Thirumavalavan Controversy: "ಸನಾತನಿ ಉಗ್ರರು ಸಚಿವರ ಜೊತೆ ವೇದಿಕೆಯಲ್ಲೇ ಕಾಣ ಸಿಗುತ್ತಾರೆ"- ಕಾಂಗ್ರೆಸ್‌ ಮಿತ್ರಪಕ್ಷ ಮುಖಂಡನ ವಿವಾದ - Vistara News

ದೇಶ

Thirumavalavan Controversy: “ಸನಾತನಿ ಉಗ್ರರು ಸಚಿವರ ಜೊತೆ ವೇದಿಕೆಯಲ್ಲೇ ಕಾಣ ಸಿಗುತ್ತಾರೆ”- ಕಾಂಗ್ರೆಸ್‌ ಮಿತ್ರಪಕ್ಷ ಮುಖಂಡನ ವಿವಾದ

Thirumavalavan Controversy: ಸನಾತನ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಭೀತಿಯಿಂದ ಸಂಚರಿಸುತ್ತಿದ್ದಾರೆ. ಶಸ್ತ್ರ ಸಜ್ಜಿತ ಮಾವೋವಾದಿಗಳು ಅರಣ್ಯಗಳಲ್ಲಿ ಅಡಗಿ ಕುಳಿತಿದ್ದಾರೆ. ಸನಾತನ ಉಗ್ರರು ಕೇಂದ್ರ ಸಚಿವರ ಜೊತೆಯಲ್ಲಿಯೇ ಓಡಾಡುತ್ತಿದ್ದಾರೆ. ಅವರಿಗೆ ಎಷ್ಟು ದೊಡ್ಡ ಹುದ್ದೆಯಾದರೂ ಸಿಗುತ್ತದೆ. ಮತ್ತು ಯಾವ ನಿರ್ಧಾರಗಳಾದರೂ ಅವರೇ ತಗೆದುಕೊಳ್ಳುತ್ತಾರೆ ತಿರುಮಾವಲವನ್‌ ಎಂದಿದ್ದಾರೆ.

VISTARANEWS.COM


on

tirumavalavan controversy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮಿಳುನಾಡು: ಬಿಜೆಪಿ, ಪ್ರಧಾನಿ ಮೋದಿ(PM Narendra Modi) ಹಾಗೂ ಆರ್‌ಎಸ್‌ಎಸ್‌ ಅನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಹಾಗೂ ಇತರೆ ಪ್ರತಿಪಕ್ಷಗಳ ನಾಯಕರು ಸನಾತನ ಧರ್ಮದ(Sanatan Dharma) ಅಸ್ಥಿತ್ವವನ್ನೇ ಪ್ರಶ್ನಿಸಿ ವಿವಾದಕ್ಕೀಡುವುದು ಇದೆ. ಇದೀಗ ಕಾಂಗ್ರೆಸ್‌(Congress) ನೇತೃತ್ವದ ಇಂಡಿಯಾ ಒಕ್ಕೂಟ(I.N.D.I. Alliance)ದ ಮಿತ್ರ ಪಕ್ಷ ವಿದುತಲೈ ಚಿರುತೈಗಲ್‌ ಕಚ್ಛಿ(VCK) ಪಕ್ಷ ಸಂಸ್ಥಾಪಕ ತಿರುಮಾವಲವನ್‌(Thirumavalavan Controversy) ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ತಾವು ಆಯೋಜಿಸಿದ್ದ ವಾರ್ಷಿಕ VCK ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸನಾತನ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಭೀತಿಯಿಂದ ಸಂಚರಿಸುತ್ತಿದ್ದಾರೆ. ಶಸ್ತ್ರ ಸಜ್ಜಿತ ಮಾವೋವಾದಿಗಳು ಅರಣ್ಯಗಳಲ್ಲಿ ಅಡಗಿ ಕುಳಿತಿದ್ದಾರೆ. ಸನಾತನ ಉಗ್ರರು ಕೇಂದ್ರ ಸಚಿವರ ಜೊತೆಯಲ್ಲಿಯೇ ಓಡಾಡುತ್ತಿದ್ದಾರೆ. ಅವರಿಗೆ ಎಷ್ಟು ದೊಡ್ಡ ಹುದ್ದೆಯಾದರೂ ಸಿಗುತ್ತದೆ. ಮತ್ತು ಯಾವ ನಿರ್ಧಾರಗಳಾದರೂ ಅವರೇ ತಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಸನಾತನ ಉಗ್ರರು ನಮ್ಮ ಜೊತೆಯಲ್ಲಿಯೇ ನಮ್ಮ ಮನೆಯಲ್ಲಿಯೇ ವಾಸಿಸುತ್ತಾರೆ. ಯಾವುದೇ ಸಮಯದಲ್ಲೂ ನಿಮ್ಮ ಮನೆಗೆ ನುಗ್ಗಿ ನಿಮ್ಮನ್ನು ಕೊಲ್ಲಬಹುದು. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಸ್ವತಂತ್ರವಾಗಿ ಓಡಾಡುತ್ತಿದ್ದಾರೆ. ಅಲ್ಲದೇ ಬಿಜೆಪಿ ನಾಯಕರ ಜೊತೆಗೇ ವೇದಿಕೆಯಲ್ಲಿ ರಾಜಾರೋಷವಾಗಿ ಕಾಣಿಸಿಕೊಳ್ಳುತ್ತಾರೆ. ಅವರು ಎಲ್ಲೂ ಅಡಗಿ ಕೂರುವುದು ಅಥವಾ ಓಡುವುದು ಇದೆಲ್ಲಾ ಮಾಡುವುದೇ ಇಲ್ಲ. ಸಚಿವರ ಜಿತೆ ವೇದಿಕೆಯಲ್ಲೇ ಕಾಣಿಸಿಕೊಳ್ಳುವ ಕಾರಣ ಅವರಿಗೆ ಯಾವ ಭಯವೂ ಇರುವುದಿಲ್ಲ. ಇನ್ನು ಪ್ರಕಾಶ್‌ ರಾಜ್‌ರಂತಹ ವ್ಯಕ್ತಿಗಳನ್ನು ನಾವು ಉಳಿಸಿಕೊಳ್ಳಬೇಕಾಗಿದೆ. ಅವರ ಧೈರ್ಯವನ್ನ ಮೆಚ್ಚಲೇ ಬೇಕು ಎಂದು ಹೇಳಿದರು.

