಮತಗಳ ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಆಸಕ್ತಿ, ಉದ್ದೇಶ

ರಕ್ಷಾ ಅವರ ಎಕ್ಸ್ ಪ್ರೊಫೈಲ್ ಪ್ರಕಾರ ಅವರಿಗೆ ಮಹಿಳಾ ಸಬಲೀಕರಣ, ಮಕ್ಕಳ ಶಿಕ್ಷಣ ಮತ್ತು ರೈತರ ಕಲ್ಯಾಣದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಖಡ್ಸೆ ಅವರ ರಾಜಕೀಯ ಆದ್ಯತೆಗಳು ಜಲ್ಗಾಂವ್ ಪ್ರದೇಶದಲ್ಲಿನ ನೀರಿನ ಕೊರತೆಯನ್ನು ಪರಿಹರಿಸುವುದು ಮತ್ತು ರಸ್ತೆ ಸಂಪರ್ಕವನ್ನು ಸುಧಾರಿಸುವುದು. ಮೂಲಸೌಕರ್ಯ ಮತ್ತು ಶಿಕ್ಷಣಕ್ಕೆ ಅವಶ್ಯಕವೆಂದು ಅವರು ನಂಬಿಕೆ. ರೇವರ್‌ನಲ್ಲಿ ನೀರಾವರಿ ಸ್ಥಾವರಕ್ಕೆ ಧನಸಹಾಯವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Ayodhya’s e-rickshaw : ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

VISTARANEWS.COM


on

Ayodhya's e-rickshaw
Koo

ಬೆಂಗಳೂರು: ರಾಮ ಜನ್ಮಭೂಮಿ ಅಯೋಧ್ಯೆಯಿರುವ ಫೈಜಾಬಾದ್​ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡಿರುವುದು ದೇಶಕ್ಕೆ ದೇಶವೇ ಅಚ್ಚರಿ ಪಡುವ ಸಂಗತಿ. ಅಲ್ಲಿ ಸಮಾಜವಾದಿ ಪಕ್ಷದ ಅವದೇಶ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಇದು ಭಾರತದ ಕೋಟ್ಯಂತರ ಹಿಂದೂಗಳ ಪಾಲಿಗೆ ನೋವಿನ ಸಂಗತಿಯಾಗಿದೆ. ಇದರಿಂದಾಗಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಇದರ ಪರಿಣಾಮ ಅಲ್ಲಿನ ರಿಕ್ಷಾ ಚಾಲಕರಿಗೆ ತಟ್ಟಿದೆ. ದಿನಕ್ಕೆ 1000 ರೂಪಾಯಿ ದುಡಿಯುತ್ತಿದ್ದವರು 250 ರೂಪಾಯಿ ಮಾಡಲೂ ಪೇಚಾಡುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯಾದ ಕೇವಲ ನಾಲ್ಕು ತಿಂಗಳ ನಂತರ ತಮ್ಮ ವ್ಯವಹಾರಕ್ಕೆ ಹೊಡೆತ ಬಿದ್ದಿರುವುದಕ್ಕೆ ಅಯೋಧ್ಯೆಯ ಇ-ರಿಕ್ಷಾ ಚಾಲಕರು ಅಸಮಾಧಾನಗೊಂಡಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಸಂಭ್ರಮದ ನಂತರವೂ ಬಿಜೆಪಿ ಫೈಜಾಬಾದ್ ಸ್ಥಾನವನ್ನು ಕಳೆದುಕೊಂಡಿದ್ದರ ಪರಿಣಾಮ ಅದು ಎಂಬುದು ಅವರಿಗೆ ಅರಿವಾಗಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ನಾವು 10 ವರ್ಷಗಳಿಂದ ಇಲ್ಲಿ ರಿಕ್ಷಾಗಳನ್ನು ಓಡಿಸುತ್ತಿದ್ದೇವೆ. ಅಯೋಧ್ಯೆಯನ್ನು ಸುಂದರ ನಗರವಾಗಿ ನಿರ್ಮಿಸುವುದನ್ನು ಮತ್ತು ಅಭಿವೃದ್ಧಿಪಡಿಸುವುದನ್ನು ನಾವು ನೋಡಿದ್ದೇವೆ. ಆದಾಗ್ಯೂ, ನಾನು ನಿಮಗೆ ಹೇಳುತ್ತೇನೆ, ಬಿಜೆಪಿ ಸರ್ಕಾರವು ಈಗ ಕೆಲವು ತೊಂದರೆಗಳನ್ನು ಎದುರಿಸುತ್ತಿದೆ. ಇಲ್ಲಿ ಅಭಿವೃದ್ಧಿಯ ಕುಸಿತವಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಜವಾಬ್ದಾರರಾಗಿದ್ದಾರೆ ಏಕೆಂದರೆ ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಅವರು ಯಾರನ್ನೂ ಭೇಟಿಯಾಗುವುದಿಲ್ಲ. ಮಂತ್ರಿಗಳು ಆಗಾಗ್ಗೆ ಇಲ್ಲಿಗೆ ಬರುತ್ತಾರೆ. ಆದರೆ ಅವರು ಸಾಮಾನ್ಯ ಜನರೊಂದಿಗೆ ಸಂವಹನ ನಡೆಸುವುದಿಲ್ಲ. ಅವರು ಬರುತ್ತಾರೆ, ರ್ಯಾಲಿಗಳನ್ನು ನಡೆಸುತ್ತಾರೆ ವಾಪಸ್ ಹೋಗುತ್ತಾರೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ

