ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದ್ದು, ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿಯೇ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಎರಡು ಬಾರಿ ದಾಳಿ ನಡೆಸಿದಂತಾಗಿದೆ.
ಉಗ್ರರಿಗಾಗಿ ಶೋಧ ಆರಂಭ
ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಶಂಕೆ ಇರುವ ಕಾರಣ ಯೋಧರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲವು ಯೋಧರು ಇಡೀ ಅರಣ್ಯವನ್ನು ಸುತ್ತುವರಿದಿದ್ದು, ತೀವ್ರತರವಾದ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಇಲ್ಲಿದೆ ದಾಳಿಯ ವಿಡಿಯೊ
🛑⚠️🛑
— Saikiran Kannan | 赛基兰坎南 (@saikirankannan) July 8, 2024
A terrorist attack occurred in the Machedi area of #Kathua district, #JammuKashmir, targeting an Indian Army vehicle. The attack, which took place around 3:30 PM near Jenda Nallah in the village of Badnota, resulted in two Indian Army soldiers being injured.
Security… pic.twitter.com/RvjWEkCKpJ
ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದಾರೆ. ಗಾಯಾಳು ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದಷ್ಟೇ ಭದ್ರತಾ ಸಿಬ್ಬಂದಿಯು ಆರು ಉಗ್ರರನ್ನು (Kashmir Encounter) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಲ್ಗಾಮ್ ಜಿಲ್ಲೆಯ ಫ್ರೈಸಲ್ ಚಿನ್ನಿಗಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಆರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯವರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್