Site icon Vistara News

Budget 2024 Live Updates: ಬಜೆಟ್‌ ಮುಕ್ತಾಯ; ಆದಾಯ ತೆರಿಗೆಯಲ್ಲಿ ಬದಲಾವಣೆ ಮಾಡದ ಕೇಂದ್ರ

Finance Minister Nirmala Sitharaman presented White paper about UPA period

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್‌ (Budget 2024) ಪ್ರಮುಖವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಯಾವ ಬಂಪರ್‌ ಘೋಷಣೆ ಮಾಡಿದ್ದಾರೆ? ಯಾವ ಕ್ಷೇತ್ರಕ್ಕೆ ಎಷ್ಟು ಬಜೆಟ್‌ ಸಿಕ್ಕಿದೆ? ರೈತರು, ಸಾಮಾನ್ಯ ಜನ, ಮಧ್ಯಮ ವರ್ಗದವರು, ಮಹಿಳೆಯರಿಗೆ ಬಜೆಟ್‌ ಹೇಗೆ ವರದಾನ ಎಂಬುದರ ಕುರಿತ ಕ್ಷಣಕ್ಷಣದ (Budget 2024 Live Updates) ಮಾಹಿತಿ ಇಲ್ಲಿದೆ.

Adarsha Anche

Budget 2024: ಆರ್ಥಿಕತೆಗೆ ಬೂಸ್ಟ್‌ ನೀಡಿದ ಮೋದಿ;‌ ಗಂಡನ ಹಣ ಕಿತ್ತು ಹೆಂಡ್ತಿಗೆ ಕೊಡ್ತಾರಾ ಸಿದ್ದರಾಮಯ್ಯ ಎಂದ ಬಿಜೆಪಿ!

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹಾಗೂ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸ್ವಾಗತ ಮಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಾವ ರೀತಿ ಬಜೆಟ್‌ ಮಂಡಿಸುತ್ತಾರೆ ಎನ್ನುವುದು ಕುತೂಹಲವಾಗಿದೆ. ಗಂಡನ ಹಣವನ್ನು ಕಿತ್ತು ಹೆಂಡತಿಗೆ ಕೊಡುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.

Budget 2024: ಆರ್ಥಿಕತೆಗೆ ಬೂಸ್ಟ್‌ ನೀಡಿದ ಮೋದಿ;‌ ಗಂಡನ ಹಣ ಕಿತ್ತು ಹೆಂಡ್ತಿಗೆ ಕೊಡ್ತಾರಾ ಸಿದ್ದರಾಮಯ್ಯ ಎಂದ ಬಿಜೆಪಿ!
Adarsha Anche

Budget 2024: ಕೇಂದ್ರ ಬಜೆಟ್‌ಗೆ FKCCI ಸಂತಸ; ಭವಿಷ್ಯದ ಭಾರತ ಬಗ್ಗೆ ಸ್ಪಷ್ಟತೆ

ಯಾವ ರೀತಿ ದೇಶವನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂಬುದನ್ನು ಕೇಂದ್ರ ಸರ್ಕಾರ ವಿವರಿಸಿದೆ. ಕನೆಕ್ಟಿವಿಟಿ, ಇನ್ಫ್ರಾಸ್ಟ್ರಕ್ಚರ್‌ಗೆ ಪ್ರಾಮುಖ್ಯತೆಯನ್ನು ಕೊಟ್ಟಿದ್ದಾರೆ. ಸ್ಟಾರ್ಟಪ್‌ಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಣವನ್ನು ಮೀಸಲಿಟ್ಟಿದ್ದಾರೆ. ಉತ್ತಮ ಬಜೆಟ್‌ ಇದಾಗಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಹೇಳಿದ್ದಾರೆ.

https://vistaranews.com/politics/fkcci-happy-with-union-budget-2024-clarity-on-the-future-of-india/570771.html

B Somashekhar

7 ಲಕ್ಷ ರೂ. ಆದಾಯದವರೆಗೆ ತೆರಿಗೆ ಇರಲ್ಲ

ಹೊಸ ತೆರಿಗೆ ಪದ್ಧತಿ ಅನ್ವಯ 7 ಲಕ್ಷ ರೂಪಾಯಿವರೆಗೆ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು. ನೇರ ತೆರಿಗೆ, ಪರೋಕ್ಷ ತೆರಿಗೆ ಹಾಗೂ ಆಮದು ಸುಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಿದರು.

B Somashekhar

ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ

ಮೀನುಗಾರರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಮೀನುಗಾರಿಕೆಗೆ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದರು.

B Somashekhar

‌9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

ಗರ್ಭಕೋಶ ಕ್ಯಾನ್ಸರ್‌ ತಡೆಗಾಗಿ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದರು.

Exit mobile version