President Election| 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ, ಮುರ್ಮು ಗೆಲುವಿನ ಅಂತರದ ಕುತೂಹಲ - Vistara News

ದೇಶ

President Election| 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ, ಮುರ್ಮು ಗೆಲುವಿನ ಅಂತರದ ಕುತೂಹಲ

ದೇಶದ 15ನೇ ರಾಷ್ಟ್ರಪತಿ ಹುದ್ದೆಗೆ ಇಂದು ಮಹತ್ವದ ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿ ಯಶ್ವಂತ್‌ ಸಿನ್ಹಾ ಕಣದಲ್ಲಿದ್ದಾರೆ.

VISTARANEWS.COM


on

president electi0n
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ ತನ್ನ ೧೫ನೇ ರಾಷ್ಟ್ರಪತಿಯ ಆಯ್ಕೆಗೆ ( President Election) ಇಂದು ಚುನಾವಣೆ ನಡೆಸುವ ಸಂಭ್ರಮದಲ್ಲಿದೆ. ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶ್ವಂತ್‌ ಸಿನ್ಹಾ ಕಣದಲ್ಲಿದ್ದಾರೆ. ದ್ರೌಪದಿ ಮುರ್ಮು ಅವರೇ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಸ್ಪಷ್ಟ ಲಕ್ಷಣಗಳಿದ್ದು, ಗೆಲುವಿನ ಅಂತರ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ೧೦ ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ ೫ ಗಂಟೆಯ ತನಕ ನಡೆಯಲಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರಿಗೆ 44 ಪಕ್ಷಗಳು ಬೆಂಬಲ ಸೂಚಿಸಿವೆ. ಯಶ್ವಂತ್‌ ಸಿನ್ಹಾ ಅವರಿಗೆ ೩೪ ಪಕ್ಷಗಳು ಬೆಂಬಲಿಸಿವೆ. ಮತ ಎಣಿಕೆಗೆ ಜುಲೈ ೨೧ರ ದಿನಾಂಕ ನಿಗದಿಯಾಗಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ಅವಧಿ ಜುಲೈ ೨೪ಕ್ಕೆ ಮುಕ್ತಾಯವಾಗುತ್ತಿದೆ.

ದ್ರೌಪದಿ ಮುರ್ಮು ಅವರು ಜನಿಸಿದ್ದು 1958ರ ಜೂನ್‌ ೨೦ರಂದು. 2015-20ರ ಅವಧಿಯಲ್ಲಿ ಜಾರ್ಖಂಡ್‌ ರಾಜ್ಯಪಾಲರಾಗಿದ್ದರು. ನಗರಸಭಾ ಅಧ್ಯಕ್ಷತೆಯಿಂದ ಆರಂಭಿಸಿ ಭಾರತೀಯ ಜನತಾ ಪಕ್ಷದ ನಾನಾ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ದ್ರೌಪದಿ ಮುರ್ಮು ಆಯ್ಕೆ ಸಂಭವ

ವ್ಯಾಪಕ ಬೆಂಬಲದ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ನೂತನ ರಾಷ್ಟ್ರಪತಿಯಾಗುವ ನಿರೀಕ್ಷೆಗಳಿವೆ. ಮುರ್ಮು ಅವರ ಗೆಲುವು ಹಲವು ಹೊಸ ದಾಖಲೆಗಳನ್ನೂ ಬರೆಯಲಿದೆ. ೬೪ ವರ್ಷ ವಯಸ್ಸಿನ ಅವರು ಗೆದ್ದರೆ, ಸ್ವತಂತ್ರ ಭಾರತದಲ್ಲಿ ಹುಟ್ಟಿದ ಮೊದಲ ವ್ಯಕ್ತಿ ರಾಷ್ಟ್ರಪತಿ ಆದಂತಾಗುತ್ತದೆ. ರಾಷ್ಟ್ರಪತಿ ಹುದ್ದೆಗೆ ಏರಿದ ಮೊದಲ ಬುಡಕಟ್ಟು ನಾಯಕಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ. ಕಿರಿಯ ವಯಸ್ಸಿಗೆ ರಾಷ್ಟ್ರಪತಿ ಹುದ್ದೆ ಅಲಂಕರಿಸಿದವರೂ ಎನ್ನಿಸಲಿದ್ದಾರೆ.

