Site icon Vistara News

Bihar Bridge Collapse: ರೈಲು ದುರಂತ ಬೆನ್ನಲ್ಲೇ ಬಿಹಾರದಲ್ಲಿ ಸೇತುವೆ ಕುಸಿತ; 1,700 ಕೋಟಿ ರೂ. ಗಂಗಾ ನದಿ ಪಾಲು

Bridge Collapses In Bihar

Under construction bridge collapses in Bihar

ಪಟನಾ: ಒಡಿಶಾದ ಬಾಲಾಶೋರ್‌ ಜಿಲ್ಲೆ ಬಹನಗ ರೈಲು ನಿಲ್ದಾಣದ ಬಳಿ ನಡೆದ ತ್ರಿವಳಿ ರೈಲು ದುರಂತದಿಂದ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ದುರಂತದ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಇನ್ನು ಇದರ ಬೆನ್ನಲ್ಲೇ, ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದು (Bihar Bridge Collapse) ಬಿದ್ದಿದೆ.

ಭಾಗಲ್ಪುರ ಜಿಲ್ಲೆಯ ಮೂಲಕ ಹಾದುಹೋಗುವ ಗಂಗಾ ನದಿಗೆ ಅಡ್ಡಲಾಗಿ, ಖಗಾರಿಯಾ, ಅಗುವಾನಿ ಮತ್ತು ಸುಲ್ತಾನ್‌ಗಂಜ್‌ ಮಧ್ಯೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ ಅಗುವಾನಿ ಸುಲ್ತಾನ್‌ಗಂಜ್‌ ಗಂಗಾ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ಇದು ಭಾನುವಾರ ಏಕಾಏಕಿ ಕುಸಿದಿದೆ. ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇಲ್ಲಿದೆ ವಿಡಿಯೊ

ಏಪ್ರಿಲ್‌ನಲ್ಲೇ ಹಾನಿ ಆಗಿತ್ತು

ಕಳೆದ ಏಪ್ರಿಲ್‌ ತಿಂಗಳಲ್ಲಿಯೇ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಸೇತುವೆಗೆ ಹಾನಿಯಾಗಿತ್ತು. ಆಗಲೇ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ, ಸೇತುವೆ ನಿರ್ಮಾಣ ಮಾಡುತ್ತಿರುವ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರು ಎಚ್ಚೆತ್ತುಕೊಂಡಿಲ್ಲ. ಹಾಗಾಗಿಯೇ, ನಿರ್ಮಾಣ ಹಂತದಲ್ಲಿರುವ ಸೇತುವೆಯು ಕುಸಿದಿದೆ. ಇದರಿಂದ 1,700 ಕೋಟಿ ರೂಪಾಯಿ ಗಂಗಾನದಿ ಪಾಲಾಗಿದೆ. ಕಳಪೆ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತನಿಖೆಗೆ ಆದೇಶಿಸಿದ ನಿತೀಶ್‌ ಕುಮಾರ್

ನಿತೀಶ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಭಾಗಲ್ಪುರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದ ಬೆನ್ನಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಯಾವುದೇ ದುರಂತ ಸಂಭವಿಸಿದರೂ ಆಯೋಗ ರಚಿಸುವುದು ರಾಜ್ಯ ಸರ್ಕಾರಕ್ಕೆ ರೂಢಿಯೇ ಆಗಿದೆ. ಆದರೆ, ಯಾವುದೇ ಕ್ರಮ ಮಾತ್ರ ತೆಗೆದುಕೊಳ್ಳುವುದಿಲ್ಲ. ಭಾಗಲ್ಪುರದಲ್ಲಿ ಸೇತುವೆ ಕುಸಿದಿರುವುದು ನಿತೀಶ್‌ ಕುಮಾರ್‌ ಸರ್ಕಾರದ ಭ್ರಷ್ಟಾಚಾರ, ಆಡಳಿತದ ಅರಾಜಕತೆಗೆ ಸಾಕ್ಷಿಯಾಗಿದೆ” ಎಂದು ಬಿಜೆಪಿ ನಾಯಕ ವಿಜಯ್‌ ಕುಮಾರ್‌ ಸಿನ್ಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಗ್ಗೆ ತುರ್ತು ಸೇವೆಗಳಿಗೆ ತಕ್ಷಣ ಮಾಹಿತಿ ನೀಡಿದ್ದು, ರಜಾದಲ್ಲಿದ್ದ ಎನ್​ಡಿಆರ್​​ಎಫ್ ಯೋಧ!

ಕಳೆದ ವರ್ಷ ಮೊರ್ಬಿ ಸೇತುವೆ ಕುಸಿತ

ಕಳೆದ ವರ್ಷ ಗುಜರಾತ್‌ನ ಮೊರ್ಬಿಯಲ್ಲಿರುವ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗುಸೇತುವೆ ದುರಂತ ಸಂಭವಿಸಿತ್ತು. ಮೊರ್ಬಿ ಸೇತುವೆ ಕುಸಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ದುರಂತದಲ್ಲಿ 140ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಈ ಸೇತುವೆ ದುರಸ್ತಿಯಾದ ಒಂದೇ ವಾರದಲ್ಲಿ ಸೇತುವೆ ಕುಸಿದ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

Exit mobile version