Site icon Vistara News

Namami Gange: ಟ್ರಾನ್ಸ್‌ಫಾರ್ಮರ್‌ ಸ್ಫೋಟ; ನಮಾಮಿ ಗಂಗೆ ಯೋಜನೆಯ 20 ಕಾರ್ಮಿಕರ ಸಾವು, ಹಲವರಿಗೆ ಗಾಯ

Uttarakhand Namami Gange Project Tragedy

Ten dead, over 20 others injured due to electrocution at Namami Gange project in Uttarakhand

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ (Namami Gange) ವೇಳೆ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 20 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಚಮೋಲಿ ಜಿಲ್ಲೆಯ ಅಲಕನಂದ ನದಿ ತೀರದಲ್ಲಿ ಯೋಜನೆಯ ಕೆಲಸ ನಡೆಯುತ್ತಿರುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದುರಂತದ ವೇಳೆ ಗಾಯಗೊಂಡವರನ್ನು ಆಂಬುಲೆನ್ಸ್‌ ಮೂಲಕ ಕೂಡಲೇ ಆಸ್ಪತ್ರೆಗಳಿಗೆ ರವಾನಿಸಲು ಸಕಲ ವ್ಯವಸ್ಥೆ ಮಾಡಲಾಗಿದೆ. “ನಮಾಮಿ ಗಂಗೆ ಯೋಜನೆಯ ಕಾಮಗಾರಿ ಕೈಗೊಳ್ಳುವ ವೇಳೆ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ. ಗಾಯಾಳುಗಳ ಚಿಕಿತ್ಸೆಗೆ ಸಕಲ ರೀತಿಯ ವ್ಯವಸ್ಥೆ ಮಾಡಲಾಗಿದೆ” ಎಂದು ಚಮೋಲಿ ಎಸ್‌ಪಿ ಪರಮೇಂದ್ರ ದೋವಲ್‌ ಮಾಹಿತಿ ನೀಡಿದ್ದಾರೆ.

ಗಾಯಾಳುಗಳ ರಕ್ಷಣೆ

ತನಿಖೆಗೆ ಆದೇಶಿಸಿ ಸಿಎಂ

ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ದುರಂತ ಸಂಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. “ದುರಂತ ನಡೆದಿರುವ ವಿಷಯ ಕೇಳಿ ವಿಷಾದ ಎನಿಸಿತು. ಜಿಲ್ಲಾಡಳಿತ, ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಗಾಯಗೊಂಡವರನ್ನು ಹೆಲಿಕಾಪ್ಟರ್‌ ಮೂಲಕ ರಿಷಿಕೇಶ್‌ ಏಮ್ಸ್‌ಗೆ ದಾಖಲಿಸಲಾಗಿದೆ. ಹಾಗೆಯೇ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Electric Shock : ಲೈನ್‌ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ ಸಾವು

ದೇಶದ ಪ್ರಮುಖ ನದಿಯಾಗಿರುವ ಗಂಗೆಯ ಒಡಲನ್ನು ಮಲಿನದಿಂದ ಮುಕ್ತಗೊಳಿಸಲು ಹಾಗೂ ನದಿಯನ್ನು ಪುನರುಜ್ಜೀವನ ಗೊಳಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರವು ನಮಾಮಿ ಗಂಗೆ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕಾಗಿ ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿಯನ್ನು ವ್ಯಯಿಸಲಾಗುತ್ತಿದೆ. ಇದೇ ಯೋಜನೆಯ ಕಾಮಗಾರಿ ಕೈಗೊಳ್ಳುವಾಗ ದುರಂತ ಸಂಭವಿಸಿದೆ.

Exit mobile version