ರಾಷ್ಟ್ರಪತಿ ಹುದ್ದೆಗೆ ತಮ್ಮ ಸ್ಪರ್ಧೆಯಿಂದ ೧೦ ಕೋಟಿಗೂ ಅಧಿಕ ಬುಡಕಟ್ಟು ಸಮುದಾಯದ ಜನತೆಗೆ ಸಂತಸವಾಗಿದೆ ಎಂದು ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಬಿಜೆಪಿ ಜತೆಗೆ ಬಿಜೆಡಿ, ವೈಎಸ್‌ಆರ್‌ಸಿಪಿ, ಬಿಎಸ್ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿಎಸ್‌, ಶಿರೋಮಣಿ ಅಕಾಲಿದಳ, ಶಿವಸೇನಾ, ಜೆಎಂಎಂ ಪಕ್ಷಗಳು ದ್ರೌಪದಿ ಮುರ್ಮು ಅವರಿಗೆ ಬೆಂಬಲಿಸಿವೆ.

೪,೮೦೦ ಸಂಸದರು, ಶಾಸಕರಿಂದ ಮತದಾನ

ರಾಷ್ಟ್ರಪತಿಯವರ ಚುನಾವಣೆಯಲ್ಲಿ ೪,೮೦೦ಕ್ಕೂ ಹೆಚ್ಚು ಸಂಸದರು, ಶಾಸಕರು ಮತ ಚಲಾಯಿಸಲಿದ್ದಾರೆ. ಸಂಸತ್‌ ಭವನ ಮತ್ತು ರಾಜ್ಯಗಳ ಅಸೆಂಬ್ಲಿಗಳಲ್ಲಿ ಬೆಳಗ್ಗೆ ೧೦ರಿಂದ ಸಂಜೆ ೫ರ ತನಕ ಮತದಾನ ನಡೆಯಲಿದೆ.

ಮತದಾನ ಪ್ರಕ್ರಿಯೆ ಗೌಪ್ಯವಾಗಿರಲಿದ್ದು, ಪಕ್ಷಗಳು ತಮ್ಮ ಸಂಸದರು ಮತ್ತು ಶಾಸಕರಿಗೆ ವಿಪ್‌ ಜಾರಿಗೊಳಿಸುವಂತಿಲ್ಲ. ವಿಪ್‌ ಜಾರಿಗೆ ಅನುಮತಿ ಇದ್ದಾಗ ಪಕ್ಷದ ಆದೇಶ ಪ್ರಕಾರ ಮತ ಚಲಾಯಿಸಬೇಕಾಗುತ್ತದೆ. ಆದರೆ ಇಲ್ಲಿ ಮತದಾರರಿಗೆ ಯಾರಿಗೆ ಬೇಕಾದರೂ ಓಟು ಕೊಡುವ ಸ್ವಾತಂತ್ರ್ಯ ಇದೆ.

ದ್ರೌಪದಿ ಮುರ್ಮು ಅವರಿಗೆ ೬.೬೭ ಲಕ್ಷಕ್ಕೂ ಅಧಿಕ ಮತ ನಿರೀಕ್ಷೆ

ಒಟ್ಟು ೧೦,೮೬,೪೩೧ ಮತಗಳು ಲಭ್ಯವಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ನಾನಾ ಪಕ್ಷಗಳಿಂದ ಈಗಾಗಲೇ ೬.೬೭ ಲಕ್ಷ ಮತಗಳ ಬೆಂಬಲ ಲಭಿಸಿದೆ. ಅವರು ಮೂರನೇ ಎರಡರಷ್ಟು ಮತಗಳನ್ನು ನಿರಾಯಾಸವಾಗಿ ಗಳಿಸುವ ಸಾಧ್ಯತೆ ಇದೆ. ೨೦೧೭ರಲ್ಲಿ ರಾಮ್‌ ನಾಥ್‌ ಕೋವಿಂದ್‌ ಅವರು ೭ ಲಕ್ಷಕ್ಕಿಂತ ಹೆಚ್ಚು ಮತ ಗಳಿಸಿದ್ದರು. ಮುರ್ಮು ಅವರು ಕೂಡ ಅದೇ ರೀತಿ ಮತ ಗಳಿಸುವ ನಿರೀಕ್ಷೆ ಇದೆ.

