Site icon Vistara News

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

Viral Video

Transgender Woman Removes Pant, Gets Naked And Assaults Auto Driver In A Market

ನವದೆಹಲಿ: ರೈಲುಗಳಲ್ಲಿ, ಬಸ್‌ ಸ್ಟ್ಯಾಂಡ್‌ಗಳು, ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಮಂಗಳಮುಖಿಯರು (Transgenders) ಜನರಿಂದ 5-10 ರೂ. ಪಡೆಯುತ್ತಾರೆ. ಜನರೂ ಕರುಣೆ ತೋರಿಸಿ ಅವರಿಗೆ ಹಣ ನೀಡುತ್ತಾರೆ. ಕೆಲವೊಮ್ಮೆ ಕಾಡಿ-ಬೇಡಿ ಮಂಗಳಮುಖಿಯರು ಜನರಿಂದ ಹಣ ಪಡೆಯುತ್ತಾರೆ. ಇದರಿಂದ ಜಗಳಗಳೂ ನಡೆದಿರುವ ಉದಾಹರಣೆಗಳು ಇವೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ, ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್‌ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಾಡಿಗೆ ಕೊಡುವುದಿಲ್ಲ ಎಂದು ಹೇಳುವ ಜತೆಗೆ ಬೈದಿದ್ದಾರೆ. ಇದಾದ ನಂತರ ಆಟೋ ಚಾಲಕನು ಕೂಡ ಗದರಿದ್ದಾನೆ. ಆಗ ಮಂಗಳಮುಖಿಯ ಕೋಪ ದ್ವಿಗುಣಗೊಂಡಿದೆ. ಕೂಡಲೇ ಆಟೋ ಚಾಲಕನ ಮೇಲೆ ದಾಳಿ ನಡೆಸಿದ್ದಾರೆ.‌ ಘಟನೆಯು ಎಲ್ಲಿ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಪ್ಯಾಂಟ್‌ ಬಿಚ್ಚಿ ಬೆತ್ತಲೆಯಾದ ಬಳಿಕವೂ ಅವರು ಮತ್ತೆ ಚಾಲಕನ ಮೇಳೆ ಹಲ್ಲೆ ನಡೆಸಿದ್ದಾರೆ. ಕೇವಲ 10 ರೂ.ಗಾಗಿ ಇಬ್ಬರೂ ರಸ್ತೆ ಮಧ್ಯೆ ಕಾದಾಡಿಕೊಂಡಿರುವ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ವಿಡಿಯೊ ವೈರಲ್‌ ಆಗುತ್ತಲೇ ಹತ್ತಾರು ಅಭಿಪ್ರಾಯಗಳು ವ್ಯಕ್ತವಾಗಿವೆ. “ಆಟೋ ಚಾಲಕರು 10 ರೂ.ಗಾಗಿ ದುಡಿಯುತ್ತಾರೆ. ಮಂಗಳಮುಖಿಯರು ಅವರಿಗೆ ಬಾಡಿಗೆ ಕೊಡಬೇಕು. ಅವರು ಬೇಕಾದರೆ ಶ್ರೀಮಂತರ ಬಳಿ ಹಣ ಪಡೆಯಲಿ” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಮಂಗಳಮುಖಿಯರು ಕೆಲಸ ಮಾಡುತ್ತೇವೆ ಎಂದರೆ ಯಾರೂ ಕೆಲಸ ಕೊಡಲ್ಲ. ಅವರಿಗೆ ಮಾನವೀಯತೆ ಆಧಾರದ ಮೇಲೆ ಜನ ನೆರವು ನೀಡಬೇಕು” ಎಂಬುದಾಗಿ ಹೇಳಿದ್ದಾರೆ. ಹೀಗೆ ಪರ-ವಿರೋಧಗಳ ಚರ್ಚೆಯಾಗಿದೆ.

ಇದನ್ನೂ ಓದಿ: Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Exit mobile version