ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು (Terrorists Killed) ಯೋಧರು ಹೊಡೆದುರುಳಿಸಿದ್ದಾರೆ. ಸೋಪೊರ್ ಪ್ರದೇಶದಲ್ಲಿ ರಾತ್ರಿಯಿಂದಲೇ ಯೋಧರು ಕಾರ್ಯಾಚರಣೆ ಕೈಗೊಂಡಿದ್ದು, ಹಲವು ಗಂಟೆಗಳ ಶೋಧದ ಬಳಿಕ ಇಬ್ಬರನ್ನು ಎನ್‌ಕೌಂಟರ್ ಮಾಡಿದ್ದಾರೆ.
“ಸೊಪೊರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಯೋಧರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರೂ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ, ಗುಂಡಿನ ಚಕಮಕಿಯಲ್ಲಿ ಮೇಲುಗೈ ಸಾಧಿಸಿದ ಯೋಧರು ಇಬ್ಬರನ್ನು ಹೊಡೆದುರುಳಿಸಿದ್ದಾರೆ” ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
“ಇಬ್ಬರು ಉಗ್ರರನ್ನು ಮೊಹಮ್ಮದ್ ರಫಿ ಹಾಗೂ ಕೈಸರ್ ಅಶ್ರಫ್ ಎಂದು ಗುರುತಿಸಲಾಗಿದೆ. ಇಬ್ಬರೂ ಹಲವು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ನಾಗರಿಕರ ಹತ್ಯೆಗೆ ಸಂಚು ರೂಪಿಸುತ್ತಿದ್ದರು” ಎಂದು ತಿಳಿಸಿದ್ದಾರೆ. ಯೋಧರು ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆಗೈದ ಕಾರಣ ಅನಾಹುತವೊಂದು ತಪ್ಪಿದಂತಾಗಿದೆ.
ಇದನ್ನೂ ಓದಿ | ರಾಜೌರಿ ಸೇನಾನೆಲೆಯಲ್ಲಿ ಆತ್ಮಹತ್ಯಾ ದಾಳಿ, ಮೂವರು ಯೋಧರ ಸಾವು, ಇಬ್ಬರು ಉಗ್ರರ ಹತ್ಯೆ