Site icon Vistara News

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Union Budget 2024

8th Pay Commission, DA Arrears, Old Pension Scheme: Govt Employee Union Has 7 Demands Ahead of Union Budget 2024

ಹೊಸದಿಲ್ಲಿ: ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್‌ಗೆ (Union Budget 2024) ದಿನಾಂಕ ದಿನಗಣನೆ ಶುರುವಾಗಿದೆ. ಜುಲೈ 23ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆ ಇದೆ ಎಂದು ಗೋಲ್ಡ್‌ಮ್ಯನ್‌ ಸ್ಯಾಚ್ಸ್‌ನ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

ಈ ಬಾರಿ ಬಜೆಟ್‌ನಲ್ಲಿ ವಾಣಿಜ್ಯ ವಿಮಾನ ತಯಾರಿಕೆಯ ಜೊತೆಗೆ ಆಟಿಕೆಗಳು, ಜವಳಿ ಮತ್ತು ಉಡುಪುಗಳ ತಯಾರಿಕೆಯಂತಹ ಕೈಗಾರಿಕಾ ವಲಯಗಳಿಗೆ ಹಣಕಾಸಿನ ಪ್ರೋತ್ಸಾಹ ನೀಡುವ ನಿರೀಕ್ಷೆ ಇದೆ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ:Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Exit mobile version