ಚುನಾವಣಾ ಆಯೋಗ ಮತದಾನದ ಗೌಪ್ಯತೆ ಕಾಪಾಡಲು, ವಿಶೇಷವಾಗಿ ವಿನ್ಯಾಸಗೊಳಿಸಿದ ಪೆನ್‌, ಶಾಯಿ, ಮತಪತ್ರಗಳನ್ನು ಬಿಡುಗಡೆಗೊಳಿಸಿದೆ.

ಹಸಿರು, ಗುಲಾಬಿ ಮತಪತ್ರ

ಸಂಸದರು ಹಸಿರು ಬಣ್ಣದ ಮತ ಪತ್ರ ಹಾಗೂ ಶಾಸಕರು ಗುಲಾಬಿ ಬಣ್ಣದ ಪತಪತ್ರವನ್ನು ಬಳಸಲಿದ್ದಾರೆ. ಶಾಸಕರು ಮತ್ತು ಸಂಸದರ ಮತಗಳನ್ನು ಎಣಿಸಲು ಇದರಿಂದ ಸುಲಭವಾಗುತ್ತದೆ.

ರಾಜ್ಯದಿಂದ ರಾಜ್ಯಕ್ಕೆ ಸಂಸದರ ಮತಗಳ ಮೌಲ್ಯ ಭಿನ್ನವಾಗಿದೆ. ಉತ್ತರಪ್ರದೇಶದಲ್ಲಿ ಪ್ರತಿ ಶಾಸಕರ ಮತದ ಮೌಲ್ಯ ೨೦೮ ಆಗಿದ್ದರೆ, ಜಾರ್ಖಂಡ್‌ ಮತ್ತು ತಮಿಳುನಾಡಿನಲ್ಲಿ ೧೭೬ ಆಗಿದೆ.

ಕರ್ನಾಟಕದ ೨೨೪ ಶಾಸಕರು ವಿಧಾನಸೌಧದಲ್ಲಿ ಮತದಾನ ಮಾಡಲಿದ್ದಾರೆ. ಸಂಸದರು ಸಂಸತ್ತಿನಲ್ಲಿ ಮತ ಚಲಾಯಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ವೇಳಾ ಪಟ್ಟಿ

  • ೨೦೨೨ ಜುಲೈ ೧೮ರಂದು ಮತದಾನ
  • ೨೦೨೨ ಜುಲೈ ೨೧ಕ್ಕೆ ಫಲಿತಾಂಶ
  • ೨೦೨೨ ಜುಲೈ ೨೫ಕ್ಕೆ ನೂತನ ರಾಷ್ಟ್ರಪತಿ ಪ್ರಮಾಣ ವಚನ

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಉಪ ರಾಷ್ಟ್ರಪತಿ ಎಲೆಕ್ಷನ್‌, ಆ. 6ಕ್ಕೆ ಮತದಾನ, ಜು.5ರಂದು ಅಧಿಸೂಚನೆ

ಇದನ್ನೂ ಓದಿ: ವಿಸ್ತಾರ Explainer: ರಾಷ್ಟ್ರಪತಿ ಚುನಾವಣೆ 2022- ಯಾರ ಮತಕ್ಕೆ ಎಷ್ಟು ಬೆಲೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಇದನ್ನೂ ಓದಿ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Narendra Modi: ಜೂ.8ರಂದು ನರೇಂದ್ರ ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ಮೊದಲಿಗೆ ಮಾಹಿತಿ ನೀಡಿದ್ದವು. ಇದಾದ ಬಳಿಕ ಈ ಬಗ್ಗೆ ಬಿಗ್‌ ಅಪ್ಡೇಡ್‌ವೊಂದನ್ನು ನೀಡಿರುವ ಮೂಲಗಳು ಪ್ರಮಾಣವಚನ ಕಾರ್ಯಕ್ರಮ ಜೂ.9ರಂದು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಈ ಮಹತ್ವದ ಬದಲಾವಣೆಗೆ ಕಾರಣ ಏನೆಂಬುದರ ಬಗೆ ಯಾವುದೇ ಮಾಹಿತಿ ಇಲ್ಲ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್‌ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ(Narendra Modi) ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಒಂದು ದಿನ ಮುಂದೂಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜೂ.8ರಂದು ನರೇಂದ್ರ ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ಮೊದಲಿಗೆ ಮಾಹಿತಿ ನೀಡಿದ್ದವು. ಇದಾದ ಬಳಿಕ ಈ ಬಗ್ಗೆ ಬಿಗ್‌ ಅಪ್ಡೇಡ್‌ವೊಂದನ್ನು ನೀಡಿರುವ ಮೂಲಗಳು ಪ್ರಮಾಣವಚನ ಕಾರ್ಯಕ್ರಮ ಜೂ.9ರಂದು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಈ ಮಹತ್ವದ ಬದಲಾವಣೆಗೆ ಕಾರಣ ಏನೆಂಬುದರ ಬಗೆ ಯಾವುದೇ ಮಾಹಿತಿ ಇಲ್ಲ.

