Site icon Vistara News

Terror Attack: ಪೊಲೀಸ್‌ ಚೆಕ್‌ಪೋಸ್ಟ್‌ ಗುರಿಯಾಗಿಸಿ ಉಗ್ರರ ದಾಳಿ; ಸೇನಾ ಕಾರ್ಯಾಚರಣೆ ವೇಳೆ ಭಯೋತ್ಪಾದಕನ ಹತ್ಯೆ

terror attack

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ(Jammu-Kashmir)ಲ್ಲಿ ಉಗ್ರರ ಉಪಟಳ(Terror Attack) ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದೂ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಉಗ್ರರು ದಾಳಿ ನಡೆಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದ ರಫಿಯಾಬಾದ್ ಪ್ರದೇಶದ ವಾಟರ್‌ಗಾಮ್ ಕ್ಯಾಂಪ್ ಬಳಿಯ ಪೊಲೀಸ್ ಪೋಸ್ಟನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಉಗ್ರರ ಪತ್ತೆ ಭಾರತೀಯ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಒಬ್ಬ ಉಗ್ರನನ್ನು(Encounter) ಹತ್ಯೆಗೈಯಲಾಗಿದೆ.

ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಮೂಲಗಳ ಪ್ರಕಾರ, ಇಬ್ಬರು ವಿದೇಶಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ, ಎನ್‌ಕೌಂಟರ್ ಸ್ಥಳದಲ್ಲಿ ಒಬ್ಬ ಉಗ್ರ ಮೃತದೇಹವು ಪತ್ತೆಯಾಗಿದೆ.

ಕೆಲವು ದಿನಗಳ ಹಿಂದೆ ದೋಡಾ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆ ವೇಳೆ ಕ್ಯಾಪ್ಟನ್‌ವೊಬ್ಬರು ಹುತಾತ್ಮರಾಗಿದ್ದರು. ಇನ್ನು ಗುಂಡಿನ ಚಕಮಕಿ(Terror Attack)ಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದ್ದು, ಮೂವರು ಉಗ್ರರು ಎಸ್ಕೇಪ್‌ ಆಗಿದ್ದರು. ಘಟನೆಯಲ್ಲಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ. \

ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕ ಗಾಯಗೊಂಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ. . ಶಿವಘರ್ – ಅಸಾರ್ ವಲಯದಲ್ಲಿ ಈ ಕಾರ್ಯಾಚರಣೆ ನಡೆಯಿತು ಎಂದು ಭಾರತೀಯ ಸೇನೆಯ ಮೂಲಗಳು ಮಾಹಿತಿ ನೀಡಿವೆ.

ಎನ್‌ಕೌಂಟರ್‌ ನಡೆದ ಸ್ಥಳದಿಂದ ಅಮೆರಿಕ ನಿರ್ಮಿತ ಎಂ 4 ಅಸಾಲ್ಟ್ ರೈಫಲ್, ವಿವಿಧ ಉಪಕರಣಗಳು ಹಾಗೂ ಲಾಜಿಸ್ಟಿಕ್ಸ್ ಹೊಂದಿರುವ ಮೂರು ರಕ್ತಸಿಕ್ತ ಚೀಲಗಳನ್ನು ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಸಂಜೆ ಭಯೋತ್ಪಾದಕರ ಅಡಗುತಾಣದ ಬಗ್ಗೆ ಸೇನೆಗೆ ಸುಳಿವು ಲಭಿಸಿತ್ತು. ಹೀಗಾಗಿ ರಾತ್ರಿಯೇ ಸ್ವಲ್ಪ ಸಮಯ ಗುಂಡಿನ ಚಕಮಕಿ ನಡೆದಿತ್ತು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನರಾರಂಭಿಸಲಾಯಿತು.

ಜಮ್ಮು ಮತ್ತು ಕಾಶ್ಮೀಶರದಲ್ಲಿ ಇತ್ತೀಚೆಗೆ ಉಗ್ರರ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪ್ರಮುಖ ನಾಯಕರು ಭಾಗವಹಿಸಿದರು.

ಇದನ್ನೂ ಓದಿ: Terrorist Attack: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Exit mobile version