ಚೆನ್ನೈನಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಟ ಪ್ರಕಾಶ್‌ ರಾಜ್‌ ಅವರಿಗೆ ಅಂಬೇಡ್ಕರ್‌ ಸುದಾರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಷ್ಟೇ ಅಲ್ಲದೇ ಅನೇಕ ಎಡಪಂಥೀಯ ನಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿ ಪ್ರಕಾಶ್‌ ರಾಜ್‌, ಪ್ರಧಾನಿ ಮೋದಿ ಅವರ ದೈವಾಂಶ ಸಂಭೂತ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದರು. ಇಲ್ಲಿಗೆ ನಮ್ಮ ಕೆಲಸ ಮುಗಿಯುವುದಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದಕ್ಕೆ ಎಂದಿಗೂ ನಾನು ಹೆದರುವುದಿಲ್ಲ. ಅವರು (ಪ್ರಧಾನಿ ನರೇಂದ್ರ ಮೋದಿ) ಈಗ ಭಯಗೊಂಡಿದ್ದಾರೆ. ಅವರಂತಹವರು ಮತ್ತೆ ಬರದಂತೆ ನೋಡಿಕೊಳ್ಳಲು ನಾವು ಕೆಲಸ ಮಾಡಬೇಕು. ರಾಜಕೀಯ ಪಕ್ಷಗಳು ಬರುತ್ತವೆ ಹೋಗುತ್ತವೆ, ಆದರೆ ಜನರು ಶಾಶ್ವತ. ತಪ್ಪು ಪಕ್ಷವನ್ನು ಆರಿಸಿದರೆ ನಷ್ಟವಾಗುವುದು ಜನರಿಗೇ ಎಂದರು.

ಇದನ್ನೂ ಓದಿ: Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Narendra Modi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವನ್‌ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು. ಜೇಕ್‌ ಸುಲಿವನ್‌ ಅವರ ಜತೆಗಿನ ಭೇಟಿಯ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರೇ ಮಾಹಿತಿ ನೀಡಿದ್ದಾರೆ. ಇಬ್ಬರೂ ರಕ್ಷಣೆ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯಲ್ಲಿ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ (US NSA) ಜೇಕ್‌ ಸುಲಿವನ್‌ (Jake Sullivan) ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಭಾರತ ಪ್ರವಾಸ ಕೈಗೊಂಡಿರುವ ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಕ್ಷಣೆ, ಭದ್ರತೆ, ದ್ವಿಪಕ್ಷೀಯ ಸಂಬಂಧ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜೇಕ್‌ ಸುಲಿವನ್‌ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ. “ಅಮೆರಿಕ ಎನ್‌ಎಸ್‌ಎ ಜೇಕ್‌ ಸುಲಿವನ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದೆ. ಜಾಗತಿಕ ಸ್ಥಿರತೆ ಹಾಗೂ ಅಭಿವೃದ್ಧಿಗಾಗಿ ಅಮೆರಿಕದ ಜತೆ ಭಾರತವು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮುಂದುವರಿಸಲು ಬದ್ಧವಾಗಿದೆ” ಎಂಬುದಾಗಿ ಬರೆದುಕೊಂಡಿದ್ದಾರೆ. ಜೂನ್‌ 18ರಂದು ಕೂಡ ಜೇಕ್‌ ಸುಲಿವನ್‌ ಅವರು ಭಾರತದಲ್ಲಿಯೇ ಇರಲಿದ್ದಾರೆ.

ಇಟಲಿಯಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತ ಹಾಗೂ ಅಮೆರಿಕ ಸಂಬಂಧ, ಪರಸ್ಪರ ಸಹಕಾರ, ನೆರವು, ಒಪ್ಪಂದ, ರಕ್ಷಣೆ ಸೇರಿ ಹಲವು ವಿಷಯಗಳ ಕುರಿತು ನರೇಂದ್ರ ಮೋದಿ ಅವರು ಜೋ ಬೈಡೆನ್‌ ಅವರೊಂದಿಗೆ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಜೇಕ್‌ ಸುಲಿವನ್‌ ಅವರು ಭಾರತಕ್ಕೆ ಆಗಮಿಸಿರುವುದು ಮಹತ್ವದ ಸಂಗತಿ ಎಂದೇ ಹೇಳಲಾಗುತ್ತಿದೆ.

ದೋವಲ್-ಜೇಕ್‌ ಭೇಟಿ

ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೊದಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಭೇಟಿಯಾದರು. ರಕ್ಷಣಾ ಒಪ್ಪಂದಗಳು ಹಾಗೂ ಪ್ರಾದೇಶಿಕ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸುವ ಭಾರತ-ಅಮೆರಿಕ ನಡುವಿನ ಇನಿಶಿಯೇಟಿವ್‌ ಆನ್‌ ಕ್ರಿಟಿಕಲ್‌ ಆ್ಯಂಡ್‌ ಎಮರ್ಜಿಂಗ್‌ ಟೆಕ್ನಾಲಜೀಸ್‌ (iCET) ಯೋಜನೆ ಜಾರಿ ಕುರಿತು ಇಬ್ಬರೂ ಎನ್‌ಎಸ್‌ಗಳು ಚರ್ಚಿಸಿದರು ಎಂಬುದಾಗಿ ಮೂಲಗಳು ತಿಳಿಸಿವೆ. ಇಂಡಿಯಾ-ಮಿಡಲ್‌ ಈಸ್ಟ್-ಯುರೋಪ್‌ ಎಕನಾಮಿಕ್‌ ಕಾರಿಡಾರ್‌ (IMEC) ಕುರಿತು ಕೂಡ ಚರ್ಚೆ ನಡೆಸಿದರು ಎನ್ನಲಾಗಿದೆ.

ಇದನ್ನೂ ಓದಿ: Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading

ದೇಶ

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Narendra Modi: ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದಷ್ಟೇ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿದ್ದರು. ಇದೇ ಫೋಟೊವನ್ನು ಇಟ್ಟುಕೊಂಡು ಮೋದಿ ಅವರನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ ಈಗ ಸೆಲ್ಫ್‌ಗೋಲ್‌ ಹೊಡೆದುಕೊಂಡಿದೆ. ಮೋದಿ ಕುರಿತ ಲೇವಡಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್‌ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡುವ ಭರದಲ್ಲಿ ಕೇರಳ ಕಾಂಗ್ರೆಸ್‌ (Kerala Congress) ಘಟಕವು ಪ್ರಮಾಣದ ಎಸಗಿದ್ದು, ತಪ್ಪಿನ ಅರಿವಾಗಿ ಬಳಿಕ ಕ್ಷಮೆಯಾಚಿಸಿದೆ. ಇತ್ತೀಚೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ನರೇಂದ್ರ ಮೋದಿ (Narendra Modi) ಅವರು ಪೋಪ್‌ ಫ್ರಾನ್ಸಿಸ್‌ (Pope Francis) ಅವರನ್ನು ಭೇಟಿಯಾಗಿದ್ದರು. ಇದರ ಕುರಿತು ಲೇವಡಿ ಮಾಡಿದ ಕೇರಳ ಕಾಂಗ್ರೆಸ್‌, “ಕೊನೆಗೂ ಪೋಪ್‌ ಫ್ರಾನ್ಸಿಸ್‌ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂಬುದಾಗಿ ಪೋಸ್ಟ್‌ ಮಾಡಿದೆ. ಇದಾದ ನಂತರ ಜನಾಕ್ರೋಶ ವ್ಯಕ್ತವಾಗಿದ್ದು, ಬಳಿಕ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದೆ.

