Site icon Vistara News

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿ(TMC)ಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿ(BJP Leader)ಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬಾಗುಯಾಟಿ ಜಿಲ್ಲೆಯಲ್ಲಿ ಟಿಎಂಸಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತು. ಈ ಘಟನೆಯಲ್ಲಿ ಪೋಟ್ಲಾ ಎಂದೇ ಜನಪ್ರಿಯತೆ ಪಡೆದಿದ್ದ ಟಿಎಂಸಿ ಕಾರ್ಯಕರ್ತ ಸಂಜೀವ್‌ ದಾಸ್‌(Sanjeev Das) ಹತ್ಯೆಯಾಗಿದ್ದಾರೆ.

ನಿನ್ನೆ ತಡರಾತ್ರಿ ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಒಟ್ಟು 11 ಕೇಸ್‌ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ

ಮತ್ತೊಂದೆಡೆ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ವಿಡಿಯೋವನ್ನು ಬಿಜೆಪಿ ಐಟಿ ಸೆಲ್‌ ನಿರ್ವಾಹಕ ಅಮಿತ್‌ ಮಾಳವಿಯಾ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ. ಬಿಜೆಪಿ ಕಸ್ಬಾ ಮಂಡಲ ಅಧ್ಯಕ್ಷೆ ಸರಸ್ವತಿ ಸರ್ಕಾರ್‌ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಬಂಗಾಳದ ಜನತೆ ಇದಕ್ಕೆ ತಕ್ಕ ಪಾಠ ಕಲಿಸೇ ಕಲಿಸುತ್ತಾರೆ.

ಇದನ್ನೂ ಓದಿ:Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

ಸರಸ್ವತಿ ಗಂಭೀರವಾಗಿ ಗಾಯಗೊಂಡು ಪೊಲೀಸ್‌ ಠಾಣೆಯಲ್ಲಿ ಕುಳಿತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ಯಾನರ್‌ ಕಟ್ಟುತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರ ಮೇಲೆ ಗೂಂಡಾಗಳು ದಾಳಿ ಮಾಡಿದ್ದರು, ಅದನ್ನು ತಡೆಯಲು ಮುಂದಾದ ಸರಸ್ವತಿ ಮೇಲೆ ದಾಳಿ ನಡೆದಿದೆ. ಇನ್ನು ಟಿಎಂಸಿ ಗೂಂಡಾ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

 
    
  


  

   

Exit mobile version