ಇದೇ ಪರಿಸ್ಥಿತಿ ಮುಂದುವರಿದರೆ ಅಯೋಧ್ಯೆ ಮತ್ತು ಇತರ ಅನೇಕ ಸ್ಥಳಗಳಿಗೆ ಹಿನ್ನಡೆಯಾಗುತ್ತದೆ. ನಮ್ಮ ಆದಾಯವು ಗಮನಾರ್ಹವಾಗಿ ಕುಸಿಯುತ್ತಿದೆ. ನಾವು 500-1000 ರೂ.ಗಳನ್ನು ಗಳಿಸುತ್ತಿದ್ದೆವು, ಈಗ 4 ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದಾಗಿನಿಂದ 250 ರೂ.ಗಳನ್ನು ಗಳಿಸುವುದು ಸಹ ಕಷ್ಟಕರವಾಗಿದೆ. ಕೇವಲ ಎರಡು ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

ಲೋಕಸಭಾ ಚುನಾವಣಾ ಫಲಿತಾಂಶಗಳು ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿದ್ದ ಅಯೋಧ್ಯೆಯ ವ್ಯವಹಾರದ ಮೇಲೆ ಪ್ರಭಾವ ಬೀರಿದೆ. ಅಯೋಧ್ಯೆ ಇರುವ ಫೈಜಾಬಾದ್​ನ ಬಿಜೆಪಿ ಅಭ್ಯರ್ಥಿಯ ಸೋಲಿನೊಂದಿಗೆ, ನಗರದ ವಾತಾವರಣವು ಬದಲಾಗಿದೆ.

ಯಾತ್ರಾರ್ಥಿಗಳು ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ. “ಜನರು ರಾಮ ಮಂದಿರ ಮತ್ತು ಹನುಮಾನ್ ಗರ್ಹಿಯಂತಹ ಸ್ಥಳಗಳಲ್ಲಿ ಕುಳಿತಿದ್ದಾರೆ, ಆದರೆ ಇದೀಗ, ಇಲ್ಲಿ ಯಾವುದೇ ಯಾತ್ರಿಕರು ಇಲ್ಲ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ 2019ರ 62 ಸ್ಥಾನಗಳಿಂದ 33 ಸ್ಥಾನಕ್ಕೆ ಇಳಿಕೆಯಾದೆರ ಸಮಾಜವಾದಿ ಪಾರ್ಟಿ 37 ಹಾಗೂ ಕಾಂಗ್ರೆಸ್​ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಒಕ್ಕೂಟ ಒಟ್ಟು 43 ಸ್ಥಾನಗಳನ್ನು ಗಳಿಸಿಕೊಂಡಿದೆ. ಇದು ಕೇಂದ್ರಲ್ಲಿ ಸರಳ ಬಹುಮತದೊಂದಿಗೆ ಸರ್ಕಾರ ರಚಿಸುವ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಶಕ್ತಿಯೂ ಧಕ್ಕೆ ತಂದಿದೆ.

Continue Reading

ಪ್ರಮುಖ ಸುದ್ದಿ

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Free Bus Problem: ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