ಇಟಲಿಯಲ್ಲಿ ನರೇಂದ್ರ ಮೋದಿ ಹಾಗೂ ಪೋಪ್‌ ಫ್ರಾನ್ಸಿಸ್‌ ಅವರು ಭೇಟಿಯಾಗಿರುವ ಫೋಟೊವನ್ನು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿತ್ತು. ಆ ಮೂಲಕ ನರೇಂದ್ರ ಮೋದಿ ಅವರೇ ದೇವರಾಗಿದ್ದು, ಅವರನ್ನು ಭೇಟಿಯಾಗುವ ಅವಕಾಶವು ಪೋಪ್‌ ಅವರದ್ದಾಗಿದೆ ಎಂಬಂತೆ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಚುನಾವಣೆ ಪ್ರಚಾರದ ವೇಳೆ, “ನಿಮ್ಮ ಸೇವೆ ಮಾಡಲಿ ಎಂಬುದಾಗಿ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂಬುದಾಗಿ ಮೋದಿ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್‌ ಲೇವಡಿ ಮಾಡಿತ್ತು.

ಕೇರಳ ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. “ಇಸ್ಲಾಮಿಕ್‌ ಮೂಲಭೂತವಾದಿಗಳು ಹಾಗೂ ನಗರ ನಕ್ಸಲರು ಕೇರಳ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ದೇಶದ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದು ಇವರ ಕೆಲಸವೇ ಆಗಿದೆ. ಈಗ ಗೌರವಾನ್ವಿತ ಪೋಪ್‌ ಹಾಗೂ ಕ್ರೈಸ್ತ ಸಮುದಾಯದ ಕುರಿತು ಕೂಡ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದನ್ನು ಇವರು ಬಿಟ್ಟಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೈಸ್ತರಿಗೆ ಕಾಂಗ್ರೆಸ್‌ ಅವಮಾನ ಮಾಡಲಾಗಿದೆ ಎಂದೇ ಬಿಜೆಪಿ ನಾಯಕರು ಚಾಟಿ ಬೀಸಿದರು.

ಕೇರಳ ಕಾಂಗ್ರೆಸ್‌ನ ಪೋಸ್ಟ್‌ ವೈರಲ್‌ ಆಗಿ, ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲೇ ಪೋಸ್ಟ್‌ಅನ್ನು ಡಿಲೀಟ್‌ ಮಾಡಲಾಗಿದೆ. ಅಷ್ಟೇ ಅಲ್ಲ, “ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಾಗಿರಲಿಲ್ಲ. ಪೋಸ್ಟ್‌ನಿಂದ ಬೇಸರ ಆಗಿದ್ದರೆ ಕ್ಷಮೆಯಾಚಿಸುತ್ತೇವೆ” ಎಂಬುದಾಗಿ ಕೇರಳ ಕಾಂಗ್ರೆಸ್‌ ಪ್ರಕಟಣೆ ಹೊರಡಿಸಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ಜನಸಂಖ್ಯೆಯಲ್ಲಿ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಕೆಲವು ಕ್ರೈಸ್ತ ಸಮುದಾಯದ ಮುಖಂಡರು ಕೂಡ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading

