Site icon Vistara News

Odisha Train Accident: ರೈಲು ಅಪಘಾತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ, ಪ್ರಧಾನಿ ಮೋದಿ ಕಿಡಿಕಿಡಿ

PM Narendra Modi at site of rail accident

ನವದೆಹಲಿ: ಶುಕ್ರವಾರ ಸಂಜೆ ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (Odisha Train Accident) ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆ ವೀಕ್ಷಿಸಿದರು. ಬಳಿಕ, ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಸಂತೈಸಿದರು. ಇದೇ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಪಘಾತಕ್ಕೆ ಕಾರಣವಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ಸುಮಾರು 900ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಈ ರೈಲು ಅಪಘಾತವು ಇತ್ತೀಚಿನ ದಿನಗಳಲ್ಲಿ ದೇಶಕಂಡ ಅತಿದೊಡ್ಡ ಅಪಘಾತವಾಗಿದೆ.

ನನ್ನ ದುಃಖ ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಈ ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರವು ಎಲ್ಲ ನೆರವು ಒದಗಿಸಲಿದೆ. ಈ ಅಪಘಾತಕ್ಕೆ ಯಾರಾದರೂ ತಪ್ಪಿತಸ್ಥರು ಎಂಬುದು ಕಂಡಬಂದರೆ ಅಂಥವರನ್ನು ಉಗ್ರವಾಗಿ ಶಿಕ್ಷಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಏರ್‌ಫೋರ್ಸ್ ಕಾಪ್ಟರ್ ಮೂಲಕ ಒಡಿಶಾದ ಬಾಹನಾಗಾ ಬಜಾರ್ ಸ್ಟೇಷನ್‌‌ ಬಳಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸೀದಾ ಅಪಘಾತ ನಡೆದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದರು. ಜತೆಗೆ, ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ವಿಚಾರಿಸಿದರು. ಈ ವೇಳೆ, ಪ್ರಧಾನಿ ಮೋದಿ ಅವರಿಗೆ ಸಂಪುಟದ ಸಹೋದ್ಯೋಗಿಗಳಾದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಾಥ್ ನೀಡಿದರು.

ಇದನ್ನೂ ಓದಿ: Odisha Train Accident: ಗ್ರೀನ್‌ ಸಿಗ್ನಲ್‌ ಸಿಕ್ಕರೂ ನಡೆಯಿತು ರೈಲು ಅಪಘಾತ, ತನಿಖಾ ವರದಿ ಮಾಹಿತಿಯೇ ಭೀಕರ

ಘಟನಾ ಸ್ಥಳದಿಂದಲೇ ಸಚಿವ ಸಂಪುಟ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದರು. ಗಾಯಾಳು ಮತ್ತು ಅವರ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವಂತೆ ಸೂಚಿಸಿದರು ಎಂದು ಅಧಿಕಾರಿಗಳು ತಿಳಿಸಿದರು. ಘಟನಾ ಸ್ಥಳಕ್ಕೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು, ಅಪಘಾತಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರಿಗಳ ಸಭೆ ನಡೆಸಿದರು.

Exit mobile version