ಶ್ರೀನಗರ: ಜಮ್ಮು-ಕಾಶ್ಮೀರ(Jammu-Kashmir)ದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ(Terror Attack) ನಡೆದಿದೆ. ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ. ಕುಪ್ವರಾ ಜಿಲ್ಲೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದ್ದು, ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು.
ಇನ್ನು ಸೇನೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಕುಪ್ವರಾ ಜಿಲ್ಲೆಯ ಕೊವುಟ್ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸೇನೆ ಮೇಲೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬರು ಯೋಧನಿಗೆ ಗಾಯಗಳಾಗಿವೆ. ಘಟನೆಯಲ್ಲಿ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಇನ್ನು ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
OP KOWUT, #Kupwara
— Chinar Corps🍁 – Indian Army (@ChinarcorpsIA) July 24, 2024
Based on specific input regarding presence of terrorists in general area Kowut, Kupwara, a Joint Search Operation was launched by #IndianArmy & @JmuKmrPolice on days leading upto 23 July 24.
On 24 July, suspicious movement was observed and challenged by… pic.twitter.com/0CHyEU59qh
ಜಮ್ಮು-ಕಾಶ್ಮೀರ(Jammu Kashmir)ದಲ್ಲಿ ಕಳೆದ 24ಗಂಟೆಗಳಲ್ಲಿ ಎರಡನೇ ಬಾರಿ ಉಗ್ರರ ದಾಳಿ ನಡೆದಿದೆ. ನಿನ್ನೆಯಷ್ಟೇ ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ ರೇಖೆ(LoC) ಬಳಿ ಒಳನುಸುಳಿದ್ದ ಉಗ್ರರು ದಾಳಿನಡೆಸಿದ್ದು, ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸೇನೆ, ಇಂದು ಮುಂಜಾನೆ 3ಗಂಟೆಗೆ ಬಟ್ಟಲ್ ಸೆಕ್ಟರ್‌ನಲ್ಲಿ ಉಗ್ರರು ನುಸುಳಿದ್ದರು.
ಸೋಮವಾರದಂದು ರಜೌರಿಯ ಗುಂಧಾದಲ್ಲಿರುವ ಗ್ರಾಮ ರಕ್ಷಣಾ ಪಡೆ (ವಿಡಿಜಿ) ಸದಸ್ಯನ ಮನೆಯ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ಒಂದು ದಿನದ ನಂತರ ಇದು ಬಂದಿದೆ. ಆದಾಗ್ಯೂ, ಹತ್ತಿರದ ಸೇನಾ ಘಟಕವು ತ್ವರಿತವಾಗಿ ಪ್ರತಿಕ್ರಿಯಿಸಿ ದೊಡ್ಡ ನಷ್ಟವನ್ನು ತಡೆಯಿತು. ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶೌರ್ಯ ಚಕ್ರ ಪ್ರಶಸ್ತಿ ಪಡೆದ ಪರ್ಷೋತ್ತಮ್ ಕುಮಾರ್ ಗುರಿಯಾಗಿಸಿ ದಾಳಿ ನಡೆದಿತ್ತು. ದಾಳಿಯಲ್ಲಿ ಅವರ ಚಿಕ್ಕಪ್ಪ ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಗುಂಡಿನ ಚಕಮಕಿಯಲ್ಲಿ ದನವೊಂದು ಸತ್ತಿತ್ತು.
ಗುರುವಾರ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಜದ್ದನ್ ಬಾಟಾ ಗ್ರಾಮದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಭಯೋತ್ಪಾದಕರು ಸರ್ಕಾರಿ ಶಾಲೆಯ ತಾತ್ಕಾಲಿಕ ಶಿಬಿರದ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಒಬ್ಬ ಸೈನಿಕನನ್ನು ಹೆಲಿಕಾಪ್ಟರ್ ಮೂಲಕ ಉಧಮ್‌ಪುರ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್