ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ, ಹತ್ಯೆಗಳು ಮುಂದುವರಿದಿದ್ದು, ದಕ್ಷಿಣ ೨೪ ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC Worker Killed) ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ೨೪ ಪರಗಣ ಜಿಲ್ಲೆಯ ಭರತ್‌ಪುರದಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈಯಲಾಗಿದೆ. ಹತ ಕಾರ್ಯಕರ್ತನನ್ನು ಜಲೆ ಆಲಂ ಗಾಜಿ ಎಂದು ಗುರುತಿಸಲಾಗಿದೆ. ಸದ್ಯಕ್ಕೆ, ದಾಳಿಗೆ ನಿಖರ ಮಾಹಿತಿ ಲಭ್ಯವಾಗದಿದ್ದರೂ, ರಾಜಕೀಯ ಪ್ರೇರಿತ ದಾಳಿ ಇದ್ದಿರಬಹುದು ಎಂದು ಶಂಕಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರೇರಿತ ದಾಳಿ, ಹತ್ಯೆಗಳು ಸಾಮಾನ್ಯ ಎಂಬಂತಾಗಿವೆ. ಅದರಲ್ಲೂ, ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಪ್ರಕರಣಗಳು ಹೆಚ್ಚಾಗಿವೆ. ಸುಪ್ರೀಂ ಕೋರ್ಟೇ ರಾಜಕೀಯ ಪ್ರೇರಿತ ಹಿಂಸಾಚಾರದ ಕುರಿತು ತನಿಖೆಗೆ ಆದೇಶಿಸಿದೆ.
ಇದನ್ನೂ ಓದಿ | Khela Hobe ಎಂದಿದ್ದ ಬಾಹುಬಲಿ ಅರೆಸ್ಟ್; ದೀದಿ ಆಪ್ತನದ್ದು ಮಿತಿಮೀರಿದ ಗುಂಡಾಗಿರಿಯಾಗಿತ್ತು!