Site icon Vistara News

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

Terrorist attack

ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ (Terrorist Attack) ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ 6ಗಂಟೆ ಹೊತ್ತಿಗೆ ಜರಾನ್ವಲಿಯಿಂದ ವಾಯುನೆಲೆಗೆ ವಾಪಾಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದ್ದು, ಈ ಬಗ್ಗೆ ಭಾರತೀಯ ವಾಯುಪಡೆ Xನಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇನ್ನು AK ರೈಫಲ್ಸ್‌ ಹೊಂದಿದ್ದ ಉಗ್ರರು ಪಕ್ಕದಲ್ಲಿದ್ದ ಕಾಡಿಗೆ ಓಡಿ ಹೋಗಿರುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಈ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ ಎಂದು ಟ್ವೀಟ್‌ ಮಾಡಿದೆ.

ಇನ್ನು ಪೂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಶುಕ್ರವಾರವೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಆಪರೇಶನ್‌ನಲ್ಲಿ ಇದುವರೆಗೆ ಯಾರೂ ಅರೆಸ್ಟ್‌ ಆಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು‌ ಪೂಂಚ್‌ ಪ್ರದೇಶ ಅನಂತ್‌ನಾಗ್‌ – ರಜೌರಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ.

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version