ಜೆರುಸಲೇಂ: ಇಸ್ರೇಲ್ ಮೇಲೆ ಗಾಜಾಪಟ್ಟಿಯ ಉಗ್ರರು ಸಾವಿರಾರು ರಾಕೆಟ್‌ಗಳೊಂದಿಗೆ ದಾಳಿ ನಡೆಸಿದ್ದು, ಸಾವಿರಾರು ಜನ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಇಸ್ರೇಲ್ ಕೂಡ ಗಾಜಾಪಟ್ಟಿ ಮೇಲೆ ನಿರಂತರವಾಗಿ ದಾಳಿ (Israel Palestine War) ನಡೆಸುತ್ತಿದೆ. ಇದರ ಬೆನ್ನಲ್ಲೇ, ಭಾರತ, ಅಮೆರಿಕ ಸೇರಿ ಹಲವು ರಾಷ್ಟ್ರಗಳು ಇಸ್ರೇಲ್‌ಗೆ ಬೆಂಬಲ ಘೋಷಿಸಿವೆ. ಇಸ್ರೇಲ್‌ಗೆ ಬೆಂಬಲ ಘೋಷಿಸಿದ ರಾಷ್ಟ್ರಗಳ ಪಟ್ಟಿಗೆ ಬ್ರಿಟನ್ ಕೂಡ ಸೇರಿದೆ. ಅದರಲ್ಲೂ, ಬ್ರಿಟನ್ ಸಂಸತ್ ಮೇಲೆ (Britain Parliament) ಇಸ್ರೇಲ್ ಧ್ವಜವನ್ನು ಸಾರುವ ನೀಲಿ ಹಾಗೂ ಬಣ್ಣದ ಲೈಟ್‌ಗಳನ್ನು ಬೆಳಗುವ ಮೂಲಕ ನಾವು ಇಸ್ರೇಲ್ ಪರ ಎಂಬ ಸಂದೇಶ ಸಾರಿದೆ.
ಅಷ್ಟೇ ಅಲ್ಲ, ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ಶ್ವೇತ ಭವನ, ನ್ಯೂಯಾರ್ಕ್ ನಗರದಲ್ಲಿರುವ ಎಂಪೈರ್ ಸ್ಟೇಡ್ ಕಟ್ಟಡ, ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ ಸೇರ ಹಲವು ಕಟ್ಟಡಗಳು ನೀಲಿ ಹಾಗೂ ಬಿಳಿ ಬಣ್ಣಗಳಿಂದ ಕಂಗೊಳಿಸುವ ಮೂಲಕ ಇಸ್ರೇಲ್‌ಗೆ ಬೆಂಬಲ ಸೂಚಿಸಲಾಗಿದೆ. ಹಾಗೆಯೇ, ಐಫೆಲ್ ಟವರ್ ಮೇಲೆ ನೀಲಿ ಹಾಗೂ ಬಿಳಿ ಬಣ್ಣಗಳ ಲೈಟ್ ಉರಿಸುವ ಜತೆಗೆ ಇಸ್ರೇಲ್ ರಾಷ್ಟ್ರಗೀತೆಯನ್ನೂ ಮೊಳಗಿಸಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಇಸ್ರೇಲ್‌ಗೆ ಭಾರತ, ಅಮೆರಿಕ, ಇಟಲಿ, ಜರ್ಮನಿ, ಬ್ರಿಟನ್ ಸೇರಿ ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿವೆ.
#WATCH | UK: The British Parliament lit up in blue and white in solidarity with Israel tonight. pic.twitter.com/LZtyCZNRqL
— ANI (@ANI) October 10, 2023
ಇಸ್ರೇಲ್‌ಗೆ ಭಾರತ ಬೆಂಬಲ ಘೋಷಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ, ಇಸ್ರೇಲ್ ಮತ್ತು ಹಮಾಸ್ ಮಧ್ಯೆ ನಡೆಯುತ್ತಿರುವ ಕಾಳಗದ ಕುರಿತು ವಿಸ್ತಾರ ಮಾಹಿತಿ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹಂಚಿಕೊಂಡಿದ್ದಾರೆ. ತಮ್ಮ ದೂರವಾಣಿ ಸಂಭಾಷಣೆ ವೇಳೆ, ಈ ಸಂಕಷ್ಟದ ಸ್ಥಿತಿಯ್ಲಲಿ ಭಾರತವು ಇಸ್ರೇಲ್ ಜತೆಗೆ ನಿಲ್ಲಲಿದೆ. ಭಾರತವು ಎಲ್ಲ ರೀತಿಯ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಅವರಿಗೆ ತಿಳಿಸಿದ್ದಾರೆ.
ಅಮೆರಿಕದ ಶ್ವೇತಭವನ
ಇದನ್ನೂ ಓದಿ: Israel Palestine War: ದಾಳಿ ಮಾಡಿದವರೇ ದಿವಾಳಿ; ಗಾಜಾ ಇಸ್ರೇಲ್ ವಶಕ್ಕೆ, 3 ಸಾವಿರ ಜನ ಸಾವು
3 ಸಾವಿರ ದಾಟಿದ ಸಾವಿನ ಸಂಖ್ಯೆ
ಮತ್ತೊಂದೆಡೆ, ಎರಡೂ ದೇಶಗಳಲ್ಲಿ ನಡೆಯುತ್ತಿರುವ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 3 ಸಾವಿರ ದಾಟಿದೆ ಎಂದು ತಿಳಿದುಬಂದಿದೆ. ಗಾಜಾಪಟ್ಟಿ ಮೇಲೆ ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಿರುವ ಕಾರಣ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದೆ ಎನ್ನಲಾಗಿದೆ. ಇಸ್ರೇಲ್‌ನಲ್ಲೂ ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಾವು ಯುದ್ಧ ಆರಂಭಿಸಿಲ್ಲ. ಆದರೆ ಮುಗಿಸುತ್ತೇವೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈಗಾಗಲೇ ಘೋಷಿಸಿದ್ದಾರೆ.