VISTARANEWS.COM


on

Free Bus Problem
Koo

ಕುಂದಾಪುರ: ಮಳೆಗಾಲ ಬಂತೆಂದರೆ ಒಂದಲ್ಲ ಒಂದು ಸಮಸ್ಯೆ ಕಾಡುತ್ತಿರುತ್ತದೆ. ರಸ್ತೆಯ ಸಮಸ್ಯೆ, ಬಸ್ಸಿನ ಸಮಸ್ಯೆ, ಚರಂಡಿ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳು ಎದುರಾಗುತ್ತದೆ. ಇನ್ನು ಮಳೆಗಾಲದಲ್ಲಿ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಪಾಡಂತೂ ಹೇಳತೀರದು. ಪಟ್ಟಣಗಳಿಗೆ ಹೋಲಿಸಿದರೆ ಹಳ್ಳಿಯಲ್ಲಿರುವ ವಿದ್ಯಾರ್ಥಿಗಳಿಗೆ (Student) ಈ ಮಳೆಗಾಲವೆಂದರೆ ವನವಾಸದ ಹಾಗೇ. ಕೆಲವು ಕಡೆಗಳಲ್ಲಿ ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಅಲ್ಲಲ್ಲಿ ರಸ್ತೆಗಳು ಕೆಟ್ಟಿರುವ ಕಾರಣ ಬಸ್ಸು ಬರುವುದು ತಡವಾಗುತ್ತದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮಹಿಳೆಯರಿಗಾಗಿ ಫ್ರಿ ಬಸ್ (Free Bus Problem )ವ್ಯವಸ್ಥೆ ಮಾಡಿದೆ. ಈ ಬಿಟ್ಟಿ ಭಾಗ್ಯದ  ಬಸ್ ನಿಂದ ಕೆಲವು ಭಾಗದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಈ ಅವ್ಯವಸ್ಥೆ ಕುರಿತು ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ಸುಗಳು 5-10 ನಿಮಿಷಕ್ಕೂ ಬರುತ್ತದೆ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಕೆಲವು ಒಳರಸ್ತೆಯಲ್ಲಿ ಬಸ್ಸುಗಳು ಗಂಟೆಗೊಂದು ಬರುತ್ತದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ರಾಜ್ಯದ  ಆಡಳಿತವನ್ನು ಕೈಗೆ ತೆಗೆದುಕೊಂಡ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಬಿಟ್ಟಿ ಭಾಗ್ಯಗಳನ್ನು ನೀಡಿದೆ. ಅದರಲ್ಲಿ ಫ್ರೀ ಬಸ್ ವ್ಯವಸ್ಥೆ ಕೂಡ ಒಂದು. ಈ ಫ್ರಿ ಬಸ್ ಭಾಗ್ಯದ ಯೋಜನೆ ಜಾರಿಗೆ ಬಂದ ಮೇಲಂತೂ ಸರ್ಕಾರ 10 ಬಸ್ಸು ಓಡಾಡುವ ಸ್ಥಳಗಳಲ್ಲಿ 3-4 ಬಸ್ಸುಗಳನ್ನು ಬಿಟ್ಟಿದ್ದಾರೆ. ಅಲ್ಲದೇ ಬಸ್ಸುಗಳಲ್ಲಿ ಸರಿಯಾದ ಸೀಟಿನ ವ್ಯವಸ್ಥೆ ಇಲ್ಲ, ಬಾಗಿಲು, ಕಿಟಕಿಗಳು ಸರಿಯಿಲ್ಲ. ಹಾಗೇ ಮಳೆಗಾಲದಲ್ಲಿ ಸೋರುವ ಬಸ್ಸುಗಳೇ ಹೆಚ್ಚು. ಬಸ್ಸಿನ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಅವರಿಗೆ ಕಾಲೇಜಿಗೆ ತಲುಪಲು ಆಗುತ್ತಿಲ್ಲ. ಇದರಿಂದ ಅಂದಿನ ಕ್ಲಾಸ್ ಮಿಸ್ ಆಗಿ ಪರೀಕ್ಷೆಯಲ್ಲಿ ಓದಲು ಕಷ್ಟವಾಗುತ್ತದೆ ಎಂಬುದು ವಿದ್ಯಾರ್ಥಿಗಳ ಗೋಳು.

ಬಿಟ್ಟಿ ಭಾಗ್ಯ ಬೇಡವೇ ಬೇಡ!

ಸರ್ಕಾರದ ಇಂತಹ ಫ್ರೀ ಬಸ್ ಅವ್ಯವಸ್ಥೆಯ ವಿರುದ್ಧ ಇದೀಗ ವಿದ್ಯಾರ್ಥಿಯೊಬ್ಬಳು ಕಿಡಿಕಾರಿದ್ದಾಳೆ. ಎಳಬೇರು ಎಂಬ ಊರಿನಿಂದ ಬರುವ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ಸು ಸರಿಯಾದ ಸಮಯಕ್ಕೆ ಸಿಗದ ಕಾರಣ ಸರ್ಕಾರಿ ಅಧಿಕಾರಿಗಳ ಕಚೇರಿಗೆ ತಮ್ಮ ಸಹಪಾಠಿಗಳ ಜೊತೆ ಹೋಗಿ ಸರ್ಕಾರದ ಆಡಳಿತ ವಿರುದ್ಧ ಕಿಡಿಕಾರಿದ್ದಾಳೆ. ಇಂತಹ ಅವ್ಯವಸ್ಥೆಯ ಫ್ರೀ ಬಸ್ ಯೋಜನೆ ನಮಗೆ ಬೇಡವೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಹಾಗೆಯೇ ಈ ಬಗ್ಗೆ ಅಧಿಕಾರಿಗಳು ಸರಿಯಾದ ಕ್ರಮ ತೆಗೆದುಕೊಳ್ಳಬೇಕೆಂದು ಕೇಳಿಕೊಂಡಿದ್ದಾಳೆ.