ಚುನಾವಣಾ ಫಲಿತಾಂಸ ಹೊರಬೀಳುತ್ತಿದ್ದಂತೆ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮತ್ತು ಇಂಡಿಯಾ ಒಕ್ಕೂಟ ತಮ್ಮ ತಮ್ಮ ಮೈತ್ರಿ ನಾಯಕರೊಂದಿಗೆ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಲು ಮತ್ತು ಸರ್ಕಾರ ರಚನೆಗೆ ಕಾರ್ಯತಂತ್ರವನ್ನು ರೂಪಿಸಲು ಸಭೆ ನಡೆಸಿವೆ. ಬುಧವಾರ, ಎನ್‌ಡಿಎ ತನ್ನ ಮಿತ್ರಪಕ್ಷಗಳಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಚಿರಾಗ್ ಪಾಸ್ವಾನ್, ಜಯಂತ್ ಚೌಧರಿ, ಅನುಪ್ರಿಯಾ ಪಟೇಲ್ ಸೇರಿದಂತೆ ಇತರರೊಂದಿಗೆ ಪ್ರಮುಖ ಸಭೆ ನಡೆಸಿತು, ಈ ಸಂದರ್ಭದಲ್ಲಿ ಅವರು ತಮ್ಮ ಮೈತ್ರಿಕೂಟದ ನಾಯಕರಾಗಿ ಪಿಎಂ ಮೋದಿ ಹೆಸರನ್ನು ಅನುಮೋದಿಸಿದರು.

ಗಣ್ಯರ ಉಪಸ್ಥಿತಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಚುನಾಯಿತರಾಗುತ್ತಿದ್ದಂತೆ ದೇಶ ವಿದೇಶಗಳ ಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿತ್ತು. ಹೀಗಾಗಿ ಅವರು ಇದೀಗ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ದಕ್ಷಿಣ ಏಷ್ಯಾದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಾಯಕರು ಶನಿವಾರದ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ಈಗಾಗಲೇ ಪ್ರಧಾನಿ ಮೋದಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ದೃಢಪಡಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಶನಿವಾರದ ಕಾರ್ಯಕ್ರಮಕ್ಕೆ ಹಾಜರಾಗಲು ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಮೊದಲ ವಿದೇಶಿ ನಾಯಕರಲ್ಲಿ ಒಬ್ಬರು, ಬಾಂಗ್ಲಾದೇಶ ಮಾಧ್ಯಮಗಳ ಪ್ರಕಾರ, ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅವರು ಶುಕ್ರವಾರ ದೆಹಲಿಗೆ ಆಗಮಿಸುತ್ತಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಭೂತಾನ್ ಪ್ರಧಾನಿ ಟ್ಶೆರಿಂಗ್ ಟೋಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೆ ಔಪಚಾರಿಕ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:Hinduism Beliefs: ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

Continue Reading

ದೇಶ

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Encounter in UP: ನೀಲೇಶ್‌ ರೈ ಪತ್ತೆಗೆ ಉತ್ತರಪ್ರದೇಶ ಪೊಲೀಸರು 2.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಮೂಲತಃ ಈ ಬಿಹಾರಸ ಬೇಗಸರೈ ಜಿಲ್ಲೆಯವನಾಗಿದ್ದು, ಬರೋಬ್ಬರಿ 16 ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದವು. ಆತನ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಆತನ ಪತ್ತೆಗಾಗಿ ಪೊಲೀಸರು ಭಾರೀ ಬಹುಮಾನ ಘೋಷಿಸಿದ್ದರು.