ದೇಶ

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhiರಾಹುಲ್‌ ಗಾಂಧಿ ಅವರು 2019ರಲ್ಲಿ ಉತ್ತರ ಪ್ರದೇಶ ಅಮೇಥಿ ಹಾಗೂ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋಲನುಭವಿಸಿದ ಕಾರಣ ಅವರು ವಯನಾಡು ಸಂಸದರಾಗಿ ಮುಂದುವರಿದಿದ್ದರು. ಆದರೆ, 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು 2004ರಿಂದಲೂ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈಗ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಸಂಸದರಾಗಿ ಮುಂದುವರಿಯಲು ತೀರ್ಮಾನಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಗೆಲುವು ಸಾಧಿಸಿದ ರಾಹುಲ್‌ ಗಾಂಧಿ ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಕುತೂಹಲ, ಪ್ರಶ್ನೆಗೆ ತೆರೆಬಿದ್ದಿದೆ. ತಾಯಿ ಸೋನಿಯಾ ಗಾಂಧಿ (Sonia Gandhi) ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿಯನ್ನೇ ರಾಹುಲ್‌ ಗಾಂಧಿ (Rahul Gandhi) ಉಳಿಸಿಕೊಂಡಿದ್ದಾರೆ. ಇನ್ನು, ರಾಹುಲ್‌ ಗಾಂಧಿಯಿಂದ ತೆರವಾಗುವ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಪ್ರಿಯಾಂಕಾ ವಾದ್ರಾ (Priyanka Vadra) ಅವರು ವಯನಾಡಿನಿಂದ ಸ್ಪರ್ಧಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಯಾವ ಕ್ಷೇತ್ರದ ಸಂಸದರಾಗಿ ಮುಂದುವರಿಯಬೇಕು ಎಂಬ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದರು. “ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಸಂಸದರಾಗಿ ಮುಂದುವರಿಯಲಿದ್ದಾರೆ. ವಯನಾಡು ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ. ಈ ಕುರಿತು ಪಕ್ಷವು ತೀರ್ಮಾನ ತೆಗೆದುಕೊಂಡಿದೆ” ಎಂಬುದಾಗಿ ಖರ್ಗೆ ಮಾಹಿತಿ ನೀಡಿದರು.

ಸಭೆಯ ಬಳಿಕ ಮಾತನಾಡಿದ ರಾಹುಲ್‌ ಗಾಂಧಿ, “ನಾನು ವಯನಾಡಿನ ಜನತೆ ಜತೆ ಕಳೆದ ಐದು ವರ್ಷಗಳಿಂದ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ಕಳೆದ ಐದು ವರ್ಷಗಳಿಂದ ವಯನಾಡು ಸಂಸದನಾಗಿದ್ದ ನನಗೆ ಅಲ್ಲಿನ ಜನ ತೋರಿಸಿದ ಪ್ರೀತಿ, ಬೆಂಬಲ ಅಪಾರವಾದುದು. ಈಗ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ. ನಾನು ಕೂಡ ವಯನಾಡಿಗೆ ಆಗಾಗ ಭೇಟಿ ನೀಡುತ್ತಿರುತ್ತೇನೆ” ಎಂದು ಹೇಳಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭಾಗವಹಿಸಿದರು. ಇನ್ನು, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನೇ ಆಯ್ಕೆ ಮಾಡುವ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ.

ರಾಹುಲ್‌ ಗಾಂಧಿ ಅವರು 2019ರಲ್ಲಿ ಉತ್ತರ ಪ್ರದೇಶ ಅಮೇಥಿ ಹಾಗೂ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸೋಲನುಭವಿಸಿದ ಕಾರಣ ಅವರು ವಯನಾಡು ಸಂಸದರಾಗಿ ಮುಂದುವರಿದಿದ್ದರು. ಆದರೆ, 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು 2004ರಿಂದಲೂ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ವಯನಾಡು ಹಾಗೂ ರಾಯ್‌ಬರೇಲಿಯಲ್ಲಿ ಗೆಲುವು ಸಾಧಿಸಿದ ಕಾರಣ, ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿತ್ತು.

ಈಗ ರಾಹುಲ್‌ ಗಾಂಧಿ ಅವರು ತಾಯಿಯ ಕ್ಷೇತ್ರವಾದ ರಾಯ್‌ಬರೇಲಿಯನ್ನೇ ಉಳಿಸಿಕೊಂಡಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶ ಪಡೆದಿರುವ ಕಾರಣ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಸ್ಪರ್ಧಿಸುವಂತಾಗಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ವಯನಾಡು ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಇವರಿಗೆ ಇದೇ ಮೊದಲ ಚುನಾವಣೆ ಆಗಿದೆ. ಚುನಾವಣೆಗೂ ಮೊದಲು, ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಿಂದ, ರಾಹುಲ್‌ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Continue Reading
Advertisement
Lockie Ferguson
ಕ್ರಿಕೆಟ್1 hour ago

Lockie Ferguson: 4 ಓವರ್‌ ಎಸೆದು, ಒಂದೂ ರನ್‌ ಕೊಡದೆ 3 ವಿಕೆಟ್‌ ಕಿತ್ತ ಲಾಕಿ ಫರ್ಗ್ಯೂಸನ್;‌ ವಿಶ್ವದಾಖಲೆ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ3 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ4 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು4 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ4 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ4 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ4 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ4 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ5 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು12 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು13 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