ಇದನ್ನೂ ಓದಿ:Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

ಫೇಸ್ ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಆಗಿದ್ದು, ಇದಕ್ಕೆ ಹಲವರು ಕಾಮೆಂಟ್ ಮಾಡಿದ್ದಾರೆ. ಹಲವರು ಆ ವಿದ್ಯಾರ್ಥಿನಿಗೆ ಬೆಂಬಲ ನೀಡಿದ್ದಾರೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Continue Reading

ಉದ್ಯೋಗ

Job Alert: ಬಿಎಸ್ಎಫ್‌ನಲ್ಲಿದೆ ಬರೋಬ್ಬರಿ 1,526 ಹುದ್ದೆ; ದ್ವಿತೀಯ ಪಿಯು ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Job Alert: ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ನಿಮ್ಮ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬಿಎಸ್‌ಎಫ್‌ ಖಾಲಿ ಇರುವ ಬರೋಬ್ಬರಿ 1,526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನಾಂಕ ಜುಲೈ 8. ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ವಾರೆಂಟ್‌ ಆಫೀಸರ್‌, ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಹವಲ್ದಾರ್‌ ಹುದ್ದೆಗಳಿದ್ದು, ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಗಡಿ ಭದ್ರತಾ ಪಡೆ (Border Security Force-BSF)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವುದು ಬಹುತೇಕ ಯುವ ಜನತೆಯ ಕನಸು. ಅಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಬಿಎಸ್ಎಫ್‌ ತನ್ನಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌, ಹೆಡ್‌ ಕಾನ್ಸ್‌ಟೇಬಲ್‌ ಸೇರಿ ಬರೋಬ್ಬರಿ 1,526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BSF Recruitment 2024). 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನಾಂಕ ಜುಲೈ 8 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ವಾರೆಂಟ್‌ ಆಫೀಸರ್‌ – 243 ಮತ್ತು ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಹವಲ್ದಾರ್‌ (ಕ್ಲರ್ಕ್‌) – 1,283 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ಮಾಜಿ ಯೋಧರು / ಒಬಿಸಿ ವರ್ಗಕ್ಕೆ 3 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳೆಯರು ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನವನ್ನು ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ (Written Examination), ದೈಹಿಕ ಸಾಮರ್ಥ್ಯ ಪರೀಕ್ಷೆ (Physical Standards Test), ಸ್ಕಿಲ್‌ ಟೆಸ್ಟ್‌ (Skill Test), ದಾಖಲಾತಿ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆ (Medical Examination) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ & ವಾರೆಂಟ್‌ ಆಫೀಸರ್‌ ಹುದ್ದೆಗೆ 29,200 ರೂ. -92,300 ರೂ. ಮತ್ತು ಹೆಡ್‌ ಕಾನ್ಸ್‌ಸ್ಟೇಬಲ್‌ & ಹವಲ್ದಾರ್‌ ಹುದ್ದೆಗೆ 25,500 ರೂ. – 81,100 ರೂ. ಮಾಸಿಕ ವೇತನ ದೊರೆಯಲಿದೆ.

BSF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು, ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ನೋಂದಾಯಿಸಿ. ಒಟಿಪಿಯನ್ನು ನಮೂದಿಸಿ.
  • ಈಗ ತೆರೆದುಕೊಳ್ಳುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: rectt.bsf.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading
Advertisement
Raksha Khadse
ರಾಜಕೀಯ12 mins ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ40 mins ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ42 mins ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ47 mins ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ52 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Free Bus Problem
ಪ್ರಮುಖ ಸುದ್ದಿ54 mins ago

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Mens Stripe Shirt Fashion
ಫ್ಯಾಷನ್1 hour ago

Mens Stripe Shirt Fashion: ಮೆನ್ಸ್ ಕ್ಯಾಶುವಲ್‌ ಲುಕ್‌ಗೆ ರೀ ಎಂಟ್ರಿ ನೀಡಿದ ಸ್ಟ್ರೈಪ್ಡ್ ಶರ್ಟ್ಸ್

MS Dhoni
ಕ್ರೀಡೆ1 hour ago

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

Job Alert
ಉದ್ಯೋಗ1 hour ago

Job Alert: ಬಿಎಸ್ಎಫ್‌ನಲ್ಲಿದೆ ಬರೋಬ್ಬರಿ 1,526 ಹುದ್ದೆ; ದ್ವಿತೀಯ ಪಿಯು ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ52 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ7 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