VISTARANEWS.COM


on

Encounter in UP
Koo

ಲಕ್ನೋ: ಚುನಾವಣೆ ಮುಗಿಯುತ್ತಿದ್ದಂತೆ ಯೋಗಿ(Yogi adityanath)ನಾಡು ಉತ್ತರಪ್ರದೇಶ(Uttar Pradesh)ದಲ್ಲಿ ಗುಂಡಿನ ಸದ್ದು ಮೊಳಗಿದೆ. ಗ್ಯಾಂಗ್‌ಸ್ಟರ್‌(Gangster)ವೊಬ್ಬನನ್ನು ಎನ್‌ಕೌಂಟರ್‌(Encounter in UP) ಮಾಡಲಾಗಿದೆ. ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಉತ್ತರಪ್ರದೇಶ ಮತ್ತು ಬಿಹಾರದ ವಿಶೇಷ ಕಾರ್ಯಪಡೆಗಳು ಜಂಟೀ ಕಾರ್ಯಾಚರಣೆ ನಡೆಸಿ ನೀಲೇಶ್‌ ರೈ ಎಂಬಾತನನ್ನು ಹೊಡೆದುರುಳಿಸಿದೆ. ಮುಜಾಫರ್‌ನಗರದ ರತನ್‌ಪುರಿ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಇನ್ನು ನೀಲೇಶ್‌ ರೈ ಪತ್ತೆಗೆ ಉತ್ತರಪ್ರದೇಶ ಪೊಲೀಸರು 2.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಮೂಲತಃ ಈ ಬಿಹಾರಸ ಬೇಗಸರೈ ಜಿಲ್ಲೆಯವನಾಗಿದ್ದು, ಬರೋಬ್ಬರಿ 16 ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದವು. ಆತನ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಆತನ ಪತ್ತೆಗಾಗಿ ಪೊಲೀಸರು ಭಾರೀ ಬಹುಮಾನ ಘೋಷಿಸಿದ್ದರು.

ಇನ್ನು ಈತ ರತನ್‌ಪುರಿ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಬಿಹಾರ, ಉತ್ತರಪ್ರದೇಶ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರ ಗುಂಡೇಟು ಬಿದ್ದು ನೀಲೇಶ್‌ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ.

ಐದು ತಿಂಗಳ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಸ್ಟರ್‌, ಶಾರ್ಪ್‌ ಶೂಟರ್‌ ವಿನೋದ್‌ ಕುಮಾರ್‌ ಉಪಾಧ್ಯಾಯ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ. ಸುಲ್ತಾನ್‌ಪುರದ ದೆಹತ್ ಕೊಟ್ವಾಲಿ ಪ್ರದೇಶದ ಎಸ್‌ಟಿಎಫ್‌ ಪ್ರಧಾನ ಕಚೇರಿಯ ಡಿವೈಎಸ್ಪಿ ದೀಪಕ್ ಕುಮಾರ್ ಸಿಂಗ್ ನೇತೃತ್ವದ ತಂಡ ಈ ಎನ್‌ಕೌಂಟರ್‌ ನಡೆಸಿತ್ತು.

ವಿನೋದ್‌ ಕುಮಾರ್‌ ವಿರುದ್ಧ ಲಕ್ನೋ ಮತ್ತು ಗೋರಖ್‌ಪುರ ಸೇರಿದಂತೆ ಉತ್ತರ ಪ್ರದೇಶದಾದ್ಯಂತ ಅಪಹರಣ, ದರೋಡೆ, ಸುಲಿಗೆಯ ಅನೇಕ ಪ್ರಕರಣಗಳು ದಾಖಲಾಗಿವೆ. ಆತನನ್ನು ಬಂಧಿಸುವವರಿಗೆ ಗೋರಖ್‌ಪುರ ಪೊಲೀಸರು 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರು. ಈತ ಗೋರಖ್‌ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಆತ ಹಲವು ಕೊಲೆಗಳನ್ನು ನಡೆಸಿದ್ದ. ಇದಲ್ಲದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರವಾದ ಗೋರಖ್‌ಪುರದ ಗೋರಖನಾಥ್ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ವಿನೋದ್ ಕುಮಾರ್‌ ಹೆಸರಿನಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಇನ್ನೂ 31 ಪ್ರಕರಣಗಳಿವೆ.

