ನವದೆಹಲಿ: ಗುಜರಾತ್‌ನಲ್ಲಿ ೨೦೦೨ರಲ್ಲಿ ಸಂಭವಿಸಿದ್ದ ಗಲಭೆಯ ಪ್ರಕರಣದಲ್ಲಿ ನರೇಂದ್ರ ಮೋದಿ ಅವರನ್ನು ಸಿಲುಕಿಸಲು ಸುಳ್ಳು ಸಾಕ್ಷಿ, ಫೋರ್ಜರಿ ಮಾಡಿರುವ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಹಿರಿಯ ಮಾಜಿ ಪೊಲೀಸ್ ಅಧಿಕಾರಿ ಆರ್.ಬಿ ಶ್ರೀಕುಮಾರ್ ಅವರನ್ನು ಜುಲೈ ೧ರ ತನಕ ಗುಜರಾತ್ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಪ್ರಕರಣವನ್ನು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ತಲೆಗೆ ಕಟ್ಟಲು ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸುವುದು, ಫೋರ್ಜರಿ ಮಾಡುವುದು ಇತ್ಯಾದಿ ಕ್ರಿಮಿನಲ್ ಅಪರಾಧಗಳನ್ನು ಮಾಡಿದ್ದಾರೆ ಎಂಬ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ. ತೀಸ್ತಾ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಮುಂಬಯಿನಲ್ಲಿ ಬಂಧಿಸಿದ್ದರು. ಬಳಿಕ ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿತ್ತು.
ಗುಜರಾತ್ ಗಲಭೆಗೆ ಸಂಬಂಧಿಸಿ ನರೇಂದ್ರ ಮೋದಿ ಅವರಿಗೆ ಕ್ಲೀನ್‌ಚಿಟ್ ನೀಡಿದ ಸುಪ್ರೀಂಕೋರ್ಟ್, ತನ್ನ ತೀರ್ಪಿನಲ್ಲಿ ತೀಸ್ತಾ ಸೆಟಲ್ವಾಡ್, ಅಂದಿನ ಹಿರಿಯ ಪೊಲೀಸ್ ಅಧಿಕಾರಿ ಆರ್.ಬಿ ಶ್ರೀಕುಮಾರ್ ಮತ್ತು ಸಂಜೀವ್ ಭಟ್ ವಿರುದ್ಧ ಬೊಟ್ಟು ಮಾಡಿತ್ತು. ಸುಳ್ಳು ಸಾಕ್ಷ್ಯ, ಫೋರ್ಜರಿ ಮೂಲಕ ನಡೆಸಿರುವ ಅಕ್ರಮಗಳನ್ನು ಪರಿಗಣಿಸಿತ್ತು.
ತನಿಖೆಗೆ ತೀಸ್ತಾ ಅಸಹಕಾರ
ತೀಸ್ತಾ ಸೆಟಲ್ವಾಡ್ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ೧೪ ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಬೇಕೆಂದು ಪೊಲೀಸರು ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಗುಜರಾತ್ ಗಲಭೆ: ಫೋರ್ಜರಿ, ಪಿತೂರಿ ಮಾಡಿದ್ದ ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ವಿರುದ್ಧ ಎಫ್‌ಐಆರ್