Site icon Vistara News

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

Union Budget 2024

Income Tax Slabs: Will FM Nirmala Sitharaman Change Tax Rates in Budget 2024?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು, ನೂತನ ಸರ್ಕಾರ ರಚನೆಯಾಗುತ್ತಲೇ ಮೊದಲ ಬಜೆಟ್‌ ಮಂಡನೆ (Union Budget 2024) ಮಾಡಲಾಗುತ್ತದೆ. ಅದರಂತೆ, ಜುಲೈ 15-21ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವಾರದಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವಾಲಯದ ಅಧಿಕಾರಿಗಳು ಸೇರಿ ಹಲವರೊಂದಿಗೆ ಸಭೆ, ಸಮಾಲೋಚನೆ ನಡೆಸುವ ಮೂಲಕ ಬಜೆಟ್‌ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲಿದ್ದಾರೆ. ಅಷ್ಟೇ ಅಲ್ಲ, ಜೂನ್‌ 22ರಂದು ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ 53ನೇ ಜಿಎಸ್‌ಟಿ ಸಮಿತಿ ಸಭೆ ನಡೆಯಲಿದ್ದು, ಅಧಿಕಾರಿಗಳ ಸಲಹೆ-ಸೂಚನೆಗಳನ್ನೂ ಸಚಿವೆ ಪಡೆಯಲಿದ್ದಾರೆ. ಬಜೆಟ್‌ ಮಂಡನೆ ದೃಷ್ಟಿಯಿಂದ ಜಿಎಸ್‌ಟಿ ಸಮಿತಿ ಸಭೆಯು ಕೂಡ ಪ್ರಾಮುಖ್ಯತೆ ಪಡೆದಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: G7 Summit: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೋದಿ ಮೊದಲ ವಿದೇಶ ಪ್ರವಾಸ; ಇಟಲಿಯ ಜಿ7 ಶೃಂಗಸಭೆಯಲ್ಲಿ ಭಾಗಿ

Exit mobile version