Site icon Vistara News

Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Terrorists Killed

Terrorists Killed

ಬಾರಾಮುಲ್ಲಾ: ಲೋಕಸಭಾ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಗಡಿ ನಿಯಂತ್ರಣ ರೇಖೆ(LOC) ದಾಟಿ ಒಳನುಸುಳಲು ಯತ್ನಿಸಿದ್ದ ನಾಲ್ವರು ಉಗ್ರರನ್ನು(Terrorists Killed) ಭಾರತೀಯ ಸೇನೆ(Indian Army) ಸದೆಬಡೆದಿದೆ. ಉತ್ತರ ಕಾಶ್ಮೀರದ ಕುಪ್ವಾರಾದಲ್ಲಿ ತಂಗ್ದಾರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.

ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಮೇಲೂ ಸೇನೆ ಪ್ರತಿದಾಳಿ ನಡೆಸಿದೆ. ಪಾಕ್‌ ಆಕ್ರಮಿತ ಕಾಶ್ಮೀರ(PoK)ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ನಾಲ್ವರು ಉಗ್ರರ ಮೃತದೇಹ ಸಿಕ್ಕಿದೆ. ಇನ್ನು ಅಮ್ರೋಹಿ, ತಂಗ್ದಾರ್‌ ಪ್ರದೇಶಗಳಲ್ಲಿ ಸೇನೆ ಶೋಧ ಕಾರ್ಯಾಚರಣೆ ಮುಂದುವರೆಸಿದ್ದು, ಎರಡು ಪಿಸ್ತೂಲ್‌, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ.

ಪಾಕಿಸ್ತಾನಿ ಒಳನುಸುಳುಕೋರ ಅರೆಸ್ಟ್‌

ಮತ್ತೊಂದೆಡೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿರು ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲಕ ಒಳನುಸುಳುಕೋರನನ್ನು ಅರೆಸ್ಟ್‌ ಮಾಡಲಾಗಿದೆ. ಬಂಧಿತನನ್ನು ಜಹೀರ್‌ ಖಾನ್‌ ಎಂದು ಗುರುತಿಸಲಾಗಿದೆ. ಕರಾಚಿ ಮೂಲದ ಜಹೀರ್‌ ಖಾನ್‌, ದೇಶದ ಗಡಿಯೊಳಗೆ ಪ್ರವೇಶಿಸಿದ್ದ. ಈತ ಅನುಮಾನಾಸ್ಪದವಾಗಿ ಓದಾಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾರಾಮುಲ್ಲಾ ಚುನಾವಣೆ

ಮೇ20ರಂದು ಬಾರಾಮುಲ್ಲಾದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಈಬಾರಿ ಅತಿ ಹೆಚ್ಚು ಮತದಾನ ಆಗುವ ಮೂಲಕ ಶ್ರೀನಗರದ ದಾಖಲೆ ಮುರಿಯುವ ನಿರೀಕ್ಷೆ ಇದೆ. ಬಾರಾಮುಲ್ಲಾ ಕ್ಷೇತ್ರ ಒಟ್ಟು 16 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಸಜ್ದ್ ಲೋನ್, ಪಿಡಿಪಿ ನಾಯಕ ಮತ್ತು ರೈತ ರಾಜ್ಯಸಭಾ ಸಂಸದ ಮೀರ್ ಫಯಾಜ್, ಮತ್ತು ರೈತ ಮುಲಾ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಈ ಬಾರಿ ಬಾರಾಮುಲ್ಲಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ:Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Exit mobile version