ಲಖನೌ: ಉತ್ತರ ಪ್ರದೇಶ(Uttar Pradesh)ದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ(Train Derail) ಒಳಗಾಗಿ ಇಬ್ಬರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ದುರ್ಘಟನೆ ಹಿಂದೆ ವಿಧ್ವಂಸಕ ಕೃತ್ಯ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಲೋಕೋ ಪೈಲೆಟ್ ಮಾಹಿತಿ ನೀಡಿದ್ದು, ಘಟನೆಗೆ ಮುನ್ನ ದೊಡ್ಡ ಶಬ್ದ ಕೇಳಿಸಿತ್ತು ಎಂದಿದ್ದಾರೆ.
ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲಿನ ಚಾಲಕ ಅಪಘಾತದ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಲೋಕೋ ಪೈಲಟ್ ಹೇಳಿದ್ದಾರೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್, ಅಪಘಾತದ ಮೊದಲು ಸ್ಫೋಟದ ಶಬ್ದ ಕೇಳಿದೆ, ಹೀಗಾಗಿ ವಿಧ್ವಂಸಕ ಕೃತ್ಯದ ದೃಷ್ಟಿಯಿಂದ ತನಿಖೆ ಪ್ರಾರಂಭವಾಗಿದೆ ಎಂದಿದ್ದಾರೆ.
RT if you want Railway minister #AshwiniVaishnaw must resign..#TrainAccident #Gonda #डिब्रूगढ़_एक्सप्रेस
— 𝑮𝒂𝒖𝒓𝒂𝒗 Rai (@IacGaurav) July 18, 2024
pic.twitter.com/SrY61hsXDK
ಎಕ್ಸ್ಪ್ರೆಸ್ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.
ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.
यूपी के गोंडा में पिकौरा गांव के पास डिब्रूगढ़ एक्सप्रेस की पांच बोगियां पलटने के कारण 3 लोगों की दर्दनाक मौत और दर्जनों लोगों के घायल होने की घटना अत्यंत दुखद हैं। मुझे उम्मीद ही नहीं बल्कि पूरा विश्वास है कि रेलमंत्री अश्विनी वैष्णव अपने पद से इस्तीफा नहीं देंगे। #TrainAccident pic.twitter.com/03Mcs4wLo9
— Hansraj Meena (@HansrajMeena) July 18, 2024
ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು