Site icon Vistara News

Physical Abuse : 15 ವರ್ಷದ ಬಾಲಕಿಯನ್ನು ರೇಪ್​ ಮಾಡಿ, ವಿಡಿಯೋ ಹರಿಬಿಟ್ಟ ಮೂವರು ಬಾಲಕರು

MP police

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಆ ಕೃತ್ಯದ ವೀಡಿಯೊ ರೆಕಾರ್ಡ್​ ಮಅಡಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಮೂರನೇ ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

ಬಿರ್ಲಾ ಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ಲಸುಡಿಯಾ ಜೈಸಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತನಿಖೆ ಪ್ರಾರಂಭವಾಗಿದೆ. ವಿಡಿಯೊದ ಆಧಾರದಲ್ಲಿ ಪೊಲೀಸರು ಅರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಒಬ್ಬ ಆರೋಪಿ ತನ್ನ ವಾಸಸ್ಥಾನದಿಂದ ಪರಾರಿಯಾಗಿದ್ದಾನೆ.

ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ತಮ್ಮ ಕೃತ್ಯವನ್ನು ವೀಡಿಯೊವನ್ನು ರೆಕಾರ್ಡ್​ ಮಾಡಿಕೊಂಡಿದ್ದಾರೆ. ಅಲ್ಲದೆ, ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಮೂವರು ಆರೋಪಿಗಳಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮೂರನೇ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಬಿರ್ಲಾ ಗ್ರಾಮ ಪೊಲೀಸ್ ಠಾಣೆಯ ಉಸ್ತುವಾರಿ ಕರಣ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಘಟನೆಯ ಎಲ್ಲಾ ವಿವರಗಳನ್ನು ಪಡೆಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ

ದಾವಣಗೆರೆ: ಸೋಶಿಯಲ್‌ ಮೀಡಿಯಾದಲ್ಲಿ (Social Media) ಖಾಸಗಿ ವಿಡಿಯೊ ಟ್ರೋಲ್ (Troll Video) ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ಯಾರೋ ಕಿಡಿಗೇಡಿಗಳು ಇದನ್ನೂ ಮೊಬೈಲ್‌ನಲ್ಲಿ ಸೆರೆಯಿಡಿದು ವೈರಲ್‌ ಮಾಡಿದ್ದರು.

ಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ತುಂಬಿಗೆರೆ ಗ್ರಾಮದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇತ್ತ ಆಲೂರಟ್ಟಿ ತಾಂಡಾದ ರತನ್ (20) ನಿನ್ನೆ (ಜು.29) ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ. ಆದರೆ ಆತನೂ ರಾತ್ರಿ ಹಾಸ್ಟೆಲ್‌ ಸಮೀಪದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

ಇದನ್ನ ಓದಿ : Child Death : ಇದೆಂಥಾ ದುರ್ವಿಧಿ; ಜೋಕಾಲಿ ಹಗ್ಗವೇ ಕುತ್ತಿಗೆಗೆ ಬಿಗಿದು ಹೆಣ್ಣು ಮಗುವಿನ ದುರ್ಮರಣ

ಬೆಳಗ್ಗೆ (ಜು.29) ಮರದಲ್ಲಿ ಯುವಕನ ಶವ ನೇತಾಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಕೆಳಗಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಇಬ್ಬರು ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ವಿಡಿಯೊ ವೈರಲ್‌ ಮಾಡಿದವರ ವಿರುದ್ಧ ಪೋಷಕರು ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ.

Exit mobile version