Site icon Vistara News

ಕಾಶ್ಮೀರದ ಉರಿಯಲ್ಲಿ ಇಬ್ಬರು ಉಗ್ರರನ್ನು ಕೊಂದು ಹಾಕಿದ ಭದ್ರತಾ ಪಡೆಗಳು

two terrorists killed in Uri, Kashmir Says Jammu and Kashmir police

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ(Terrorists Killed). ಕಾಶ್ಮೀರದ ಉರಿಯಲ್ಲಿ (Uri Town) ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ(Jammu and Kashmir Police). ಉರಿಯಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸಿದವು ಎಂದು ಅವರು ಹೇಳಿದ್ದಾರೆ.

ಕಳೆದ ವಾರ ನವೆಂಬರ್ 11 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪರಿಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯಿತು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಅಧಿಕಾರಿಗಳ ಪ್ರಕಾರ, ಪರಿಗಮ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ಸೇನೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಆರಂಭದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲಕಾಲ ಗುಂಡಿನ ಚಕಮಕಿ ನಡೆದಿದ್ದು, ನಂತರ ಬಿಗಿ ಬಂದೋಬಸ್ತ್ ಮಾಡಲಾಗಿದೆ ಮತ್ತು ಶೋಧವನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಎರಡು ದಿನಗಳ ಮೊದಲು, ಕಾಶ್ಮೀರದ ಶೋಪಿಯಾನ್‌ನಲ್ಲಿ ಭೀಕರ ಎನ್‌ಕೌಂಟರ್ ನಡೆದಿತ್ತು ಮತ್ತು ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿಖರ ಮಾಹಿತಿ ನೀಡಿದ ನಂತರ ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಾಲನ್ ಪ್ರದೇಶದಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ನ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದು ಹಾಕಿದ್ದವು. ಅಕ್ಟೋಬರ್ 26 ರಂದು ಕುಪ್ವಾರ ಜಿಲ್ಲೆಯ ಮಚ್ಚಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದರು ಮತ್ತು ಅಕ್ಟೋಬರ್ 22 ರಂದು ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ವಿಫಲ ನುಸುಳುವಿಕೆ ಪ್ರಯತ್ನದಲ್ಲಿ ಇಬ್ಬರನ್ನು ಕೊಂದು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಸುದ್ದಿಯನ್ನೂ ಓದಿ: ದೀಪಾವಳಿ ಆಚರಣೆ ವೇಳೆ ಹಿಂದುಗಳ ಮೇಲೆ ಖಲಿಸ್ತಾನಿಗಳ ದಾಳಿ; ಕಲ್ಲು ತೂರಿದ ಉಗ್ರರು!

Exit mobile version