Site icon Vistara News

Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

Telangana Election Results

Telangana Assembly Election Results 2023: 'Guarantee Schemes' Again Helped For Congress

ಹೈದರಾಬಾದ್:‌ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿದ ಉಚಿತ ಕೊಡುಗೆಗಳ ಭರವಸೆಗಳು ಕೂಡ ಅಧಿಕಾರ ಗಳಿಸಲು ಕಾರಣವಾಗಿವೆ. ಅದರಂತೆ, ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಅವುಗಳನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ, ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲೂ (Telangana Assembly Election) ಕಾಂಗ್ರೆಸ್‌ನ ಉಚಿತ ಕೊಡುಗೆಗಳ ಭರವಸೆಗಳು ಸಕಾರಾತ್ಮಕ ಫಲಿತಾಂಶ ತಂದಿವೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತ (Telangana Election Results) ಗಳಿಸುವುದು ಬಹುತೇಕ ಖಚಿತವಾಗಿದ್ದು, ಇದರ ಹಿಂದೆ ಆಡಳಿತವಿರೋಧಿ ಅಲೆಯ ಜತೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಕೂಡ ಕಾರಣವಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

‌ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ಮಾಡಿದರು. ಕರ್ನಾಟಕದಲ್ಲಿ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳ ಜಾರಿಯ ಕುರಿತು ಪ್ರಚಾರ ನಡೆಸಿದರು. ತೆಲಂಗಾಣ ಕಾಂಗ್ರೆಸ್‌ ಕೂಡ ಕರ್ನಾಟಕ ಮಾದರಿಯಲ್ಲೇ ಆರು ಉಚಿತ ಕೊಡುಗೆಗಳನ್ನು ಘೋಷಣೆ ಮಾಡಿತು. ಅದರಂತೆ, ಈಗ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನತ್ತ ಸಾಗುತ್ತಿದೆ. ಇಂತಹ ಮಹತ್ವದ ಮುನ್ನಡೆಯ ಹಿಂದೆ ಗ್ಯಾರಂಟಿ ಯೋಜನೆಗಳ ಪಾಲೂ ಇದೆ ಎಂದು ಹೇಳಲಾಗುತ್ತಿದೆ.

ಗ್ಯಾರಂಟಿ ಭರವಸೆ ನೀಡಿದ್ದ ಕಾಂಗ್ರೆಸ್

ಕಾಂಗ್ರೆಸ್‌ ನೀಡಿದ ಪ್ರಮುಖ ಭರವಸೆಗಳು

ಇದನ್ನೂ ಓದಿ: Election Results 2023: ವಿಧಾನಸಭೆ ಚುನಾವಣೆಗಳು ಲೋಕಸಭೆಯ ಸೆಮಿಫೈನಲ್‌ ಏಕೆ?

ತೆಲಂಗಾಣದಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸಿದ್ದ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಆಡಳಿತ ವಿರೋಧಿ ಅಲೆ ಇತ್ತು. ಅವರ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದವು. ಇದರಿಂದಾಗಿ ಜನರ ಮನಸ್ಸಿನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಇತ್ತು. ಇದೇ ವೇಳೆ, ಕಾಂಗ್ರೆಸ್‌ನಿಂದ ಹತ್ತಾರು ಭರವಸೆಗಳು ಸಿಕ್ಕವು. ಕರ್ನಾಟಕದಲ್ಲಿ ಯೋಜನೆ ಜಾರಿಯ ಯಶಸ್ಸಿನ ನಿದರ್ಶವನ್ನು ಕಾಂಗ್ರೆಸ್‌ ಜನರಿಗೆ ಸಮರ್ಥವಾಗಿ ಮನವರಿಕೆ ಮಾಡಿತು. ಇದು ಯಶಸ್ಸಿಗೆ ಕಾರಣವಾಯಿತು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Exit mobile version