ಸುಲ್ತಾನ್‌ಪುರ ಜಿಲ್ಲೆಯ ಕೊಟ್ವಾಲಿ ಪ್ರದೇಶದಲ್ಲಿ ವಿನೋದ್ ಕುಮಾರ್‌ ಮತ್ತು ಯುಪಿ ಎಸ್‌ಟಿಎಫ್ ನಡುವೆ ಎನ್ ಕೌಂಟರ್ ನಡೆದಿತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ವಿನೋದ್‌ ಕುಮಾರ್‌ನನ್ನು ಬಳಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದರು. ನಿಖರವಾದ ಗುರಿಗೆ ಹೆಸರುವಾಸಿಯಾದ ವಿನೋದ್ ಕುಮಾರ್‌ ಅಪರಾಧ ಜಗತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದ. ಹೀಗಾಗಿ ಈತನ ಹತ್ಯೆ ಎಸ್‌ಟಿಎಫ್ ಸಿಕ್ಕ ಯಶಸ್ಸು ಎಂದು ಪರಿಗಣಿಸಲಾಗಿದೆ. ಎನ್‌ಕೌಂಟರ್‌ ಬಳಿಕ 30 ಚೀನಿ ಕಂಪನಿ ನಿರ್ಮಿತ ಪಿಸ್ತೂಲ್, ಕಾರ್ಖಾನೆ ನಿರ್ಮಿತ 9 ಎಂಎಂ ಸ್ಟೆನ್ ಗನ್ ಮತ್ತು ಖಾಲಿ ಕಾರ್ಟಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ಪೊಲೀಸರು ಸ್ವಿಫ್ಟ್ ಕಾರನ್ನು ಸಹ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

Continue Reading

ದೇಶ

Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

Narendra Modi:ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗುತ್ತಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಈ ಬಾರಿ ಪಾತ್ರರಾಗಲಿದ್ದು, ಜೂನ್ 8ರಂದು ರಾತ್ರಿ 8 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್‌ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಇನ್ನು ನರೇಂದ್ರ ಮೋದಿ(Narendra Modi) ಶನಿವಾರ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಅಧಿಕೃತ ಮೂಲಗಳ ಪ್ರಧಾನಿ ನರೇಂದ್ರ ಮೋದಿ ಜೂ.8ರಂದು ಸಂಜೆ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗುತ್ತಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಈ ಬಾರಿ ಪಾತ್ರರಾಗಲಿದ್ದು, ಜೂನ್ 8ರಂದು ರಾತ್ರಿ 8 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜ್ಯೋತಿಷ್ಯದ ಪ್ರಕಾರ 8 ಸಂಖ್ಯೆ ರಾಜಯೋಗದ ಸಂಕೇತವಾಗಿದೆ. ವೈದಿಕ ಜ್ಯೋತಿಷ್ಯದಲ್ಲಿ ಮಂಗಳಕರ ಯೋಗವಾಗಿದೆ. ಅಂದರೆ ರಾಜಮನೆತನದ ಶುಭ ಕಾರ್ಯ, ರಾಜಮನೆತನದ ಅಧಿಕಾರ ಪದಗ್ರಹಣ ಸೇರಿದಂತೆ ಮಹತ್ವದ ಹಾಗೂ ಶುಭ ಕಾರ್ಯಗಳಿಗೆ ಉತ್ತಮ ದಿನವಾಗಿದೆ. ಜೊತೆಗೆ ಶುಭ ಶುಕ್ರವಾರವಾಗಿದೆ. ಇನ್ನು 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ. ಇನ್ನು ಎಂಟು ಸಂಖ್ಯೆ ಅಂದರೆ ವಿಶೇಷವಾಗಿದ್ದು, ಶನಿ ಗ್ರಹವನ್ನು ಸೂಚಿಸುತ್ತದೆ. ಶನಿ ಉತ್ಕೃಷ್ಠತೆಯಲ್ಲಿದೆ. ಹೀಗಾಗಿ ಯಶಸ್ಸು ಅತ್ಯಂತ ಉನ್ನತ ಮಟ್ಟದಲ್ಲಿರುತ್ತದೆ. ಜೊತೆಗೆ ಎಲ್ಲಾ ಶತ್ರುಗಳನ್ನು ಸೋಲಿಸುವ ಸಾಮರ್ಥ್ಯವಿದೆ. ಸಂಖ್ಯಾಶಾಸ್ತ್ರದ ಪ್ರಕಾರ 8 ನ್ಯಾಯದ ಸಂಕೇತವಾಗಿದೆ. ಇನ್ನು ನಾವು ಮೋದಿಯವರ ಇದುವರೆಗಿನ ನಡೆಗಳನ್ನ ಗಮನಿಸಿದರೆ ಅವರು ತಮ್ಮ ಜೀವನದ ಮುಖ್ಯ ಕೆಲಸಗಳನ್ನ ಮಾಡುವಾಗ ಬಹಳ ಶುಭ ದಿನಗಳನ್ನ ಆಯ್ಕೆ ಮಾಡಿದ್ದಾರೆ.

