ನವದೆಹಲಿ: ದೇಶದ ಜನ ಕುತೂಹಲದಿಂದ, ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್ ಮಂಡನೆಗೆ (Union Budget 2024) ಕೆಲವೇ ಕ್ಷಣಗಳು ಬಾಕಿ ಇವೆ. ಏಳನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಿರೀಕ್ಷೆಯಂತೆ ತೆರಿಗೆ ವಿನಾಯಿತಿ ಮತ್ತು ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಗಳನ್ನು ಹೆಚ್ಚಳ ಮುಂತಾದ ವಿಚಾರಗಳಿಗೆ ಒತ್ತು ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
2023ರ ಬಜೆಟ್‌ನಲ್ಲಿ, ಹೊಸ ತೆರಿಗೆ ಕಾಯ್ದೆ ಅಡಿಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ರೂ 50,000 ರಿಂದ ರೂ 3 ಲಕ್ಷಕ್ಕೆ ಹೆಚ್ಚಿಸಿದರು ಮತ್ತು ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 87 ಎ ಅಡಿಯಲ್ಲಿ ರಿಯಾಯಿತಿಯನ್ನು ರೂ 5 ಲಕ್ಷದಿಂದ ರೂ 7 ಲಕ್ಷಕ್ಕೆ ಏರಿಕೆ ಮಾಡಲಾಯಿತು. ಅಂದರೆ ರೂ 7 ಲಕ್ಷದವರೆಗೆ ಆದಾಯ ಹೊಂದಿರುವವರು ಹೊಸ ಆಡಳಿತದಲ್ಲಿ ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
ಆದಾಯ ತೆರಿಗೆ ಸ್ಲ್ಯಾಬ್ | ಪ್ರಸ್ತುತ ಇರುವ ತೆರಿಗೆ | ಈ ಬಾರಿ ನಿರೀಕ್ಷಿತ ತೆರಿಗೆ |
0-2,50,000 | 0% | 0% |
2,50,001-3,00,000 | 5% | 0% |
3,00,001-5,00,000 5% 5% | 5% | 5% |
500,001-6,00,000 | 20% | 5% |
6,00,001-9,00,000 | 20% | 10% |
9,00,001-10,00,000 | 20% | 15% |
10,00,001-12,00,000 | 30% | 15% |
12,00,000-15,00,000 | 30% | 20% |
15,00,0001 & Above | 30% | 30% |
ಇನ್ನು ಇದರ ಹೊರತಾಗಿ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ಸಂಬಳದಾರರು ಹೂಡಿಕೆ ಹಾಗೂ ವೆಚ್ಚಗಳ ಮೇಲೆ ವಾರ್ಷಿಕವಾಗಿ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯುತ್ತಾರೆ. ಗೃಹ ಸಾಲದ ಅಸಲು, ಬಡ್ಡಿ, ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತ, ಪಿಪಿಎಫ್ ಹೂಡಿಕೆ ಸೇರಿ ಹಲವು ರೀತಿಯ ಹೂಡಿಕೆಗಳು ಹಾಗೂ ವೆಚ್ಚಗಳ ಮೂಲಕ 1.5 ಲಕ್ಷರೂ.ಗೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ. ಈ ಮೊತ್ತವನ್ನು ಕೇಂದ್ರ ಸರ್ಕಾರವು 1.5 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದರಿಂದ ಮಧ್ಯಮ ವರ್ಗದವರಿಗೆ ಭಾರಿ ಅನುಕೂಲವಾಗಲಿದೆ.
ಸಂಬಳ ಪಡೆಯುವ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತವನ್ನು 70 ಸಾವಿರ ರೂ. ಅಥವಾ ಒಂದು ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ, ಹೊಸ ಹಾಗೂ ಹಳೆಯ ತೆರಿಗೆ ಪದ್ಧತಿಯಲ್ಲೂ 50 ಸಾವಿರ ರೂ. ಸ್ಟಾಂಡರ್ಡ್ ಡಿಡಕ್ಷನ್ ಇದೆ. ಇದನ್ನು, 1 ಲಕ್ಷ ರೂ.ಗೆ ಏರಿಕೆ ಮಾಡಿದರೆ, ಸಂಬಳದಾರರು ಹೆಚ್ಚಿನ ತೆರಿಗೆ ಹಣವನ್ನು ಉಳಿತಾಯ ಮಾಡಬಹುದಾಗಿದೆ. ಹಣದುಬ್ಬರ ಏರಿಕೆ ಸೇರಿ ಹಲವು ಕಾರಣಗಳಿಂದಾಗಿ ಸ್ಟಾಂಡರ್ಡ್ ಡಿಡಕ್ಷನ್ ಅಥವಾ ತೆರಿಗೆ ವಿನಾಯಿತಿ ಮೊತ್ತವನ್ನು ಏರಿಕೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಹಾಗಾಗಿ, ಮೊತ್ತವನ್ನು ಏರಿಕೆ ಮಾಡಲು ನಿರ್ಮಲಾ ಸೀತಾರಾಮನ್ ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಟಾಂಡರ್ಡ್ ಡಿಡಕ್ಷನ್ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್ ಡಿಡಕ್ಷನ್ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ.
ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Union Budget 2024 Live: ನಿರ್ಮಲಾ ಬಜೆಟ್‌ನಲ್ಲಿ ಯಾರಿಗೆಲ್ಲ ಸಿಹಿ? ಬಜೆಟ್ ಮಂಡನೆಯ ಲೈವ್ ಇಲ್ಲಿ ವೀಕ್ಷಿಸಿ