Site icon Vistara News

Odisha Train Accident: ಒಡಿಶಾದಲ್ಲಿ ಒಂದಲ್ಲ, ಎರಡಲ್ಲ, ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ

Odisha Train Accident

Odisha Train Accident: Centre Announces Rs 10 Lakh Ex Gratia For Kin Of Deceased

ಭುವನೇಶ್ವರ: ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಅಧಿಕ ಜನ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಹಾಗೆಯೇ, ಒಡಿಶಾದಲ್ಲಿ ಏಕಕಾಲಕ್ಕೆ ಒಂದಲ್ಲ, ಎರಡಲ್ಲ, ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೂರು ರೈಲುಗಳ ಮಧ್ಯೆ ಅಪಘಾತ

ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್‌ ಹಾಗೂ ಒಂದು ಗೂಡ್ಸ್‌ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಸಹಾಯವಾಣಿ

ಬೆಂಗಳೂರು: 080-22356409

ಬಂಗಾರಪೇಟೆ: 08153 255253

ಅಪಘಾತ ಸ್ಥಳದತ್ತ ಹೊರಟ ರೈಲ್ವೆ ಸಚಿವ

ಅಪಘಾತದ ಕುರಿತು ಮಾಹಿತಿ ಲಭ್ಯವಾಗುತ್ತಲೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಅಪಘಾತದ ಸ್ಥಳಕ್ಕೆ ತೆರಳಲು ಮುಂದಾಗಿದ್ದಾರೆ. ಹಾಗೆಯೇ, ಒಡಿಶಾ ಮುಖ್ಯಮಂತ್ರಿ ನವೀನ್‌ ಪಾಟ್ನಾಯಕ್‌ ಅವರು ಕೂಡ ಅಪಘಾತ ಸ್ಥಳಕ್ಕೆ ತೆರಳಲು ತೀರ್ಮಾನಿಸಿದ್ದಾರೆ. ಶನಿವಾರ ಬೆಳಗ್ಗೆ ಪಾಟ್ನಾಯಕ್‌ ಅವರು ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಕ್ಷಿಪ್ರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಡಿ.ಕೆ. ಶಿವಕುಮಾರ್‌ ಟ್ವೀಟ್‌

ಅಪಘಾತದ ಕುರಿತು ರಾಹುಲ್‌ ಗಾಂಧಿ ಬೇಸರ

ಇದನ್ನೂ ಓದಿ: Odisha Train Accident: ಒಡಿಶಾದಲ್ಲಿ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು ಅಪಘಾತ; 50ಕ್ಕೂ ಹೆಚ್ಚು ಜನರ ಸಾವು

Exit mobile version