ಗಣ್ಯರ ಉಪಸ್ಥಿತಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಚುನಾಯಿತರಾಗುತ್ತಿದ್ದಂತೆ ದೇಶ ವಿದೇಶಗಳ ಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿತ್ತು. ಹೀಗಾಗಿ ಅವರು ಇದೀಗ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ದಕ್ಷಿಣ ಏಷ್ಯಾದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಾಯಕರು ಶನಿವಾರದ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ಈಗಾಗಲೇ ಪ್ರಧಾನಿ ಮೋದಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ದೃಢಪಡಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಶನಿವಾರದ ಕಾರ್ಯಕ್ರಮಕ್ಕೆ ಹಾಜರಾಗಲು ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಮೊದಲ ವಿದೇಶಿ ನಾಯಕರಲ್ಲಿ ಒಬ್ಬರು, ಬಾಂಗ್ಲಾದೇಶ ಮಾಧ್ಯಮಗಳ ಪ್ರಕಾರ, ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅವರು ಶುಕ್ರವಾರ ದೆಹಲಿಗೆ ಆಗಮಿಸುತ್ತಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಭೂತಾನ್ ಪ್ರಧಾನಿ ಟ್ಶೆರಿಂಗ್ ಟೋಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೆ ಔಪಚಾರಿಕ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇಂದೇ ಸಚಿವ ನಾಗೇಂದ್ರ ರಾಜೀನಾಮೆ?

Continue Reading

Lok Sabha Election 2024

NDA Meeting: ಮೋದಿ ನಿವಾಸದಲ್ಲಿ ಎನ್‌ಡಿಎ ಸಭೆ; ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯ್ತು? ಇಲ್ಲಿದೆ ವಿವರ

NDA Meeting: ಜೂನ್‌ 5ರಂದು ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ, ಎಲ್‌ಜೆಪಿ ಸೇರಿ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿವೆ. ಈ ಸಭೆಯಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯಿತು ಎನ್ನುವ ವಿವರ ಇಲ್ಲಿದೆ.

VISTARANEWS.COM


on

NDA Meeting
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ (NDA) ಸರ್ಕಾರ ರಚಿಸಲು ಮುಂದಾಗಿದೆ. ಬುಧವಾರ (ಜೂನ್‌ 5) ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ (Narendra Modi) ಅವರ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ, ಎಲ್‌ಜೆಪಿ ಸೇರಿ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿವೆ. ಈ ಸಭೆಯಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಯಿತು ಎನ್ನುವ ವಿವರ ಇಲ್ಲಿದೆ (NDA Meeting).

