Site icon Vistara News

Union budget 2023 : ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5200 ಕೋಟಿ ರೂ.

Upper Bhadra project

#image_title

ನವ ದೆಹಲಿ: ಮಧ್ಯ ಕರ್ನಾಟಕದ ಕೃಷಿಗೆ ವರದಾನವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ೫೨೦೦ ಕೋಟಿ ರೂ. ಪ್ರಕಟಿಸಲಾಗಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಹಂತದಲ್ಲಿದ್ದು, ಈ ಭಾಗದ ಜನರಿಗೆ ಅನುಕೂಲವಾಗಲಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ.

ಏನಿದು ಭದ್ರಾ ಮೇಲ್ದಂಡೆ ಯೋಜನೆ?

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರಾವರಿ ಅಗತ್ಯವನ್ನು ಪೂರೈಸುವ ಮಹತ್ವದ ಯೋಜನೆ ಇದಾಗಿದೆ.

ಇದರ ಮೊದಲನೇ ಹಂತದಲ್ಲಿ ತುಂಗಾ ನದಿಯಿಂದ17.40 ಟಿ.ಎಂ.ಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ನೀರು ಹರಿಸುವ, ಕಾಮಗಾರಿ ಪ್ರಗತಿಯಲ್ಲಿದೆ.

ಭದ್ರಾ ಜಲಾಶಯದಿಂದ29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವ, ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿರುತ್ತವೆ.

ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ, ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿರುತ್ತವೆ.

ಎರಡನೇ ಹಂತದಲ್ಲಿ ತರೀಕೆರೆ ತಾಲ್ಲೂಕಿನ20,150 ಹೇಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಮೂಲಕ ನೀರನ್ನು ಒದಗಿಸುವುದು ಹಾಗೂ79 ಕೆರೆಗಳನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು 02 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ.

ಚಿತ್ರದುರ್ಗ ಶಾಖಾ ಕಾಲುವೆ: 134.597 ಕಿ.ಮೀ ಉದ್ದದ ಕಾಲುವೆ ಮುಖಾಂತರ ಚಿಕ್ಕಮಗಳೂರು ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ1,07,265 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ157 ಕೆರೆಗಳಿಗೆ ನೀರನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು12 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

ತುಮಕೂರು ಶಾಖಾ ಕಾಲುವೆ:159.684 ಕಿ.ಮೀ. ಉದ್ದದ ಕಾಲುವೆ ಮುಖಾಂತರ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ84,900 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ131 ಕೆರೆಗಳಿಗೆ ನೀರನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು09 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ.

ಹನಿ ನೀರಾವರಿ: ಚಿತ್ರದುರ್ಗ ಶಾಖಾ ಕಾಲುವೆಯ40749 ಹೆ. ಪ್ರದೇಶಕ್ಕೆ, ತುಮಕೂರು ಶಾಖಾ ಕಾಲುವೆಯಡಿ27590 ಹೆ. ಪ್ರದೇಶಕ್ಕೆ ಮತ್ತು ಜಗಳೂರು ಶಾಖಾ ಕಾಲುವೆಯಡಿ24123 ಹೆ. ಪ್ರದೇಶಕ್ಕೆ ಹನಿ ನೀರವಾರಿ ಸೌಲಭ್ಯ ಕಲ್ಪಿಸುವ ಮತ್ತು ಕೆರೆ ತುಂಬಿಸುವ ಕಾಮಗಾರಿಗಳನ್ನು 07 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.ಕೆರೆ ತುಂಬಿಸುವ ಕಾಮಗಾರಿಗಳು: ಚಿತ್ರದುರ್ಗ ಶಾಖಾ ಕಾಲುವೆಯಿಂದ ಕವಲೊಡೆಯುವ ಹೊಳಲ್ಕೆರೆ, ಪಾವಗಡ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಹಾಗೂ ತುಮಕೂರು ಶಾಖಾ ಕಾಲುವೆಯಿಂದ ಕವಲೊಡೆಯುವ ಶಿರಾ, ಹಿರಿಯೂರು ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಫಿಡರ್ ಕಾಮಗಾರಿಗಳನ್ನು ೦೯ ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ : Union Budget 2023: ಕೃಷಿ ಸಾಲ ವಿತರಣೆಯ ಗುರಿ 20 ಲಕ್ಷ ಕೋಟಿ ರೂ.ಗೆ ಏರಿಕೆ

Exit mobile version