  • ಕಳೆದ 10 ವರ್ಷಗಳಲ್ಲಿ ಎನ್‌ಡಿಎ (NDA) ಸರ್ಕಾರ ಸಾರ್ವಜನಿಕ ಕಲ್ಯಾಣ ನೀತಿಗಳ ಮೂಲಕ ಗಮನ ಸೆಳೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದುತ್ತಿದ್ದು, ಇದನ್ನು ಕೋಟ್ಯಂತರ ಮಂದಿ ಗಮನಿಸುತ್ತಿದ್ದಾರೆ.
  • ಸುಮಾರು ಆರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಜನರು ಸತತ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಬಲವಾದ ನಾಯಕತ್ವವನ್ನು ಆಯ್ಕೆ ಮಾಡಿದ್ದಾರೆ.
  • 2024ರ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎದುರಿಸಿದ ಎನ್‌ಡಿಎ ಹೋರಾಡಿ ಗೆದ್ದಿದೆ. ಈ ವಿಷಯದ ಬಗ್ಗೆ ನಾವೆಲ್ಲರೂ ಹೆಮ್ಮೆ ಪಡುತ್ತೇವೆ. ನಾವು (ಎಲ್ಲ ಎನ್‌ಡಿಎ ನಾಯಕರು) ನರೇಂದ್ರ ಮೋದಿ ಅವರನ್ನು ನಮ್ಮ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡುತ್ತೇವೆ.
  • ಮೋದಿ ಅವರ ನಾಯಕತ್ವದಲ್ಲಿ, ಎನ್‌ಡಿಎ (NDA) ಸರ್ಕಾರವು ಭಾರತದ ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ತುಳಿತಕ್ಕೊಳಗಾದ, ವಂಚಿತರ ಸೇವೆ ಮಾಡಲು ಬದ್ಧ.
  • ಭಾರತದ ಪರಂಪರೆಯನ್ನು ಸಂರಕ್ಷಿಸುವ ಮೂಲಕ ಎನ್‌ಡಿಎ ಸರ್ಕಾರವು ಪ್ರತಿಯೊಬ್ಬ ನಾಗರಿಕನ ಜೀವನ ಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ.

ಯಾರೆಲ್ಲ ಭಾಗಿಯಾಗಿದ್ದರು?

ಎನ್‌ಡಿಎ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ತೆಲುಗು ದೇಶಂ ಪಕ್ಷದ (TDP) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಜನತಾದಳ (ಜಾತ್ಯತೀತ) ನಾಯಕ ಎಚ್.ಡಿ.ಕುಮಾರಸ್ವಾಮಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣ) ನಾಯಕ ಪ್ರಫುಲ್ ಪಟೇಲ್ ಮತ್ತಿತರರು ಭಾಗವಹಿಸಿದ್ದರು.

ಚುನಾವಣಾ ಆಯೋಗ ಪ್ರಕಟಿಸಿದ ಫಲಿತಾಂಶದ ಪ್ರಕಾರ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 99 ಕಡೆ ಜಯ ಗಳಿಸಿದೆ. ಮ್ಯಾಜಿಕ್‌ ನಂಬರ್‌ 272. 2019ರ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಮತ್ತು 2014ರ ಚುನಾವಣೆಯಲ್ಲಿ 282 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

Continue Reading
Advertisement
Valmiki corporation Scam
ಕರ್ನಾಟಕ9 mins ago

Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Protest demanding adequate bus facility at govinakovi village
ದಾವಣಗೆರೆ14 mins ago

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Food Poisoning
ಬೆಂಗಳೂರು ಗ್ರಾಮಾಂತರ15 mins ago

Food Poisoning : ಇಲಿ ಬಿದ್ದ ಪಲ್ಯ ಸೇವಿಸಿದ ಎಸ್‌ ವ್ಯಾಸ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ

Narendra Modi
ದೇಶ29 mins ago

Narendra Modi: ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ?

Kannada New Movie sahara movie release tomorrow
ಸ್ಯಾಂಡಲ್ ವುಡ್34 mins ago

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Physical Abuse in Gadaga
ಕ್ರೈಂ39 mins ago

Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

Environment awareness programme by NCC team in Bengaluru
ಬೆಂಗಳೂರು47 mins ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

SIT feels it would be better for Minister Nagendra to resign
ಕರ್ನಾಟಕ52 mins ago

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Encounter in UP
ದೇಶ59 mins ago

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Pradeep Eshwar
ಪ್ರಮುಖ ಸುದ್ದಿ1 hour ago

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